ಬೆಂಗಳೂರು ನಗರದಲ್ಲಿ 16 ಸಾವಿರ, ರಾಜ್ಯದಲ್ಲಿ 2 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿ

ವಿಧಾನ ಪರಿಷತ್ತಿನಲ್ಲಿ ಮಂಡಿಸಲಾದ ಅಂಕಿಅಂಶಗಳ ಪ್ರಕಾರ ಬೆಂಗಳೂರು ನಗರ ಜಿಲ್ಲೆಯಲ್ಲಿ ಒಟ್ಟು 16,478 ಎಕರೆಯಷ್ಟು ಕಂದಾಯ ಇಲಾಖೆಯ ಭೂಮಿ ಅತಿಕ್ರಮಣವಾಗಿದೆ.

ಬೆಂಗಳೂರು ನಗರದಲ್ಲಿ 16 ಸಾವಿರ, ರಾಜ್ಯದಲ್ಲಿ 2 ಲಕ್ಷ ಎಕರೆ ಕಂದಾಯ ಭೂಮಿ ಒತ್ತುವರಿ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on: Jul 10, 2023 | 3:14 PM

ಬೆಂಗಳೂರು: ಕಂದಾಯ ಇಲಾಖೆಯ (Revenue Department) ಭೂಮಿ ಅತಿಕ್ರಮಣ (Land Encroachment) ತಡೆಗಟ್ಟಲು ಸರ್ಕಾರ ಕಠಿಣ ಕ್ರಮಗಳನ್ನು ಜಾರಿಗೆ ತಂದರೂ ಅತಿಕ್ರಮಣ ತಡೆಯಲು ಸಾಧ್ಯವಾಗುತ್ತಿಲ್ಲ. ವಿಧಾನ ಪರಿಷತ್ತಿನಲ್ಲಿ (Legislative Council) ಮಂಡಿಸಲಾದ ಅಂಕಿಅಂಶಗಳ ಪ್ರಕಾರ ಬೆಂಗಳೂರು (Bengaluru) ನಗರ ಜಿಲ್ಲೆಯಲ್ಲಿ ಒಟ್ಟು 16,478 ಎಕರೆಗಳಷ್ಟು ಕಂದಾಯ ಇಲಾಖೆಯ ಭೂಮಿ ಅತಿಕ್ರಮಣವಾಗಿದೆ. ಇನ್ನು ರಾಜ್ಯದಲ್ಲಿ ಒಟ್ಟು 2.82 ಲಕ್ಷ (2,82,130) ಎಕರೆ ಕಂದಾಯ ಭೂಮಿ ಅತಿಕ್ರಮಣವಾಗಿದೆ ಎಂದು ಖಾಸಗಿ ಸುದ್ದಿ ಸಂಸ್ಥೆ ದಿ ಇಂಡಿಯನ್​​ ಎಕ್ಸಪ್ರೆಸ್​ ವರದಿ ಮಾಡಿದೆ.

ಮೂಲಗಳ ಪ್ರಕಾರ ಬೆಂಗಳೂರಿನಲ್ಲಿ ಅತಿಕ್ರಮಣವಾಗಿರುವ ಕಂದಾಯ ಭೂಮಿ ಸಾವಿರಾರು ಕೋಟಿ ಮೌಲ್ಯದ್ದಾಗಿದೆ. ಬೆಂಗಳೂರು ಹೊರವಲಯಕ್ಕೆ ಹೋಲಿಸಿದರೇ ನಗರದ ಒಳಗಿನ ಪ್ರಮುಖ ಪ್ರದೇಶಗಳಲ್ಲಿ ಅತಿಕ್ರಮಿಸಲಾದ ಭೂಮಿ ಹೆಚ್ಚಿನ ಮೌಲ್ಯದ್ದಾಗಿದೆ. ಮೆಟ್ರೊ ಮಾರ್ಗದ ಜಮೀನು ಕೂಡ ಹೆಚ್ಚು ವೆಚ್ಚದ್ದಾಗಿದೆ. ಪ್ರತಿ ಎಕರೆ ಭೂಮಿ ಸರಾಸರಿ 3 ರಿಂದ 4 ಕೋಟಿ ರೂ. ಬೆಲೆ ಬಾಳುತ್ತದೆ. ಈ ಜಮೀನುಗಳ ಒಟ್ಟು ಮೌಲ್ಯವು 48,000-64,000 ಕೋಟಿ ರೂಪಾಯಿಗಳನ್ನು ಮೀರಬಹುದು ಎಂದು ಮೂಲಗಳು ತಿಳಿಸಿವೆ. ಇನ್ನು ಅತಿಕ್ರಮಣ ರಾಜಕಾರಣಿಗಳ ಮತ್ತು ಬಿಲ್ಡರ್​​ಗಳ ಹೊಂದಾಣಿಕೆಯಿಂದ ಆಗಿದೆ ಎಂಬ ಆರೋಪ ಕೇಳಿಬಂದಿದೆ.

ರಾಜ್ಯದ 31 ಜಿಲ್ಲೆಗಳ ಪೈಕಿ, ಬೆಂಗಳೂರಿನ ನೆರೆ ಜಿಲ್ಲೆ ಕೋಲಾರವು ಅತಿ ಹೆಚ್ಚು ಅತಿಕ್ರಮಣವಾಗಿದೆ. ಇದು ಒಟ್ಟು ಮೂರನೇ ಒಂದು ಭಾಗದಷ್ಟು 88,310 ಎಕರೆ ಭೂಮಿ ಅತಿಕ್ರಮಣವಾಗಿದೆ. ಮಾಹಿತಿ ಪ್ರಕಾರ ಕೊಪ್ಪಳ ಮತ್ತು ರಾಯಚೂರು ಜಿಲ್ಲೆಗಳಲ್ಲಿ ಯಾವುದೇ ಜಮೀನು ಅತಿಕ್ರಮಣವಾಗಿಲ್ಲ.

ಇದನ್ನೂ ಓದಿ: Shivamogga News: 1980 ರಿಂದ ಇಲ್ಲಿಯವರೆಗೆ ಅರಣ್ಯ ಭೂಮಿ ಒತ್ತುವರಿ, ಒಟ್ಟು 2815 ಎಫ್​ಐಆರ್

ವಿಧಾನ ಪರಿಷತ್​ನಲ್ಲಿ ಬುಧವಾರ ಪ್ರಶ್ನೋತ್ತರ ವೇಳೆಯಲ್ಲಿ ಜೆಡಿಎಸ್‌ನ ಟಿ.ಎ. ಶರವಣ ಅವರ ಪ್ರಶ್ನೆಗೆ ಉತ್ತರಿಸಿದ ಕಂದಾಯ ಸಚಿವ ಕೃಷ್ಣ ಬೈರೇಗೌಡ, ಒತ್ತುವರಿಯಾಗಿರುವ ಜಮೀನಿನ ಒಟ್ಟು ವಿಸ್ತೀರ್ಣ ದೊಡ್ಡದಾಗಿದ್ದರೂ, ಇದರಲ್ಲಿ ಕೆಲವು ಜಮೀನುಗಳು ಸಾಗುವಳಿ ಹಂತದಲ್ಲಿರುವುದರಿಂದ ಕಡಿಮೆಯಾಗುವ ನಿರೀಕ್ಷೆಯಿದೆ ಮತ್ತು ಅಂತಹ ನಿವೇಶನಗಳನ್ನು ಪಟ್ಟಿಯಿಂದ ತೆಗೆದುಹಾಕಲಾಗುತ್ತದೆ. ಏಕೆಂದರೆ ಇಂತಹ ಜಮೀನುಗಳನ್ನು ಅತಿಕ್ರಮಣ ಎಂದು ಪರಿಗಣಿಸುವುದಿಲ್ಲ ಎಂದು ಹಿಂದಿನ ಸರ್ಕಾರದ ಅವಧಿಯಲ್ಲಿ ನಿರ್ಣಯ ಕೈಗೊಳ್ಳಲಾಗಿತ್ತು ಎಂದರು.

ಅಧಿಕಾರಿಗಳ ಸಹಾಯವಿಲ್ಲದೆ ಅತಿಕ್ರಮಣವಾಗಲು ಸಾಧ್ಯವಿಲ್ಲ. ಇಂತಹ ಅತಿಕ್ರಮಣಗಳನ್ನು ತಡೆಯಲು ಹಲವು ಮಾರ್ಗಗಳಿವೆ. ಒತ್ತುವರಿ ತಡೆಯಲು ಈಗಿರುವ ಕಾನೂನುಗಳ ಸಮರ್ಪಕ ಅನುಷ್ಠಾನ ಅಗತ್ಯವಿದೆ. ಹೀಗಾಗಿ, ಈಗಿರುವ ವ್ಯವಸ್ಥೆಯನ್ನೇ ಮತ್ತಷ್ಟು ಬಿಗಿ ಮಾಡಲು ಕ್ರಮಕೈಗೊಳ್ಳಲಾಗುವುದು ಎಂದು ತಿಳಿಸಿದರು.

ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ಭಾರೀ ಮಳೆಯ ಸಂದರ್ಭದಲ್ಲಿ ಪ್ರವಾಹದ ಸಂದರ್ಭಗಳನ್ನು ತಡೆಗಟ್ಟಲು ಒತ್ತುವರಿ ಮಾಡಿಕೊಳ್ಳಲಾದ ರಾಜಕಾಲುವೆ ತೆರವುಗೊಳಿಸುವ ಕಾರ್ಯಾಚರಣೆಯನ್ನು ಪುನರಾರಂಭಿಸಿದೆ. ರಾಜ್ಯದಲ್ಲಿ ಕಂದಾಯ ಭೂಮಿ ಒತ್ತುವರಿ ಮಾಡಿಕೊಂಡಿದ್ದಲ್ಲದೆ, 2 ಲಕ್ಷ ಎಕರೆಗೂ ಹೆಚ್ಚು ಅರಣ್ಯ ಭೂಮಿ ಒತ್ತುವರಿಯಾಗಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ನೈಜೀರಿಯಾದಲ್ಲಿ ಗ್ಯಾಸೋಲಿನ್ ಟ್ಯಾಂಕರ್ ಸ್ಫೋಟ, 70 ಮಂದಿ ಸಾವು
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ಜನವರಿ 20 ರಿಂದ 26ರವರೆಗಿನ ವಾರ ಭವಿಷ್ಯ ಮತ್ತು ಗ್ರಹಗಳ ಸಂಚಾರ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
ತಾಮ್ರದ ಪಾತ್ರೆಯಲ್ಲಿ ನೀರಿಡುವುದರ ಹಿಂದಿನ ರಹಸ್ಯ ತಿಳಿಯಿರಿ
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
Daily horoscope: ಈ ರಾಶಿಯವರು ಆರ್ಥಿಕವಾಗಿ ಪ್ರಗತಿ ಕಾಣುವರು
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ವಾರ್ಡ್​ನನ್ನು ಸಸ್ಪೆಂಡ್ ಮಾಡುವಂತೆ ಅದೇಶಿಸಿದ ಉಪಲೋಕಾಯುಕ್ತ ವೀರಪ್ಪ
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಸೂಟ್​ಕೇಸ್​ನಲ್ಲಿ ಅಡಗಿದೆ ಸ್ಪರ್ಧಿಗಳ ಭವಿಷ್ಯ, ಮನೆಗೆ ಹೋಗುವರ್ಯಾರು?
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಅಗತ್ಯಕ್ಕಿಂತ ಹೆಚ್ಚು ಕೆಲಸ ಮಾಡಿದರೆ ಮಾನವ ರೋಗಗ್ರಸ್ತನಾಗುತ್ತಾನೆ: ವಾಟಾಳ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಬಿಜೆಪಿ ಸರ್ಕಾರ ನಡೆಸಿದ ಹಗರಣಗಳ ಚರ್ಚೆ ಮೊದಲು ನಡೆಯಲಿ: ಶಿವಕುಮಾರ್
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಎಲ್ಲ ರಾಜ್ಯಗಳಲ್ಲಿ ಪಕ್ಷದ ಚುನಾವಣಾ ಪ್ರಕ್ರಿಯೆ ಶುರುವಾಗಿದೆ: ಜೋಶಿ
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್
ಮಹಾಕುಂಭದಲ್ಲಿ ಪವಿತ್ರ ಸ್ನಾನ ಮಾಡಿದ ರಕ್ಷಣಾ ಸಚಿವ ರಾಜನಾಥ್ ಸಿಂಗ್