ರಾಜ್ಯದಲ್ಲಿ 20 ಸಾವಿರ ಗಡಿ ಸಮೀಪಿಸಿದ ಕೊರೊನಾ, ರಾಜ್ಯಾದ್ಯಂತ ಇಂದು 21 ಮಂದಿ ಸಾವು
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿನವೂ ಮಾರಕವಾಗ್ತಿದೆ. ಅದ್ರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನಿತ್ಯವೂ ಕೇಳರಿಯದಂತಹ ರೆಕಾರ್ಡ್ ದಾಖಲಿಸುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 1694 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19,710ಕ್ಕೆ ಏರಿಕೆಯಾಗಿದೆ. ಬೆಂಗಳೂರಿನಲ್ಲಿ ಇಂದು ಒಂದೇ ದಿನ 994 ಜನರಿಗೆ ಸೋಂಕು ತಗುಲಿದ್ದು, ಇಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದಿಂದ ಈವರೆಗೆ 105ಜನರ ಸಾವಿಗೀಡಾಗಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ. ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ […]
ಬೆಂಗಳೂರು: ರಾಜ್ಯದಲ್ಲಿ ಕೊರೊನಾ ವೈರಸ್ ದಿನದಿನವೂ ಮಾರಕವಾಗ್ತಿದೆ. ಅದ್ರಲ್ಲೂ ರಾಜಧಾನಿ ಬೆಂಗಳೂರಿನಲ್ಲಿ ನಿತ್ಯವೂ ಕೇಳರಿಯದಂತಹ ರೆಕಾರ್ಡ್ ದಾಖಲಿಸುತ್ತಿದೆ. ರಾಜ್ಯದಲ್ಲಿ ಇಂದು ಹೊಸದಾಗಿ 1694 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 19,710ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಇಂದು ಒಂದೇ ದಿನ 994 ಜನರಿಗೆ ಸೋಂಕು ತಗುಲಿದ್ದು, ಇಂದು ಕೊರೊನಾ ಸೋಂಕಿಗೆ ಐವರು ಬಲಿಯಾಗಿದ್ದಾರೆ. ಬೆಂಗಳೂರಿನಲ್ಲಿ ಕೊರೊನಾದಿಂದ ಈವರೆಗೆ 105ಜನರ ಸಾವಿಗೀಡಾಗಿದ್ದಾರೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ ಇಂದು 21 ಜನ ಸಾವಿಗೀಡಾಗಿದ್ದು, ಕರುನಾಡಿನಲ್ಲಿ ಇದುವರೆಗೆ ಸೋಂಕಿನಿಂದ ಒಟ್ಟು 293 ಜನ ಉಸಿರು ಚೆಲ್ಲಿದ್ದಾರೆ. 19,710 ಸೋಂಕಿತರ ಪೈಕಿ 8,805 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 10,608 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.