ರಾಜ್ಯದಲ್ಲಿ ಇಂದು 187 ಮಂದಿಗೆ ಕೊರೊನಾ ಸೋಂಕು! ಯಾವ ಜಿಲ್ಲೆಯಲ್ಲಿ ಎಷ್ಟು?

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 187 ಜನರಿಗೆ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 73 ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ 28, ಕಲಬುರಗಿ 24, ಹಾಸನ 16, ಮಂಡ್ಯ 15, ಶಿವಮೊಗ್ಗ 9, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ಬಳ್ಳಾರಿ 3, ಬೀದರ್ 2, ಬಾಗಲಕೋಟೆ 2, ಧಾರವಾಡ 2, ವಿಜಯಪುರ 1, ಕೋಲಾರ 1, ಹಾವೇರಿ 1, ರಾಮನಗರ ಜಿಲ್ಲೆಯಲ್ಲಿ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ. […]

ರಾಜ್ಯದಲ್ಲಿ ಇಂದು 187 ಮಂದಿಗೆ ಕೊರೊನಾ ಸೋಂಕು! ಯಾವ ಜಿಲ್ಲೆಯಲ್ಲಿ ಎಷ್ಟು?
ಸಾಧು ಶ್ರೀನಾಥ್​ Edited By:

Updated on: Jun 01, 2020 | 7:00 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 187 ಜನರಿಗೆ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3408ಕ್ಕೆ ಏರಿಕೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 73 ಕೇಸ್ ಪತ್ತೆಯಾಗಿದ್ದು, ಬೆಂಗಳೂರು ನಗರ 28, ಕಲಬುರಗಿ 24, ಹಾಸನ 16, ಮಂಡ್ಯ 15, ಶಿವಮೊಗ್ಗ 9, ಚಿಕ್ಕಬಳ್ಳಾಪುರ 5, ದಕ್ಷಿಣ ಕನ್ನಡ 4, ಬಳ್ಳಾರಿ 3, ಬೀದರ್ 2, ಬಾಗಲಕೋಟೆ 2, ಧಾರವಾಡ 2, ವಿಜಯಪುರ 1, ಕೋಲಾರ 1, ಹಾವೇರಿ 1, ರಾಮನಗರ ಜಿಲ್ಲೆಯಲ್ಲಿ ಒಂದು ಕೊರೊನಾ ಪ್ರಕರಣ ಪತ್ತೆಯಾಗಿದೆ.

3,408 ಕೊರೊನಾ ಸೋಂಕಿತರ ಪೈಕಿ 52 ಮಂದಿ ಕೊವಿಡ್​ನಿಂದ ಮೃತಪಟ್ಟಿದ್ದಾರೆ. ಈವರೆಗೆ 1328 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 2026 ಕೊರೊನಾ ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರಿನಲ್ಲಿ ಕೊರೊನಾಗೆ ವೃದ್ಧ ಬಲಿ: 
ಬೆಂಗಳೂರಲ್ಲಿ ಕೊರೊನಾ ಸೋಂಕಿನಿಂದ ಮತ್ತೊಬ್ಬ ವೃದ್ಧ ಸಾವಿಗೀಡಾಗಿದ್ದಾರೆ. 492ನೇ ಸೋಂಕಿತ ಹೊಂಗಸಂದ್ರದ 90 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಬಿಹಾರ ಮೂಲದ ಕಾರ್ಮಿಕ 419ನೇ ಸೋಂಕಿತನ ದ್ವಿತೀಯ ಸಂಪರ್ಕದಿಂದ ಕೊರೊನಾ ತಗುಲಿತ್ತು. 419ನೇ ಸೋಂಕಿತ ಹೊಂಗಸಂದ್ರದಲ್ಲಿ ಕೊರೊನಾ ಹರಡಿದ್ದ.

Published On - 6:09 pm, Mon, 1 June 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us