
ಬೆಂಗಳೂರು: ನೂತನ ಕಾಂಗ್ರೆಸ್ ಸರ್ಕಾರವು ಅಧಿಕಾರ ಸ್ವೀಕರಿಸಿದಂದಿನಿಂದಲೂ ಆಡಳಿತದಲ್ಲಿ ಹಲವು ಬದಲಾವಣೆಗಳನ್ನು ಮಾಡುತ್ತಿದ್ದು, ಇದೀಗ 14 ಮಂದಿ ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ (IAS Officers Transfer) ಮಾಡಿ ಸೋಮವಾರ ಸಂಜೆ ಆದೇಶಿಸಿದೆ. ಈ ಆದೇಶಕ್ಕೂ ಕೆಲವೇ ಕ್ಷಣಗಳ ಮುನ್ನ ರಾಜ್ಯದ ಎಲ್ಲ ಜಿಲ್ಲೆಗಳಿಗೆ ಉಸ್ತುವಾರಿ ಕಾರ್ಯದರ್ಶಿಗಳನ್ನಾಗಿ ಐಎಎಸ್ ಅಧಿಕಾರಿಗಳನ್ನು ನೇಮಕ ಮಾಡಿ ಆದೇಶ ಹೊರಡಿಸಿತ್ತು. ಜಿಲ್ಲೆಗಳಿಗೆ ಭೇಟಿ ನೀಡಿ ಸರ್ಕಾರದ ಯೋಜನೆಗಳ ಅನುಷ್ಠಾನದ ಬಗ್ಗೆ ಪರಿಶೀಲನೆ ನಡೆಸಿ ಜಿಲ್ಲೆಯ ಅಭಿವೃದ್ಧಿ ಯೋಜನೆಗಳು, ಸ್ಥಿತಿಗತಿ ಬಗ್ಗೆ ಸರ್ಕಾರಕ್ಕೆ ಪ್ರಗತಿ ವರದಿ ಸಲ್ಲಿಸುವ ಹೊಣೆಗಾರಿಕೆಯನ್ನು ಉಸ್ತುವಾರಿ ಕಾರ್ಯದರ್ಶಿಗಳಿಗೆ ವಹಿಸಲಾಗಿದೆ.
ವರ್ಗಾವಣೆಗೊಂಡಿರುವ 14 ಮಂದಿ ಐಎಎಸ್ ಅಧಿಕಾರಿಗಳ ವಿವರ ಇಲ್ಲಿದೆ.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ