ಶೈಕ್ಷಣಿಕ ಪ್ರವಾಸ: ಶಾಲಾ ಬಸ್ ಪಲ್ಟಿ, 15 ವಿದ್ಯಾರ್ಥಿಗಳಿಗೆ ಗಾಯ
ಮಂಗಳೂರು: ಶೈಕ್ಷಣಿಕ ಪ್ರವಾಸಕ್ಕೆ ಮಕ್ಕಳನ್ನು ಕರೆತಂದಿದ್ದ ಬಸ್ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 50 ಮಕ್ಕಳ ಪೈಕಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಮಕ್ಕಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಬೆಳಗಾವಿಯಿಂದ 50ಕ್ಕು ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಬಸ್ನಲ್ಲಿ ಬರುತ್ತಿದ್ದರು ಈ ವೇಳೆ ಎದುರು ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ […]
ಮಂಗಳೂರು: ಶೈಕ್ಷಣಿಕ ಪ್ರವಾಸಕ್ಕೆ ಮಕ್ಕಳನ್ನು ಕರೆತಂದಿದ್ದ ಬಸ್ ಪಲ್ಟಿಯಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆ ಬೆಳ್ತಂಗಡಿ ತಾಲೂಕಿನ ಕೌಕ್ರಾಡಿ ಗ್ರಾಮದ ಕಾಪಿನಬಾಗಿಲು ಪ್ರದೇಶದಲ್ಲಿ ನಡೆದಿದೆ. ಘಟನೆಯಲ್ಲಿ 50 ಮಕ್ಕಳ ಪೈಕಿ 15ಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಗಾಯಗಳಾಗಿದ್ದು, ಮಕ್ಕಳಿಗೆ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಕೊಡಿಸಲಾಗುತ್ತಿದೆ.
ಬೆಳಗಾವಿಯಿಂದ 50ಕ್ಕು ಹೆಚ್ಚು ವಿದ್ಯಾರ್ಥಿಗಳು ಪ್ರವಾಸಕ್ಕೆ ಎಂದು ಬಸ್ನಲ್ಲಿ ಬರುತ್ತಿದ್ದರು ಈ ವೇಳೆ ಎದುರು ದಿಕ್ಕಿನಲ್ಲಿ ಬರುತ್ತಿದ್ದ ಕಾರಿಗೆ ಡಿಕ್ಕಿ ಹೊಡೆಯುವುದನ್ನ ತಪ್ಪಿಸಲು ಹೋಗಿ ಅಪಘಾತ ಸಂಭವಿಸಿದೆ. ಉಪ್ಪಿನಂಗಡಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.
Published On - 3:05 pm, Fri, 6 December 19