AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆ, ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು?

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 19 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 13 ಜನರಿಗೆ ಸೋಂಕು ಅಟ್ಯಾಕ್ ಆಗಿದ್ದು, ದಕ್ಷಿಣ ಕನ್ನಡ 3, ಕಲಬುರಗಿ 1 ಹಾಗೂ ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ರಾಜಧಾನಿಯಲ್ಲಿ ಹೊಸದಾಗಿ ಇಬ್ಬರಿಗೆ ಅಟ್ಯಾಕ್: ಬೆಂಗಳೂರಿನಲ್ಲಿ ಹೊಸದಾಗಿ ಇಬ್ಬರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದೆ. 677ನೇ ಕೊರೊನಾ ಸೋಂಕಿತೆ 40 ವರ್ಷದ ಮಹಿಳೆ, 678ನೇ ಕೊರೊನಾ […]

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆ, ಯಾವ ಜಿಲ್ಲೆಯಲ್ಲಿ ಎಷ್ಟೆಷ್ಟು?
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​|

Updated on:May 06, 2020 | 2:03 PM

Share

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 19 ಜನರಿಗೆ ಕೊರೊನಾ ಸೋಂಕು ಪತ್ತೆಯಾಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 692ಕ್ಕೆ ಏರಿಕೆಯಾಗಿದೆ. ಬಾಗಲಕೋಟೆ ಜಿಲ್ಲೆಯಲ್ಲಿ ಇಂದು ಒಂದೇ ದಿನ 13 ಜನರಿಗೆ ಸೋಂಕು ಅಟ್ಯಾಕ್ ಆಗಿದ್ದು, ದಕ್ಷಿಣ ಕನ್ನಡ 3, ಕಲಬುರಗಿ 1 ಹಾಗೂ ಬೆಂಗಳೂರಿನಲ್ಲಿ ಇಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ.

ರಾಜಧಾನಿಯಲ್ಲಿ ಹೊಸದಾಗಿ ಇಬ್ಬರಿಗೆ ಅಟ್ಯಾಕ್: ಬೆಂಗಳೂರಿನಲ್ಲಿ ಹೊಸದಾಗಿ ಇಬ್ಬರಿಗೆ ಕೊರೊನಾ ಸೋಂಕು ಅಟ್ಯಾಕ್ ಆಗಿದೆ. 677ನೇ ಕೊರೊನಾ ಸೋಂಕಿತೆ 40 ವರ್ಷದ ಮಹಿಳೆ, 678ನೇ ಕೊರೊನಾ ಸೋಂಕಿತೆ 25 ವರ್ಷದ ಮಹಿಳೆಯಾಗಿದ್ದು, ಇವರಿಬ್ಬರಿಗೂ 654ನೇ ಸೋಂಕಿತರ ಸಂಪರ್ಕದಿಂದ ಕೊರೊನಾ ತಗುಲಿದೆ.

ಕಲಬುರಗಿಯಲ್ಲಿ ಇಂದು ಹೊಸದಾಗಿ ಒಬ್ಬರಿಗೆ ಸೋಂಕು ತಗುಲಿದ್ದು, 610ನೇ ಸೋಂಕಿತರ ಸಂಪರ್ಕದಿಂದ 679ನೇ ಕೊರೊನಾ ಸೋಂಕಿತ 52 ವರ್ಷದ ವ್ಯಕ್ತಿಗೆ ಅಟ್ಯಾಕ್ ಆಗಿದೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ಮೂವರಿಗೆ ಕೊರೊನಾ ತಗುಲಿರುವುದು ದೃಢಪಟ್ಟಿದೆ. 674ನೇ ಕೊರೊನಾ ಸೋಂಕಿತೆ 11 ವರ್ಷದ ಬಾಲಕಿ, 675ನೇ ಕೊರೊನಾ ಸೋಂಕಿತೆ 35 ವರ್ಷದ ಮಹಿಳೆ, ಬೋಳೂರಿನ ತಾಯಿ, ಮಗಳಿಗೆ ಕೊರೊನಾ ಸೋಂಕು ಕಾಣಿಸಿಕೊಂಡಿದೆ. ತಾಯಿ, ಮಗಳಿಗೆ  536ನೇ ಸೋಂಕಿತರಿಂದ ಸೋಂಕು ತಗುಲಿದೆ. 390ನೇ ಸೋಂಕಿತರ ಸಂಪರ್ಕದಿಂದ 676ನೇ ಕೊರೊನಾ ಸೋಂಕಿತೆ 16 ವರ್ಷದ ಬಾಲಕಿಗೆ ಅಟ್ಯಾಕ್ ಆಗಿದೆ.

ಬಾಗಲಕೋಟೆ ಜಿಲ್ಲೆಯಲ್ಲಿ 13 ಮಂದಿಗೆ ಅಟ್ಯಾಕ್: ಬಾಗಲಕೋಟೆ ಜಿಲ್ಲೆಯಲ್ಲಿ ಒಂದೇ ದಿನ 13 ಜನರಿಗೆ ಕೊರೊನಾ ದೃಢಪಟ್ಟಿದ್ದು, 607ನೇ ಸೋಂಕಿತೆ ಗರ್ಭಿಣಿಯಿಂದ 12 ಜನರಿಗೆ ಸೋಂಕು ತಗುಲಿದೆ. ತೀವ್ರ ಜ್ವರದಿಂದ ಬಳಲುತ್ತಿದ್ದ ಯುವತಿಗೆ ಕೊರೊನಾ ದೃಢಪಟ್ಟಿದೆ. 680ನೇ ಕೊರೊನಾ ಸೋಂಕಿತೆ 18 ವರ್ಷದ ಯುವತಿಯಾಗಿದ್ದಾರೆ.

Published On - 12:22 pm, Wed, 6 May 20

Follow Us
ಸಾಧು ಶ್ರೀನಾಥ್​
ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ನಿಮ್ಮ ರಾಶಿಯ ಆರ್ಥಿಕ, ವೃತ್ತಿ ಜಾತಕ ಹೇಗಿದೆ?
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಮಂಗಳೂರಿಗೆ ಮರಳಿದ 'ಚಿನ್ನದ ಹುಡುಗಿ' ಪೂವಮ್ಮಗೆ ಅದ್ಧೂರಿ ಸ್ವಾಗತ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಆಷಾಢದಲ್ಲೂ ನವದಂಪತಿಯನ್ನು ಒಂದುಗೂಡಿಸುವ ಚಾಮರಾಜೇಶ್ವರ ಜಾತ್ರೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಕಬ್ಬು ಬೆಳಗಾರರ ಪ್ರತಿಭಟನೆ ಬೆನ್ನಲ್ಲೇ ಅ.12ರಂದು ದಿಲ್ಲಿಯಲ್ಲಿ ಸಭೆ
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
ಮೂರೂ ಪಕ್ಷಗಳಿಂದ ಲಿಂಗಾಯತ ಸಮುದಾಯಕ್ಕೆ ಮಣೆ: 2028ಕ್ಕೆ ಮಾಸ್ಟರ್ ಪ್ಲಾನ್
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
‘ಪಟ್ಟ ಕಷ್ಟ ಅಷ್ಟಿಷ್ಟಲ್ಲ’, ‘ಪ್ರೇಮದ ಊರಲಿ’ ಯಶಸ್ಸಿನ ಬಗ್ಗೆ ನಾಯಕ ಶ್ರೀರಾಮ
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಬಿಗ್​​ಬಾಸ್ ಮನೆಯಲ್ಲಿ ಆಸಿಯಾ, ಯಶಸ್​​ ‘ಮಿಡ್ ನೈಟ್ ಆಪರೇಷನ್’
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಎಸ್​​ಐಆರ್ ವೇಳೆ ಮೈಸೂರಿನಲ್ಲಿ ಫಾರ್ಮ್​​ 7 ದುರ್ಬಳಕೆ: ಕೇಸ್ ಬುಕ್
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಕಡಿಮೆ ಬಜೆಟ್, ಸೂಪರ್ ಕಲೆಕ್ಷನ್: ಪ್ರೇಮದ ಊರಲಿ ಬಗ್ಗೆ ಚಿತ್ರಮಂದಿರದವರ ಮಾತು
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್
ಚೆನಾಬ್- ಅಂಜಿ ಸೇತುವೆ ಮೇಲೆ 100 ಕಿ.ಮೀ. ವೇಗದಲ್ಲಿ ಚಲಿಸಿದ ವಂದೇ ಭಾರತ್