ಹೆಚ್ಚೇನು ಇಲ್ಲ, ನಾಲ್ಕು ಕೇಸ್ ಅಷ್ಟೇ ಪತ್ತೆ!

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 14 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ, ವಿಜಯಪುರ, ಹಾವೇರಿ, ಬೆಂಗಳೂರು, ಹಾಸನ, ಮಂಡ್ಯ ಹಾಗೂ ಆಂಧ್ರದ ಅನಂತಪುರ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ. ಬೆಳಗಿನ ವರದಿಯಲ್ಲಿ 10 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಸಂಜೆಯ ವರದಿಯಲ್ಲಿ ನಾಲ್ಕು ಮಂದಿಗೆ ಮಾತ್ರ ಕೊರೊನಾ ಅಟ್ಯಾಕ್ ಆಗಿದೆ. ಗ್ರೀನ್ ಜೋನ್​ನಲ್ಲಿದ್ದ ಹಾಸನ […]

ಹೆಚ್ಚೇನು ಇಲ್ಲ, ನಾಲ್ಕು ಕೇಸ್ ಅಷ್ಟೇ ಪತ್ತೆ!
ಸಾಂಕೇತಿಕ ಚಿತ್ರ
ಸಾಧು ಶ್ರೀನಾಥ್​

Updated on: May 11, 2020 | 6:06 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 14 ಜನರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 862ಕ್ಕೆ ಏರಿಕೆಯಾಗಿದೆ. ದಾವಣಗೆರೆ 3, ಬೀದರ್ 2, ಬಾಗಲಕೋಟೆ 2, ಕಲಬುರಗಿ, ವಿಜಯಪುರ, ಹಾವೇರಿ, ಬೆಂಗಳೂರು, ಹಾಸನ, ಮಂಡ್ಯ ಹಾಗೂ ಆಂಧ್ರದ ಅನಂತಪುರ ಜಿಲ್ಲೆಯ ತಲಾ ಒಬ್ಬರಿಗೆ ಸೋಂಕು ಪತ್ತೆಯಾಗಿದೆ.

ಬೆಳಗಿನ ವರದಿಯಲ್ಲಿ 10 ಮಂದಿಗೆ ಕೊರೊನಾ ವೈರಸ್ ಸೋಂಕು ತಗುಲಿತ್ತು. ಸಂಜೆಯ ವರದಿಯಲ್ಲಿ ನಾಲ್ಕು ಮಂದಿಗೆ ಮಾತ್ರ ಕೊರೊನಾ ಅಟ್ಯಾಕ್ ಆಗಿದೆ. ಗ್ರೀನ್ ಜೋನ್​ನಲ್ಲಿದ್ದ ಹಾಸನ ಮೂಲದ ಮಹಿಳೆಗೂ ಕೊರೊನಾ ಬಂದಿದೆ. ಆದ್ರೆ ಅವರು ಮಂಡ್ಯದ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಹೀಗಾಗಿ ಹಾಸನ ಜಿಲ್ಲೆಯ ಜನತೆ ಆತಂಕ ಪಡುವ ಅಗತ್ಯವಿಲ್ಲ.

862 ಸೋಂಕಿತರ ಪೈಕಿ ಈವರೆಗೆ 426 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದುವರೆಗೂ ಕೊರೊನಾದಿಂದ ರಾಜ್ಯದಲ್ಲಿ 31 ಮಂದಿ ಮೃತಪಟ್ಟಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 5:36 pm, Mon, 11 May 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us