ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು 15 ದಿನ ಗಡುವು: ಅಧಿಕಾರಿಗಳಿಗೆ ಡಿಕೆ ಶಿವಕುಮಾರ್​ ತಾಕೀತು

ರಾಜ್ಯ ರಾಜಧಾನಿ ಬೆಂಗಳೂರಿನ ರಸ್ತೆ ಗುಂಡಿಗಳ ಕುರಿತಂತೆ ಟಿವಿ9 ನಿರಂತರ ವರದಿ ಮೂಲಕ ಪಾಲಿಕೆ ಅಧಿಕಾರಿಗಳ ಕಣ್ತೆರೆಸುವ ಕೆಲಸ ಮಾಡುತ್ತ ಬಂದಿದೆ. ಇದೀಗ ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಡಿ.ಕೆ.ಶಿವಕುಮಾರ್ 15 ದಿನಗಳ ಗಡುವು ನೀಡಿದ್ದಾರೆ.

ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು 15 ದಿನ ಗಡುವು: ಅಧಿಕಾರಿಗಳಿಗೆ ಡಿಕೆ ಶಿವಕುಮಾರ್​ ತಾಕೀತು
ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು 15 ದಿನ ಗಡುವು: ಅಧಿಕಾರಿಗಳಿಗೆ ಡಿಕೆ ಶಿವಕುಮಾರ್​ ತಾಕೀತು
Follow us
ಗಂಗಾಧರ​ ಬ. ಸಾಬೋಜಿ
|

Updated on: Sep 01, 2024 | 7:13 PM

ಬೆಂಗಳೂರು, ಸೆಪ್ಟೆಂಬರ್​ 1: ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (bbmp) ವ್ಯಾಪ್ತಿಯಲ್ಲಿ ರಸ್ತೆ ಗುಂಡಿ ಮುಚ್ಚಲು ಬಿಬಿಎಂಪಿ ಮುಖ್ಯ ಆಯುಕ್ತರಿಗೆ ಡಿಸಿಎಂ ಮತ್ತು ಬೆಂಗಳೂರು ಅಭಿವೃದ್ಧಿ ಸಚಿವ ಡಿ.ಕೆ.ಶಿವಕುಮಾರ್​ (DK Shivakumar) 15 ದಿನಗಳ ಗಡುವು ನೀಡಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ರಸ್ತೆ ಗುಂಡಿಗಳ ಬಗ್ಗೆ ಸಾಕಷ್ಟು ದೂರು ಬರುತ್ತಿವೆ. ಹೀಗಾಗಿ ತುರ್ತಾಗಿ ಗಮನಹರಿಸಿ ಗುಂಡಿ ಮುಚ್ಚುವಂತೆ ಡಿ.ಕೆ.ಶಿವಕುಮಾರ್ ತಾಕೀತು ಮಾಡಿದ್ದಾರೆ.

ಮಾಧ್ಯಮ ಪ್ರಕಟಣೆ ಮೂಲಕ ಡಿಸಿಎಂ ಡಿ.ಕೆ.ಶಿವಕುಮಾರ್ ಮಾಹಿತಿ ನೀಡಿದ್ದು, ಸಾರ್ವಜನಿಕರು ರಸ್ತೆ ಗುಂಡಿ ಫೋಟೋ ತೆಗೆದು ಅಪ್​ಲೋಡ್ ವ್ಯವಸ್ಥೆ ಇದ್ದು, ಆ್ಯಪ್​ ಮೂಲಕ ಈಗಾಗಲೇ ಫೋಟೋ ಜೊತೆ ಜನರು ದೂರು ನೀಡಿದ್ದಾರೆ. 15 ದಿನಗಳ ನಂತರ ನಾನೇ ಸ್ವತಃ ಬೆಂಗಳೂರು ಪ್ರದಕ್ಷಿಣೆ ಹಾಕುತ್ತೇನೆ. ಅಷ್ಟರಲ್ಲಿ ರಸ್ತೆ ಗುಂಡಿ ಮುಚ್ಚಬೇಕೆಂದು ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಮತ್ತೆ ಟೋಯಿಂಗ್ ಆರಂಭ: ​ಎರಡೇ ದಿನಕ್ಕೆ ಶತಕ ದಾಟಿದ ವಾಹನಗಳ ಸಂಖ್ಯೆ

ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಗುಂಡಿ ಗಂಡಾಂತರ ಕುರಿತಂತೆ ಟಿವಿ9 ನಿರಂತರ ವರದಿ ಮಾಡುತ್ತ ಬಂದಿದೆ. ನಗರದ ಮುಖ್ಯ ರಸ್ತೆಯಲ್ಲಿ ಗುಂಡಿಗಳದ್ದೆ ಕಾರುಬಾರಾಗಿತ್ತು. ರಸ್ತೆ ಗುಂಡಿಗಳಿಂದ ವಾಹನ ಸವಾರರು ಹೈರಾಣಾಗುತ್ತಿದ್ದಾರೆ. ಪ್ರತಿನಿತ್ಯ ಒಂದಿಲ್ಲೊಂದು ಅಪಘಾತ ಹಾಗೂ ಟ್ರಾಫಿಕ್‌ಗೆ ಕಾರಣವಾಗುತ್ತಿವೆ. ಪಾಲಿಕೆಯವರು ಕೇವಲ ಮುಖ್ಯವಾದ ರಸ್ತೆ ಗುಂಡಿ ಮಾತ್ರ ಮುಚ್ಚಿ ಹೋಗುತ್ತಿದ್ದಾರೆ ಎಂದು ಪಾಲಿಕೆ ವಿರುದ್ಧ ಸಾರ್ವಜನಿಕರು ಆಕ್ರೋಶ ಹೊರ ಹಾಕುತ್ತಿದ್ದಾರೆ.

ಇದನ್ನೂ ಓದಿ: ಕಾಮಗಾರಿ ಬಿಲ್ ಬಾಕಿ: ಬಿಬಿಎಂಪಿ ವಿರುದ್ಧ ಸಮರ ಸಾರಿದ ಗುತ್ತಿಗೆದಾರರು

ಇನ್ನು ಮಳೆಯಿಂದಾಗಿ ಕಿತ್ತು ಬಂದು ಎಲ್ಲೆಂದರಲ್ಲಿ ಗುಂಡಿಗಳು ಬಾಯಿ ತೆರೆದು ನಿಂತಿವೆ. ಹೀಗಾಗಿ ಪ್ರತಿದಿನ ಒಂದಿಲ್ಲೊಂದು ಅಪಘಾತ ಸಂಭವಿಸುತ್ತಿವೆ. ಸ್ಥಳೀಯರೆ ಬ್ಯಾರಿಗೇಡ್ ಹಾಕಿದ್ದರು. ಮತ್ತೊಂದೆಡೆಗೆ ಮಳೆಯಿಂದಾಗಿ ರಸ್ತೆ ಕುಸಿದಿದ್ದು ಅಲ್ಲಿ ಮಣ್ಣು ಹಾಕಿ ಗುಂಡಿಯನ್ನ ಸ್ಥಳೀಯರೆ ಮುಚ್ಚಿದ್ದರು. ಇನ್ನೂ ಸ್ಟ್ರೀಟ್ ಲೈಟ್ ಗಳಿದ್ದರು ಅವು ಯಾವುಗಳು ಕೂಡ ಉರಿಯಲ್ಲ ರಾತ್ರಿ ಸಮಯದಲ್ಲಿ ಗುಂಡಿ ಕಾಣದೇ ಅಪಘಾತಗಳು ಕೂಡ ಆಗುತ್ತಿವೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತಂದ್ರು ಏನು ಪ್ರಯೋಜನ ಇಲ್ಲ ಎಂದು ಸ್ಥಳೀಯರು ಕಿಡಿಕಾರಿದ್ದರು.

ವರದಿ: ಈರಣ್ಣ ಬಸವ

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಯಡಿಯೂರಪ್ಪ ಬಗ್ಗೆ ಗೌರವವಿದೆ, ಯಾವತ್ತಿಗೂ ನಮ್ಮ ನಾಯಕರು: ಜಾರಕಿಹೊಳಿ
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ಅಪ್ಪ ಸಿಎಂ ಆದಾಗ ವಿಜಯೇಂದ್ರ ದುಡ್ಡು ಮಾಡಿದ್ದೆಷ್ಟು ಅಂತ ಗೊತ್ತಿದೆ:ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ವಿಜಯೇಂದ್ರ ಒಂದು ಹೊಡೆದರೆ ನಾವು ನಾಲ್ಕು ಹೊಡೆಯುತ್ತೇವೆ: ಯತ್ನಾಳ್
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ಸೀಸನ್​ನ ಕೊನೆಯ ಪಂಚಾಯಿತಿ ಮಾಡಲು ತೋಳೆರಿಸಿಕೊಂಡೇ ಬಂದ ಕಿಚ್ಚ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ
ವರಿಷ್ಠರು ನನ್ನನ್ನೇ ಅಧ್ಯಕ್ಷನಾಗಿ ಮುಂದುವರಿಸುವ ಭರವಸೆ ಇದೆ: ವಿಜಯೇಂದ್ರ