ರಾಜ್ಯದಲ್ಲಿ ಒಂದೇ ದಿನ ಕೊರೊನಾದಿಂದ 19 ಜನರ ಸಾವು.. 1,502 ಹೊಸ ಪ್ರಕರಣಗಳು

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ತನ್ನ ಕೆನ್ನಾಲಿಗೆ ಚಾಚುತ್ತಲೇ ಇದೆ. ದಿನೇ ದಿನೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 19 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಇದರೊಟ್ಟಿಗೆ ಕೊರೊನಾದಿಂದ ಈವರೆಗೆ ಬೆಂಗಳೂರಲ್ಲಿ 100 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಪ್ರಾಣಕಳೆದುಕೊಂಡವರ ಸಂಖ್ಯೆ 272ಕ್ಕೇರಿದೆ. ಇದಲ್ಲದೇ ರಾಜ್ಯದಲ್ಲಿ ಇಂದು ಹೊಸದಾಗಿ 1,502 ಕೇಸ್‌ಗಳು ಪತ್ತೆಯಾಗಿವೆ. ಅದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 889 […]

ರಾಜ್ಯದಲ್ಲಿ ಒಂದೇ ದಿನ ಕೊರೊನಾದಿಂದ 19 ಜನರ ಸಾವು.. 1,502 ಹೊಸ ಪ್ರಕರಣಗಳು
Edited By:

Updated on: Jul 02, 2020 | 8:28 PM

ಬೆಂಗಳೂರು: ರಾಜ್ಯದಲ್ಲಿ ಕೊರೊನಾ ಹೆಮ್ಮಾರಿ ತನ್ನ ಕೆನ್ನಾಲಿಗೆ ಚಾಚುತ್ತಲೇ ಇದೆ. ದಿನೇ ದಿನೆ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಲೇ ಇವೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 19 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಅದರಲ್ಲೂ ಬೆಂಗಳೂರಿನಲ್ಲಿ ಇಂದು ಸೋಂಕಿನಿಂದ ಮೂವರು ಮೃತಪಟ್ಟಿದ್ದಾರೆ. ಇದರೊಟ್ಟಿಗೆ ಕೊರೊನಾದಿಂದ ಈವರೆಗೆ ಬೆಂಗಳೂರಲ್ಲಿ 100 ಜನರು ಸಾವನ್ನಪ್ಪಿದ್ದಾರೆ. ಜೊತೆಗೆ ಈವರೆಗೆ ರಾಜ್ಯದಲ್ಲಿ ಕೊರೊನಾದಿಂದ ಪ್ರಾಣಕಳೆದುಕೊಂಡವರ ಸಂಖ್ಯೆ 272ಕ್ಕೇರಿದೆ.

ಇದಲ್ಲದೇ ರಾಜ್ಯದಲ್ಲಿ ಇಂದು ಹೊಸದಾಗಿ 1,502 ಕೇಸ್‌ಗಳು ಪತ್ತೆಯಾಗಿವೆ. ಅದರಲ್ಲಿ ಅತಿ ಹೆಚ್ಚು ಪ್ರಕರಣಗಳು ಅಂದ್ರೆ 889 ಕೇಸ್​ಗಳು ಕೇವಲ ಬೆಂಗಳೂರಿನಿಂದಲೇ ವರದಿಯಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಕೊರೊನಾ ಸೋಂಕಿತರ ಒಟ್ಟು ಸಂಖ್ಯೆ 18,016 ಕ್ಕೆ ಏರಿಕೆಯಾಗಿದೆ.

ಹಾಗೆಯೇ ಇದೆಲ್ಲದರ ಮಧ್ಯೆ 8,334 ಜನರು ಕೊವಿಡ್‌ನಿಂದ ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. ಇನ್ನುಳಿದಂತೆ 9,406 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರೆದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 7:57 pm, Thu, 2 July 20