ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಶನಿವಾರ ಸಾಯಂಕಾಲ ದೊರೆತಿರುವ ಮಾಹಿತಿ ಪ್ರಕಾರ ರಾಜ್ಯದಲ್ಲಿ ಕಳೆದ 24 ಗಂಟೆಗಳಲ್ಲಿ ಕೊವಿಡ್-19 ವ್ಯಾಧಿಯಿಂದ 17ಜನ ಮರಣಿಸಿದ್ದಾರೆ ಮತ್ತು ಹೊಸದಾಗಿ 2,154 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,508 ಜನ ಸಾವನ್ನಪ್ಪಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 8,60,082 ಕ್ಕೇರಿದೆ.
ಸೋಂಕಿತರ ಪೈಕಿ 8,20,509 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 27,965 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ.
ಹಾಗೆಯೇ, ಬೆಂಗಳೂರಿನಲ್ಲಿ ಇಂದು ಕೊರೊನಾ ಸೋಂಕಿನಿಂದ 9 ಜನ ಸತ್ತಿದ್ದಾರೆ ಮತ್ತು ಹೊಸದಾಗಿ 1,195 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ನಗರದಲ್ಲಿ ಈವರೆಗೆ 3,997 ಜನ ಸೋಂಕಿಗೆ ಬಲಿಯಾಗಿದ್ದಾರೆ ಹಾಗೂ ಕೊರೊನಾ ಪೀಡಿತರ ಸಂಖ್ಯೆ 3,56,440 ತಲುಪಿದೆ.
ಸೋಂಕಿತರ ಪೈಕಿ 3,34,258 ಜನ ಗುಣಮುಖರಾಗಿ ಮನೆಗಳಿಗೆ ಹಿಂತಿರುಗಿದ್ದಾರೆ ಮತ್ತು ಉಳಿದ 18,184 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.