ಕರ್ನಾಟಕದಲ್ಲಿ ಶೇ 14 ರಷ್ಟು ಮಳೆ ಕೊರತೆ; ವಾರಾಂತ್ಯ ಬೆಂಗಳೂರು, ಕರಾವಳಿ ಕರ್ನಾಟಕದಲ್ಲಿ ಮಳೆ ಸಾಧ್ಯತೆ

Karnataka Rains; ಆಗಸ್ಟ್ 20 ರ ಭಾನುವಾರದವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಮುನ್ಸೂಚನೆಯು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅನ್ವಯವಾಗಲಿದೆ ಎಂದು ಇಲಾಖೆ ತಿಳಿಸಿದೆ.

ಕರ್ನಾಟಕದಲ್ಲಿ ಶೇ 14 ರಷ್ಟು ಮಳೆ ಕೊರತೆ; ವಾರಾಂತ್ಯ ಬೆಂಗಳೂರು, ಕರಾವಳಿ ಕರ್ನಾಟಕದಲ್ಲಿ ಮಳೆ ಸಾಧ್ಯತೆ
ಸಾಂದರ್ಭಿಕ ಚಿತ್ರ
Follow us
Ganapathi Sharma
|

Updated on: Aug 17, 2023 | 7:03 PM

ಬೆಂಗಳೂರು, ಆಗಸ್ಟ್ 17: ಈ ವರ್ಷ ಮುಂಗಾರು (Monsoon) ಅವಧಿಯಲ್ಲಿ ಇದುವರೆಗೆ ರಾಜ್ಯದಲ್ಲಿ ಶೇ 14 ರಷ್ಟು ಮಳೆ ಕೊರತೆಯಾಗಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಅಧಿಕಾರಿಗಳು ತಿಳಿಸಿದ್ದಾರೆ. ಅದೇ ರೀತಿ ಸೆಪ್ಟೆಂಬರ್‌ನಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆಯಿದೆ ಎಂದೂ ತಿಳಿಸಿದ್ದಾರೆ. ಸೆಪ್ಟೆಂಬರ್ 1-7ರವರೆಗೆ ರಾಜ್ಯದಾದ್ಯಂತ ಸಾಧಾರಣ ಮಳೆಯಾಗಲಿದೆ ಎಂದು ಅವರು ಮುನ್ಸೂಚನೆ ನೀಡಿದ್ದಾರೆ. ಕರಾವಳಿ ಕರ್ನಾಟಕ ಮತ್ತು ದಕ್ಷಿಣ ಒಳನಾಡಿನಲ್ಲಿ ಕ್ರಮವಾಗಿ ಶೇ 11 ಮತ್ತು 23 ರಷ್ಟು ಮಳೆ ಕೊರತೆ ವರದಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಜೂನ್‌ನಿಂದ ಇಲ್ಲಿಯವರೆಗೆ ವಾಡಿಕೆಯಂತೆ 57.3 ಸೆಂಮೀ ವಾಡಿಕೆ ಮಳೆಯಾಗಬೇಕಿತ್ತು. ಆದರೆ ಈ ಅವಧಿಯಲ್ಲಿ ಕರ್ನಾಟಕದಲ್ಲಿ 49.6 ಸೆಂಮೀ ಮಳೆಯಾಗಿದೆ. ಇದು ಶೇ 14ರಷ್ಟು ಕೊರತೆ ತೋರಿಸಿದೆ. ಸೆಪ್ಟೆಂಬರ್ 1 ರಿಂದ 7 ರವರೆಗೆ ರಾಜ್ಯದಲ್ಲಿ 5 ರಿಂದ 10 ಮಿಮೀ ಮಳೆಯಾಗುವ ನಿರೀಕ್ಷೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿರುವುದಾಗಿ ವರದಿಯಾಗಿದೆ.

ವಾರಾಂತ್ಯ ಬೆಂಗಳೂರು, ಕರಾವಳಿ ಕರ್ನಾಟಕದಲ್ಲಿ ಮಳೆ

ಆಗಸ್ಟ್ 20 ರ ಭಾನುವಾರದವರೆಗೆ ಬೆಂಗಳೂರಿನಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಈ ಮುನ್ಸೂಚನೆಯು ಬೆಂಗಳೂರು ನಗರ ಮತ್ತು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಗೆ ಅನ್ವಯವಾಗಲಿದೆ ಎಂದು ಇಲಾಖೆ ತಿಳಿಸಿದೆ. ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದೆ. ನಗರದ ಕೆಲವು ಪ್ರದೇಶಗಳಲ್ಲಿ ಲಘು ಮಳೆ ಅಥವಾ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ಹವಾಮಾನ ಇಲಾಖೆಯ ಪ್ರಕಾರ, ಬೆಂಗಳೂರಿನಲ್ಲಿ ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಕ್ರಮವಾಗಿ 31 ಮತ್ತು 20 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ.

ಇದನ್ನೂ ಓದಿ: ಉತ್ತರ ಕರ್ನಾಟಕ ರೈತರಿಗೆ ಸಿಹಿ ಸುದ್ದಿ; ಮಳೆ ಕೊರತೆಯ ನಡುವೆಯೂ ಭರ್ತಿಯಾಯ್ತು ಆಲಮಟ್ಟಿ ಜಲಾಶಯ

ಕರಾವಳಿ ಕರ್ನಾಟಕ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಭಾನುವಾರದವರೆಗೆ ಹಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಬೀದರ್, ಕಲಬುರಗಿ ಸೇರಿದಂತೆ ಉತ್ತರ ಒಳನಾಡಿನಲ್ಲಿ ಭಾನುವಾರದವರೆಗೆ ಗುಡುಗು, ಸಿಡಿಲು ಸಹಿತ ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ಎಚ್ಚರಿಕೆ ನೀಡಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್