ಹೊಟ್ಟೆಪಾಡಿಗಾಗಿ ಯಾದಗಿರಿಯಿಂದ ಬೆಂಗಳೂರಿಗೆ ಬಂದಿದ್ದ 18 ವರ್ಷದ ಯುವತಿ ಆತ್ಮಹತ್ಯೆ

ಹೊಟ್ಟೆಪಾಡಿಗಾಗಿ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಯಾದಗಿರಿಯಿಂದ ಬೆಂಗಳೂರಿಗೆ ಬಂದಿದ್ದ 18 ವರ್ಷದ ಯುವತಿ ಆತ್ಮಹತ್ಯೆಗೆ ಶರಣಾಗಿದ್ದಾಳೆ. ತಾಯಿಯೊಂದಿಗೆ ಗಾರೆ ಕೆಲಸ ಮಾಡಿಕೊಂಡಿದ್ದ ಯುವತಿ ಏಕಾಏಕಿ ಇಂದು ಮನೆಯಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.

ಹೊಟ್ಟೆಪಾಡಿಗಾಗಿ ಯಾದಗಿರಿಯಿಂದ ಬೆಂಗಳೂರಿಗೆ ಬಂದಿದ್ದ 18 ವರ್ಷದ ಯುವತಿ ಆತ್ಮಹತ್ಯೆ
ಭೀಮವ್ವ
Edited By:

Updated on: Nov 17, 2024 | 6:03 PM

ಬೆಂಗಳೂರು, (ನವೆಂಬರ್ 17): ಹೊಟೆಪಾಡಿಗಾಗಿ ಯಾದಗಿರಿಯಿಂದ ಬೆಂಗಳೂರಿಗೆ ಬಂದು ಗಾರೆ ಕೆಲಸ ಮಾಡುತ್ತಿದ್ದ 18 ವರ್ಷದ ಯುವತಿಯೊಬ್ಬಳು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ನಡೆದಿದೆ. ಬೆಂಗಳೂರಿನ ಕುರುಬರಹಳ್ಳಿಯ 19ನೇ ಮೇನ್ ನಲ್ಲಿರುವ ಮನೆಯಲ್ಲಿ 18 ವರ್ಷದ ಭೀಮವ್ವ ನೇಣಿಗೆ ಶರಣಾಗಿದ್ದಾಳೆ. ಮೃತ ಭೀಮವ್ವ ಮೂಲತಃ ಯಾದಗಿರಿಯ ಕ್ಯಾತನಾಳದ ನಿವಾಸಿ. ಭಾಗ್ಯಮ್ಮ- ಮಲ್ಲಣ್ಣ ದಂಪತಿಯ ಪುತ್ರಿ. ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಹೊಟ್ಟೆಪಾಡಿಗಾಗಿ ಯಾದಗಿರಿಯಿಂದ ಬೆಂಗಳೂರಿಗೆ ಬಂದು ಗಾರೆ ಕೆಲಸ ಮಾಡುತ್ತಿದ್ದಳು. ಎಂದಿನಂತೆ ತನ್ನ ತಾಯಿ ಜೊತೆ ಕೆಲಸ ಹೋಗಿ ಬಂದು ಏಕಾಏಕಿ ನೇಣಿಗೆ ಕೊರಳೊಡ್ಡಿದ್ದಾಳೆ.

ಭಾಗ್ಯಮ್ಮ- ಮಲ್ಲಣ್ಣ ದಂಪತಿಗೆ ಒಟ್ಟು ನಾಲ್ವರು ಹೆಣ್ಣು ಮಕ್ಕಳು. ಈ ಪೈಕಿ ಭೀಮವ್ವ ಹಿರಿಯ ಮಗಳಾಗಿದ್ದಳು. ಭೀಮವ್ವಳ ಕುಟುಂಬ ಕಳೆದ ಹಲವು ವರ್ಷಗಳಿಂದ ಬೆಂಗಳೂರಿನಲ್ಲಿ ವಾಸವಿದ್ದು, ಭೀಮವ್ವ ಸಹ ವಿದ್ಯಾಭ್ಯಾಸ ಅರ್ಧಕ್ಕೆ ನಿಲ್ಲಿಸಿ ಗಾರೆ ಕೆಲಸಕ್ಕೆ ಹೋಗುತ್ತಿದ್ದಳು. ಎಂದಿನಂತೆ ಇಂದು (ನವೆಂಬರ್ 17) ಬೆಳಗ್ಗೆ ತಂದೆ-ತಾಯಿ ಜೊತೆ ಕೆಲಸಕ್ಕೆ ಹೋಗಿದ್ದ ಭೀಮವ್ವ, ಮಧ್ಯಾಹ್ನ ಮನೆಗೆ ಬಂದು ನೇಣಿಗೆ ಶರಣಾಗಿದ್ದಾಳೆ.

ಇದನ್ನೂ ಓದಿ: ಈಜುಕೊಳದಲ್ಲಿ ಮುಳುಗಿ ಪ್ರಾಣಬಿಟ್ಟ ಮೂವರು ಯುವತಿಯರ ಕೊನೆ ಕ್ಷಣ ಹೇಗಿತ್ತು? ವಿಡಿಯೋ ನೋಡಿ

ಗಾರೇ ಕೆಲಸ ಮುಗಿಸಿಕೊಂಡು ತಾಯಿ ಜೊತೆಗೆ ಭೀಮವ್ವ ಮನೆಗೆ ಬಂದಿದ್ದಾಳೆ. ಬಳಿಕ ತಾಯಿ ಭಾಗ್ಯಮ್ಮ ಬೇರೆಯವರ ಮನೆ ಕೆಲಸಕ್ಕೆಂದು ಹೋಗಿದ್ದರೆ, ಮೂವರು ತಂಗಿಯರು ಮನೆ ಹೊರಗಡೆ ಆಟವಾಡಲು ಹೋಗಿದ್ದರು. ಆಗ ಮನೆಯಲ್ಲಿ ಯಾರೂ ಇಲ್ಲದ ವೇಳೆ ಭೀಮವ್ವ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ.  ಆದ್ರೆ, ಆತ್ಮಹತ್ಯೆಗೆ ನಿಖರ ಕಾರಣ ತಿಳಿದುಬಂದಿಲ್ಲ.

ಇನ್ನು ವಿಷಯ ತಿಳಿಯುತ್ತಿದ್ದಂತೆಯೇ ಘಟನಾ ಸ್ಥಳಕ್ಕೆ ಮಹಾಲಕ್ಷ್ಮೀಲೇಔಟ್ ಪೊಲೀಸರ ಭೇಟಿ ನೀಡಿ ತನಿಖೆ ಕೈಗೊಂಡಿದ್ದಾರೆ. ಭೀಮವ್ವ ಏಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎನ್ನುವುದು ಪೊಲೀಸ್​ ತನಿಖೆಯಿಂದ ತಿಳಿದುಬರಬೇಕಿದೆ.

ಮತ್ತಷ್ಟು ಕ್ರೈಂ ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಜಗದೀಶ ಬಿ.

ಜಗದೀಶ್​ ಬಸವರಾಜು ಟಿವಿ9 ಕನ್ನಡದ ಜಿಲ್ಲಾ ವರದಿಗಾರರಾಗಿದ್ದಾರೆ. ಪ್ರಸ್ತುತ ಅವರು ತುಮಕುರು ಜಿಲ್ಲಾ ಸುದ್ದಿಗಳ ವರದಿ ಮಾಡುತ್ತಿದ್ದಾರೆ. ಹುಟ್ಟಿದ್ದು, ಬೆಳೆದಿದ್ದು ಬೆಂಗಳೂರಿನಲ್ಲಿ. ಪತ್ರಿಕೋದ್ಯಮ ಓದಿದ್ದು, ವೃತ್ತಿ ಬದುಕು ಆರಂಭಿಸಿದ್ದು ಕೂಡಾ ಬೆಂಗಳೂರಿನಲ್ಲಿ. ಟಿವಿ9ನಲ್ಲಿ ಎಂಟು ವರ್ಷ ಸಹಿತ ಹತ್ತು ವರ್ಷದ ಕ್ರೈಂ ವರದಿಗಾರಿಕೆಯ ಅನುಭವದ ಜೊತೆ ಸದ್ಯ ೨೦೨೫ರಿಂದ ತುಮಕೂರು ಜಿಲ್ಲಾವರದಿಗಾರನಾಗಿ ಮಾದ್ಯಮದ ವೃತ್ತಿ ಬದುಕು ಮುಂದುವರೆದಿದೆ.

Read More
Loading...
Unable to load recommendations.
Follow Us