AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ತುಂಬಿ ಹರಿಯೋ ಕಾಲುವೆ ನೋಡಲು ಹೋಗಿ ಕೊಚ್ಚಿ ಹೋದ ಬಾಲಕ

ಹಾವೇರಿ: ಕಾಲುವೆ ನೀರಿನಲ್ಲಿ 14 ವರ್ಷದ ಬಾಲಕ ಕೊಚ್ಚಿ ಹೋಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ. ಅತಿಯಾದ ಮಳೆಯಿಂದ ದುರ್ಗಾದೇವಿ ಕೆರೆಯು ತುಂಬಿ ಹರಿಯುತ್ತಿತ್ತು. ಈ ವೇಳೆ ಹರಿಯುತ್ತಿದ್ದ ಕಾಲುವೆ ನೋಡಲು ಬಂದ ಶೋಯೆಬ್ ಕಾಲುಜಾರಿ ಕಾಲುವೆಯಲ್ಲಿ ಬಿದ್ದು ನೀರುಪಾಲಾಗಿದ್ದಾನೆ. ಕಾಲುವೆಯ ಬಳಿ ಸ್ಥಳೀಯರಿಂದ ತೀವ್ರ ಶೋಧ ನಡೆಯುತ್ತಿದ್ದು, ಈ ಘಟನೆ ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರ ಗ್ರಾಮದಲ್ಲಿ ರಾತ್ರಿಯಿಡಿ ಸುರಿದ ಧಾರಾಕಾರ ಮಳೆ ಹಿನ್ನೆಲೆ […]

ತುಂಬಿ ಹರಿಯೋ ಕಾಲುವೆ ನೋಡಲು ಹೋಗಿ ಕೊಚ್ಚಿ ಹೋದ ಬಾಲಕ
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:Oct 21, 2019 | 3:30 PM

Share

ಹಾವೇರಿ: ಕಾಲುವೆ ನೀರಿನಲ್ಲಿ 14 ವರ್ಷದ ಬಾಲಕ ಕೊಚ್ಚಿ ಹೋಗಿರುವ ಘಟನೆ ಹಾವೇರಿ ಜಿಲ್ಲೆಯ ಹಿರೇಕೆರೂರು ಪಟ್ಟಣದಲ್ಲಿ ನಡೆದಿದೆ. ಅತಿಯಾದ ಮಳೆಯಿಂದ ದುರ್ಗಾದೇವಿ ಕೆರೆಯು ತುಂಬಿ ಹರಿಯುತ್ತಿತ್ತು. ಈ ವೇಳೆ ಹರಿಯುತ್ತಿದ್ದ ಕಾಲುವೆ ನೋಡಲು ಬಂದ ಶೋಯೆಬ್ ಕಾಲುಜಾರಿ ಕಾಲುವೆಯಲ್ಲಿ ಬಿದ್ದು ನೀರುಪಾಲಾಗಿದ್ದಾನೆ. ಕಾಲುವೆಯ ಬಳಿ ಸ್ಥಳೀಯರಿಂದ ತೀವ್ರ ಶೋಧ ನಡೆಯುತ್ತಿದ್ದು, ಈ ಘಟನೆ ಹಿರೇಕೆರೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

ಹಾವೇರಿ ಜಿಲ್ಲೆ ಸವಣೂರು ತಾಲೂಕಿನ ಹತ್ತಿಮತ್ತೂರ ಗ್ರಾಮದಲ್ಲಿ ರಾತ್ರಿಯಿಡಿ ಸುರಿದ ಧಾರಾಕಾರ ಮಳೆ ಹಿನ್ನೆಲೆ ಬೆಳೆಗಳು ನೀರಿನಲ್ಲಿ ಕೊಚ್ಚಿ ಹೋಗಿವೆ. ಕೊಚ್ಚಿಹೋಗಿರುವ ಬೆಳೆಯನ್ನ ಆಯ್ದುಕೊಂಡು, ಕಾಯ್ದುಕೊಳ್ಳುವ ಕಾರ್ಯದಲ್ಲಿ  ರೈತರು ತೊಡಗಿದ್ದಾರೆ.

ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ ಐದು ಎಕರೆಯಲ್ಲಿ ಬೆಳೆದಿದ್ದ ಶೇಂಗಾ ಬೆಳೆ ಹಳ್ಳದ ನೀರಲ್ಲಿ ಕೊಚ್ಚಿಕೊಂಡು ಹೋಗಿದೆ. ಇದು ನಾಗರಾಜ ಶಾಬಣ್ಣವರ ಎಂಬ ರೈತನಿಗೆ ಸೇರಿದ ಬೆಳೆಯಾಗಿದೆ. ಒಕ್ಕಣಿ ಮಾಡಲು ಕಿತ್ತಿಟ್ಟಿದ್ದ ಶೇಂಗಾ ಬೆಳೆ ಹೀಗೆ ನೀರುಪಾಲು ಆಗಿರುವುದರಿಂದ ಕೈಗೆ ಬಂದ ತುತ್ತು ಬಾಯಿಗೆ ಬಾರದಂತಾಗಿದೆ. ಒಟ್ನಲ್ಲಿ ಮಳೆರಾಯನ ಆರ್ಭಟಕ್ಕೆ ರೈತರು ಕಂಗಾಲಾಗಿದ್ದಾರೆ.

Published On - 3:06 pm, Mon, 21 October 19

Follow Us
sadhu srinath
sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಸಿದ್ದರಾಮಯ್ಯ ಪದತ್ಯಾಗಕ್ಕೆ ಪುತ್ರನಿಗೆ ಹೈಕಮಾಂಡ್ ಬಂಪರ್: ಗುಟ್ಟು ರಟ್ಟು
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಡಿಕೆಶಿ ಪ್ರಮಾಣವಚನ ಯಾವಾಗ-ಎಲ್ಲಿ, ಎಷ್ಟು ಗಂಟೆಗೆ? ಇಲ್ಲಿದೆ ಅಧಿಕೃತ ವಿವರ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
ಶಾಸಕಾಂಗ ಸಭೆಯಲ್ಲಿ ಅಚ್ಚರಿ: ಡಿಕೆಶಿ, ಹೈಕಮಾಂಡ್ ನಾಯಕರು ಕಕ್ಕಾಬಿಕ್ಕಿ
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
‘ಇಂದು ನಮಗೆ ಅತ್ಯಂತ ಭಾವುಕ ದಿನ’: ವೇಣುಗೋಪಾಲ್ ಭಾವುಕ ಮಾತು
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
17 ವರ್ಷಗಳ ಬಳಿಕ ಮಹತ್ವದ ಸ್ಥಾನ ಬಿಟ್ಟುಕೊಟ್ಟ ಸಿದ್ದರಾಮಯ್ಯ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
ಸಿಎಲ್​​​ಪಿ ಸಭೆಗೂ ಮುನ್ನವೇ ಅಜ್ಜಯ್ಯನಿಗೆ ವಿಶೇಷ ಪೂಜೆ ಸಲ್ಲಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
CLP ಸಭೆಗೆ ತೆರಳುವ ಮುನ್ನ ವಿಧಾನಸೌಧದ ಬಾಗಿಲಿಗೆ ನಮಿಸಿದ ಡಿಕೆಶಿ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
RCB ಅಭಿಮಾನಿಗಳಿಗೆ ಬಿಗ್ ಶಾಕ್: ರಸ್ತೆಗಳಲ್ಲಿ ಸಂಭ್ರಮಾಚರಣೆ ಮಾಡಿದ್ರೆ ಕ್ರಮ
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಏಕಾಏಕಿ ಸಲೂನ್​​ ಒಳಗೆ ನುಗ್ಗಿದ ಹೋರಿ; ಸಿಸಿಟಿವಿ ದೃಶ್ಯ ವೈರಲ್!
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?
ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಪ್ರಕ್ರಿಯೆ ಹೇಗೆ?