
ಬೆಂಗಳೂರು, ಸೆಪ್ಟೆಂಬರ್ 21: ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾ (brain-eating amoeba) ಅಂದರೆ ನೆಗ್ಲೆರಿಯಾ ಫೊವ್ಲೆರಿ ಅಮೀಬಾ ಕಾಟ ಜೋರಾಗಿದೆ. ಈಗಾಗಲೇ ಈ ಸೋಂಕಿಗೆ 19 ಜನರು ಬಲಿ ಆಗಿದ್ದು, ಸಾವಿನ ಸಂಖ್ಯೆ ಏರಿಕೆ ಆಗುತ್ತಿದೆ. ನೆರೆಯ ರಾಜ್ಯದಲ್ಲಿ ಅಮೀಬಾ ಸೋಂಕು ಕಾಣಿಸಿಕೊಂಡ ಹಿನ್ನಲೆ ಸದ್ಯ ಕರ್ನಾಟಕದಲ್ಲಿ (Karnataka) ಕಟ್ಟೆಚ್ಚರ ವಹಿಸಲಾಗಿದೆ. ಹಾಗದರೆ ಈ ಸೋಂಕು ಹೇಗೆ ಹರಡುತ್ತೆ, ಇದರ ಗುಣಲಕ್ಷಣಗಳೇನು ಎಂದು ತಿಳಿಯಲು ಮುಂದೆ ಓದಿ.
ನೆರೆಯ ರಾಜ್ಯ ಕೇರಳದಲ್ಲಿ ಮೆದುಳು ತಿನ್ನುವ ಅಮೀಬಾದ ಸೋಂಕು ಜೋರಾಗಿದೆ. ಈ ಸೋಂಕು ನೆಗ್ಲಿರಿಯಾ ಫೊವ್ಲೆರಿ ಎಂಬ ಅಮೀಬಾದಿಂದ ಹರಡುತ್ತದೆ. ಈ ಸೋಂಕಿಗೆ ಕೇರಳದಲ್ಲಿ ಇಲ್ಲಿಯವರೆಗೂ 19 ಜನರು ಸಾವನ್ನಪ್ಪಿದ್ದಾರೆ. 67 ಜನರು ಸೋಂಕಿತರಾಗಿದ್ದಾರೆ. ಸಾಮಾನ್ಯವಾಗಿ ನಿಂತ ನೀರು, ಕೊಳಗಳು ಮತ್ತು ಸರೋವರಗಳಲ್ಲಿ ಈ ಅಮೀಬಾ ಬೆಳೆಯುತ್ತೆ.
ಇದನ್ನೂ ಓದಿ: ಕೇರಳದಲ್ಲಿ ಹೈ ಅಲರ್ಟ್; ಮೆದುಳನ್ನು ತಿನ್ನುವ ಅಮೀಬಾದಿಂದ 19 ಜನ ಸಾವು, 120ಕ್ಕೂ ಹೆಚ್ಚು ಜನರಿಗೆ ಸೋಂಕು
ಒಂದು ವೇಳೆ ಅಂತಹ ನೀರಿನಲ್ಲಿ ಈಜಾಡಿದರೆ ಅಮೀಬಾವು ಮೂಗಿನ ಮೂಲಕ ನಮ್ಮ ಮೆದುಳನ್ನ ಹೊಕ್ಕು ನೇರವಾಗಿ ಕೇಂದ್ರ ನರವ್ಯೂಹಕ್ಜೆ ಹಾನಿಯುಂಟು ಮಾಡುತ್ತದೆ. ಕೆಲವೊಮ್ಮೆ ಸೋಂಕಿನ ಪ್ರಮಾಣ ಹೆಚ್ಚಾದರೆ ಸಾವು ಕೂಡ ಸಂಭವಿಸಲಿದೆ.
ಸೋಂಕು ತಗುಲಿದ 1 ರಿಂದ 9 ದಿನಗಳಲ್ಲಿ ರೋಗ ಲಕ್ಷಣಗಳು ಅಂದರೆ ತಲೆನೋವು, ಜ್ವರ, ವಾಕರಿಕೆ ಮತ್ತು ವಾಂತಿ ಕಾಣಿಸಿಕೊಳ್ಳುತ್ತದೆ.
ಇನ್ನು ಕರ್ನಾಟಕದಲ್ಲಿ ಯಾವುದೇ ರೀತಿ ನೆಗ್ಲೆರಿಯಾ ಫೊವ್ಲೆರಿ ಸೋಂಕು ಕಾಣಿಸಿಕೊಂಡಿಲ್ಲ. ಆದರು ಕೂಡ ಆರೋಗ್ಯ ಇಲಾಖೆಯಿಂದ ಕಟ್ಟೆಚ್ಚರ ವಹಿಸಲಾಗುತಿದೆ. ಭಯ ಪಡುವ ಅವಶ್ಯಕತೆ ಇಲ್ಲ ಎಂದು ಕೆ.ಸಿ ಜನರಲ್ ಆಸ್ಪತ್ರೆ ವೈದ್ಯ ಡಾ ಸುರೇಶ್ ಅವರು ಹೇಳಿದ್ದಾರೆ.
ಇದನ್ನೂ ಓದಿ: ಕೇರಳದಲ್ಲಿ ಹೊಸ ರೋಗದ ಹಾವಳಿ; 67 ಮಂದಿಗೆ ಮೆದುಳು ತಿನ್ನುವ ಅಮೀಬಾ ಸೋಂಕು, 17 ಜನ ಸಾವು
ಸದ್ಯ ಮೆದುಳು ತಿನ್ನುವ ಅಮೀಬಾ ಸೋಂಕಿಗೆ ಕೇರಳ ನಲುಗಿದ್ದು, ಅಲ್ಲಿನ ರಾಜ್ಯ ಸರ್ಕಾರ ಸೋಂಕು ತಡೆಗಟ್ಟಲು ಬೇಕಾದ ಕ್ರಮವಹಿಸುತ್ತಿದೆ.
ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.