AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೇರಳದಲ್ಲಿ ಮೆದುಳು ತಿನ್ನೋ ಅಮೀಬಾ ಸೋಂಕಿಗೆ 19 ಜನ ಬಲಿ: ಕರ್ನಾಟಕದಲ್ಲಿ ಕಟ್ಟೆಚ್ಚರ!

Brain-eating amoeba: ಕೇರಳದಲ್ಲಿ ನೆಗ್ಲೆರಿಯಾ ಫೊವ್ಲೆರಿ ಎಂಬ ಮೆದುಳು ತಿನ್ನುವ ಅಮೀಬಾ ಸೋಂಕು ಹೆಚ್ಚುತ್ತಿದೆ. ಈ ಸೋಂಕಿನಿಂದ 19 ಜನರು ಸಾವನ್ನಪ್ಪಿದ್ದಾರೆ. ಇತ್ತ ನೆರೆಯ ರಾಜ್ಯ ಕರ್ನಾಟಕದಲ್ಲಿ ಕಟ್ಟೆಚ್ಚರ ವಹಿಸಲಾಗಿದೆ. ಹಾಗಾದರೆ ಸೋಂಕು ಹೇಗೆ ಹರಡುತ್ತದೆ, ಲಕ್ಷಣಗಳು ಏನು ಮತ್ತು ತಡೆಗಟ್ಟುವಿಕೆ ಹೇಗೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

ಕೇರಳದಲ್ಲಿ ಮೆದುಳು ತಿನ್ನೋ ಅಮೀಬಾ ಸೋಂಕಿಗೆ 19 ಜನ ಬಲಿ: ಕರ್ನಾಟಕದಲ್ಲಿ ಕಟ್ಟೆಚ್ಚರ!
ಪ್ರಾತಿನಿಧಿಕ ಚಿತ್ರ
Vinay Kashappanavar
| Updated By: ಗಂಗಾಧರ​ ಬ. ಸಾಬೋಜಿ|

Updated on: Sep 21, 2025 | 7:50 AM

Share

ಬೆಂಗಳೂರು, ಸೆಪ್ಟೆಂಬರ್​ 21: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ (brain-eating amoeba) ಅಂದರೆ ನೆಗ್ಲೆರಿಯಾ ಫೊವ್ಲೆರಿ ಅಮೀಬಾ ಕಾಟ ಜೋರಾಗಿದೆ. ಈಗಾಗಲೇ ಈ ಸೋಂಕಿಗೆ 19 ಜನರು ಬಲಿ ಆಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುತ್ತಿದೆ. ನೆರೆಯ ರಾಜ್ಯದಲ್ಲಿ ಅಮೀಬಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಸದ್ಯ ಕರ್ನಾಟಕದಲ್ಲಿ (Karnataka) ಕಟ್ಟೆಚ್ಚರ ವಹಿಸಲಾಗಿದೆ. ಹಾಗದರೆ ಈ ಸೋಂಕು ಹೇಗೆ ಹರಡುತ್ತೆ, ಇದರ ಗುಣಲಕ್ಷಣಗಳೇನು ಎಂದು ತಿಳಿಯಲು ಮುಂದೆ ಓದಿ.

ನೆರೆಯ ರಾಜ್ಯ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಸೋಂಕು ಜೋರಾಗಿದೆ. ಈ ಸೋಂಕು ನೆಗ್ಲಿರಿಯಾ ಫೊವ್ಲೆರಿ ಎಂಬ ಅಮೀಬಾದಿಂದ ಹರಡುತ್ತದೆ. ಈ ಸೋಂಕಿಗೆ ಕೇರಳದಲ್ಲಿ ಇಲ್ಲಿಯವರೆಗೂ 19 ಜನರು ಸಾವನ್ನಪ್ಪಿದ್ದಾರೆ. 67 ಜನರು ಸೋಂಕಿತರಾಗಿದ್ದಾರೆ. ಸಾಮಾನ್ಯವಾಗಿ ನಿಂತ ನೀರು, ಕೊಳಗಳು ಮತ್ತು ಸರೋವರಗಳಲ್ಲಿ ಈ ಅಮೀಬಾ ಬೆಳೆಯುತ್ತೆ.

ಇದನ್ನೂ ಓದಿ: ಕೇರಳದಲ್ಲಿ ಹೈ ಅಲರ್ಟ್; ಮೆದುಳನ್ನು ತಿನ್ನುವ ಅಮೀಬಾದಿಂದ 19 ಜನ ಸಾವು, 120ಕ್ಕೂ ಹೆಚ್ಚು ಜನರಿಗೆ ಸೋಂಕು

ಒಂದು ವೇಳೆ ಅಂತಹ ನೀರಿನಲ್ಲಿ ಈಜಾಡಿದರೆ ಅಮೀಬಾವು ಮೂಗಿನ ಮೂಲಕ ನಮ್ಮ ಮೆದುಳನ್ನ ಹೊಕ್ಕು ನೇರವಾಗಿ ಕೇಂದ್ರ ನರವ್ಯೂಹಕ್ಜೆ ಹಾನಿಯುಂಟು ಮಾಡುತ್ತದೆ. ಕೆಲವೊಮ್ಮೆ ಸೋಂಕಿನ ಪ್ರಮಾಣ ಹೆಚ್ಚಾದರೆ ಸಾವು ಕೂಡ ಸಂಭವಿಸಲಿದೆ.

ಸೋಂಕಿನ ಲಕ್ಷಣಗಳೇನು?

ಸೋಂಕು ತಗುಲಿದ 1 ರಿಂದ 9 ದಿನಗಳಲ್ಲಿ ರೋಗ ಲಕ್ಷಣಗಳು ಅಂದರೆ ತಲೆನೋವು, ಜ್ವರ, ವಾಕರಿಕೆ ಮತ್ತು ವಾಂತಿ ಕಾಣಿಸಿಕೊಳ್ಳುತ್ತದೆ.

ಸೋಂಕಿಗೆ ಚಿಕಿತ್ಸೆ ಹಾಗೂ ಯಾವ ಮುನ್ನೆಚ್ಚರಿಕೆ ತೆಗೆದುಕೊಳ್ಳಬೇಕು?

  • ಕೊಳ, ಕೆರೆ ಮತ್ತು ನಿಂತಿರುವ ನೀರಿನಲ್ಲಿ ಸ್ನಾನ ಮಾಡಲು, ಈಜಲು ಹೋಗದೇ ಇರುವುದು.
  • ಶುದ್ಧ ನೀರಿನಲ್ಲಿ ಈಜುವಾಗಲೂ ಮೂಗಿಗೆ ಕ್ಲಿಪ್‌ಗಳನ್ನು ಬಳಸುವುದು.
  • ಬಾವಿ ಮತ್ತು ನೀರಿನ ಟ್ಯಾಂಕ್‌ಗಳನ್ನು ನಿಯಮಿತವಾಗಿ ಕ್ಲೋರಿನ್ ಬಳಸಿ ಸ್ವಚ್ಛಗೊಳಿಸುವುದು.
  • ಒಂದು ವೇಳೆ ನಿಂತ ನೀರಿನ ಸಂಪರ್ಕಕ್ಕೆ ಬಂದ ನಂತರ ಜ್ವರ ಅಥವಾ ತಲೆನೋವಿನಂತಹ ಲಕ್ಷಣಗಳು ಕಂಡುಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸುವುದು.

ಇನ್ನು ಕರ್ನಾಟಕದಲ್ಲಿ ಯಾವುದೇ ರೀತಿ ನೆಗ್ಲೆರಿಯಾ ಫೊವ್ಲೆರಿ ಸೋಂಕು ಕಾಣಿಸಿಕೊಂಡಿಲ್ಲ. ಆದರು ಕೂಡ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗುತಿದೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ ಜನರಲ್ ಆಸ್ಪತ್ರೆ ವೈದ್ಯ ಡಾ ಸುರೇಶ್ ಅವರು ಹೇಳಿದ್ದಾರೆ.

ಇದನ್ನೂ ಓದಿ: ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು

ಸದ್ಯ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳ ನಲುಗಿದ್ದು, ಅಲ್ಲಿನ ರಾಜ್ಯ ಸರ್ಕಾರ ಸೋಂಕು ತಡೆಗಟ್ಟಲು ಬೇಕಾದ ಕ್ರಮವಹಿಸುತ್ತಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.