Bengaluru Airport: ಏಪ್ರಿಲ್-ಅಕ್ಟೋಬರ್​ನಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ 16 ಲಕ್ಷ ಜನ

| Updated By: ಅಕ್ಷಯ್​ ಪಲ್ಲಮಜಲು​​

Updated on: Nov 11, 2022 | 11:13 AM

ಬೆಂಗಳೂರು ವಿಮಾನ ನಿಲ್ದಾಣದ ಆಡಳಿತವು ಏಪ್ರಿಲ್ ಮತ್ತು ಅಕ್ಟೋಬರ್ ನಡುವೆ ಸುಮಾರು 16.75 ಲಕ್ಷ ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದಾರೆ ಎಂದು ಹೇಳಿದೆ.

Bengaluru Airport: ಏಪ್ರಿಲ್-ಅಕ್ಟೋಬರ್​ನಲ್ಲಿ ಬೆಂಗಳೂರು ವಿಮಾನ ನಿಲ್ದಾಣದಿಂದ ಪ್ರಯಾಣಿಸಿದ 16 ಲಕ್ಷ ಜನ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ, ಬೆಂಗಳೂರು
Follow us on

ಬೆಂಗಳೂರಿನಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು 218 ಟನ್ ತೂಕದ ಕೆಂಪೇಗೌಡರ ಪ್ರತಿಮೆ(Kempegowda Statue)ಯನ್ನು ಉದ್ಘಾಟಿಸಲಿದ್ದಾರೆ. ಮಧ್ಯಾಹ್ನ 12.10ಕ್ಕೆ ಕೆಂಪೇಗೌಡ ಪ್ರತಿಮೆ ಅನಾವರಣ ಕಾರ್ಯಕ್ರಮ ನೆರವೇರಲಿದೆ. 64 ಕೋಟಿ ವೆಚ್ಚದಲ್ಲಿ 108 ಅಡಿ ಎತ್ತರದ ಕಂಚಿನ ಪ್ರತಿಮೆ ನಿರ್ಮಾಣ ಮಾಡಲಾಗಿದೆ. ಆದರೆ ಈ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಕೆಲವೊಂದು ವಿಶೇಷ ವಿಚಾರಗಳು ಇದೆ. ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣವು ದೇಶದ ಅತ್ಯಂತ ಜನನಿಬಿಡ ವಿಮಾನ ನಿಲ್ದಾಣಗಳಲ್ಲಿ ಒಂದಾಗಿದೆ, ಪ್ರತಿದಿನ ಸಾವಿರಾರು ಪ್ರಯಾಣಿಕರು ರಾಜಧಾನಿಯಿಂದ ಪ್ರಯಾಣಿಸುತ್ತಾರೆ. ಬೆಂಗಳೂರು ವಿಮಾನ ನಿಲ್ದಾಣದ ಆಡಳಿತವು ಏಪ್ರಿಲ್ ಮತ್ತು ಅಕ್ಟೋಬರ್ ನಡುವೆ ಸುಮಾರು 16.75 ಲಕ್ಷ ಪ್ರಯಾಣಿಕರು ಬೆಂಗಳೂರು ವಿಮಾನ ನಿಲ್ದಾಣದ ಮೂಲಕ ಪ್ರಯಾಣಿಸಿದ್ದಾರೆ ಎಂದು ಹೇಳಿದೆ.

16.75 ಲಕ್ಷ ಪ್ರಯಾಣಿಕರಲ್ಲಿ 2.1 ಲಕ್ಷ ಪ್ರಯಾಣಿಕರು ಅಂತರಾಷ್ಟ್ರೀಯ ವಿಮಾನ ಸೇವೆಗಳ ಮೂಲಕ ಮತ್ತು 14.74 ಲಕ್ಷ ಪ್ರಯಾಣಿಕರು ದೇಶೀಯ ಸೇವೆಗಳ ಮೂಲಕ ಪ್ರಯಾಣಿಸಿದ್ದಾರೆ. ಅಕ್ಟೋಬರ್ 9 ರಂದು ಬೆಂಗಳೂರು ವಿಮಾನ ನಿಲ್ದಾಣದಲ್ಲಿ 97,040 ಜನರು ದೇಶೀಯ ಮತ್ತು ಅಂತರಾಷ್ಟ್ರೀಯ ವಿಮಾನಯಾಣ ಮಾಡಿದ್ದಾರೆ. ಏಪ್ರಿಲ್ ಮತ್ತು ಅಕ್ಟೋಬರ್ ನಡುವೆ ಬೆಂಗಳೂರು ವಿಮಾನ ನಿಲ್ದಾಣಕ್ಕೆ ಅತ್ಯಂತ ಜನನಿಬಿಡ ನಿಲ್ದಾಣವಾಗಿದೆ.

ಇದನ್ನು ಓದಿStatue of Prosperity: ಬೆಂಗಳೂರಿನಲ್ಲಿ ಪ್ರಧಾನಿ ಮೋದಿ ಇಂದು ಅನಾವರಣಗೊಳಿಸಲಿರುವ 218 ಟನ್ ತೂಕದ ಕೆಂಪೇಗೌಡರ ಪ್ರತಿಮೆಯ ವೈಶಿಷ್ಟ್ಯ ಹೀಗಿದೆ

ಎಲ್ಲಾ ದೇಶೀಯ ಪ್ರಯಾಣಿಕರಲ್ಲಿ, 44% ಪ್ರಯಾಣಿಕರು ಬೆಂಗಳೂರು – ದೆಹಲಿ, ಮುಂಬೈ, ಕೋಲ್ಕತ್ತಾ, ಕೊಚ್ಚಿನ್ ಮತ್ತು ಪುಣೆ ನಡುವೆ ಪ್ರಯಾಣಿಸಿದ್ದಾರೆ. ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರಲ್ಲಿ, 54% ಪ್ರಯಾಣಿಕರು ಬೆಂಗಳೂರು – ದುಬೈ, ದೋಹಾ, ಸಿಂಗಾಪುರ್, ಫ್ರಾಂಕ್‌ಫರ್ಟ್ ಮತ್ತು ಬ್ಯಾಂಕಾಕ್ ನಡುವೆ ಪ್ರಯಾಣಿಸಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ನೂತನ ಟರ್ಮಿನಲ್ ಅನ್ನು ಉದ್ಘಾಟಿಸಲಿದ್ದಾರೆ. ಅದೇ ದಿನ ಬೆಂಗಳೂರು ವಿಮಾನ ನಿಲ್ದಾಣದಲ್ಲಿ 108 ಅಡಿ ಕೆಂಪೇಗೌಡ ಪ್ರತಿಮೆಯನ್ನು ಲೋಕಾರ್ಪಣೆ ಮಾಡಲಿದ್ದಾರೆ. ಇದನ್ನು ‘ಸಮೃದ್ಧಿಯ ಪ್ರತಿಮೆ’ ಎಂದು ಹೆಸರಿಸಲಾಗಿದೆ.