ಬೆಂಗಳೂರು: ಇಂದು ರಾಜ್ಯದಲ್ಲಿ ಕೊರೊನಾ ಸ್ಫೋಟವಾಗಿದ್ದು, ಹೊಸದಾಗಿ 149 ಜನರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಬೆಳಗಿನ ವರದಿಯಲ್ಲಿ 127 ಜನರಿಗೆ ಕೊರೊನಾ ಅಟ್ಯಾಕ್ ಆಗಿದ್ದು, ಸಂಜೆಯ ವರದಿಯಲ್ಲಿ ಹೊಸದಾಗಿ 22 ಮಂದಿಗೆ ಸೋಂಕು ತಗುಲಿದೆ. ಹಾಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 1395ಕ್ಕೆ ಏರಿಕೆಯಾಗಿದೆ.
ಮಂಡ್ಯ 71, ದಾವಣಗೆರೆ 22, ಶಿವಮೊಗ್ಗ 10, ಕಲಬುರಗಿ 13, ಬೆಂಗಳೂರು 6, ಉಡುಪಿ 4, ಉತ್ತರ ಕನ್ನಡ 4, ಹಾಸನ 3, ಚಿಕ್ಕಮಗಳೂರು 5, ಯಾದಗಿರಿ, ವಿಜಯಪುರ, ರಾಯಚೂರು, ಚಿತ್ರದುರ್ಗ, ಗದಗ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಕೊರೊನಾ ಸೋಂಕು ತಗುಲಿದೆ. 127 ಕೊರೊನಾ ಸೋಂಕಿತರ ಪೈಕಿ 15 ಮಕ್ಕಳಿಗೆ ಸೋಂಕು ಅಟ್ಯಾಕ್ ಆಗಿದೆ.
ಕರ್ನಾಟಕದಲ್ಲಿ ಈವರೆಗೆ 530 ಕೊರೊನಾ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾ ಸೋಂಕಿಗೆ ಇದುವರೆಗೂ 40 ಜನ ಬಲಿಯಾಗಿದ್ದು, 802 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.