AQI
TV9 Network
User
Sign In

By signing in or creating an account, you agree with Associated Broadcasting Company's Terms & Conditions and Privacy Policy.

ನಾಗಮಂಗಲ ಕೋಮುಗಲಭೆ: ಬರೊಬ್ಬರಿ 2.66 ಕೋಟಿ ಮೌಲ್ಯದ ಆಸ್ತಿ ನಾಶ

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಗಣೇಶ ವಿಸರ್ಜನೆ ವೇಳೆ ಕೋಮುಗಲಭೆ ನಡೆದಿತ್ತು. ಮುಸ್ಲಿಮರು ಮೆರವಣಿಗೆ ವೇಳೆ ಕಲ್ಲುತೂರಿದ್ದರು. ಅಲ್ಲದೇ, ಕೆಲ ಅಂಗಡಿಗಳಿಗೂ ಬೆಂಕಿ ಹಾಕಲಾಗಿತ್ತು. ಈ ಕೋಮುಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.

ನಾಗಮಂಗಲ ಕೋಮುಗಲಭೆ: ಬರೊಬ್ಬರಿ 2.66 ಕೋಟಿ ಮೌಲ್ಯದ ಆಸ್ತಿ ನಾಶ
ಸುಟ್ಟು ಕರಕಲಾದ ಅಂಗಡಿ
ಪ್ರಶಾಂತ್​ ಬಿ.
| Edited By: ವಿವೇಕ ಬಿರಾದಾರ|

Updated on:Sep 18, 2024 | 9:40 AM

Share

ಮಂಡ್ಯ ಸೆಪ್ಟೆಂಬರ್​ 18: ಗಣೇಶ ವಿಸರ್ಜನೆ ಮೆರವಣಿಗೆ ವೇಳೆ ನಾಗಮಂಗಲದಲ್ಲಿ ಕೋಮುಗಲಭೆ (Nagamangala Violence) ಸಂಭವಿಸಿತ್ತು. ಈ ಗಲಭೆಯಲ್ಲಿ ಕಿಡಿಗೇಡಿಗಳು ಹಚ್ಚಿದ ಬೆಂಕಿ ಮತ್ತು ಪೆಟ್ರೋಲ್​ ಬಾಂಬ್​ನಿಂದ ಹಲವು ಅಂಗಡಿಗಳು, ಸರಕುಗಳು ಸುಟ್ಟು ಭಸ್ಮವಾಗಿವೆ. ಗಲಭೆಯಿಂದಾಗಿ ನಾಗಮಂಗಲದಲ್ಲಿ ಅಪಾರ ಮೌಲ್ಯದ ಆಸ್ತಿ-ಪಾಸ್ತಿ ನಾಶವಾಗಿದೆ. ಗಲಭೆಯಿಂದ ಒಟ್ಟು 2.66 ಕೋಟಿ ಮೌಲ್ಯದ ಆಸ್ತಿ ನಾಶವಾಗಿದೆ.

ನಾಗಮಂಗಲ‌ ಪಟ್ಟಣದಾದ್ಯಂತ 26 ಅಂಗಡಿಗಳಿಗೆ ಕಿಡಿಗೇಡಿಗಳು ಬೆಂಕಿ ಹಚ್ಚಿದ್ದಾರೆ. 1 ಕೋಟಿ 47 ಲಕ್ಷ ಮೌಲ್ಯದ ಕಟ್ಟಡಗಳು ಸುಟ್ಟು ಭಸ್ಮವಾಗಿವೆ. 1 ಕೋಟಿ 18 ಲಕ್ಷ ಮೌಲ್ಯದ ಸರಕು ಬೆಂಕಿ ಕೆನ್ನಾಲಿಗೆಯಲ್ಲಿ ಸುಟ್ಟು ಕರಕಲಾಗಿದೆ. ಹಾನಿಗೊಳಗಾದ ಸಂತ್ರಸ್ತರಿಗೆ ಸರ್ಕಾರ ಪರಿಹಾರ ನೀಡುವ ಭರವಸೆ ನೀಡಿದೆ.

ಹೀಗಾಗಿ ವರದಿ ತಯಾರು ಮಾಡಲು ಎಸಿ ನೇತೃತ್ವದಲ್ಲಿ ಏಳು ಅಧಿಕಾರ ತಂಡ ರಚನೆ ಮಾಡಲಾಗಿತ್ತು. ಇದೀಗ ನಷ್ಟದ ಮೌಲ್ಯಮಾಪನ ಮಾಡಿ ವರದಿ ಸಿದ್ದಪಡಿಸಿ, ಸರ್ಕಾರಕ್ಕೆ ಸಲ್ಲಿಕೆ ಮಾಡಿದ್ದೇವೆ ಎಂದು ಮಂಡ್ಯ ಜಿಲ್ಲಾಧಿಕಾರಿ ಡಾ. ಕುಮಾರ ಮಾಹಿತಿ ನೀಡಿದರು. ಇನ್ನು ಎಫ್​ಐಆರ್​ನಲ್ಲಿ 4.5 ಕೋಟಿಯಷ್ಟು ನಷ್ಟವಾಗಿದೆ ಎಂದು ಉಲ್ಲೇಖಿಸಲಾಗಿದೆ. ದುಷ್ಕರ್ಮಿಗಳ ಕ್ರೌರ್ಯದಿಂದ, ವ್ಯಾಪಾರಸ್ಥರ ಬದುಕು ಬೀದಿ ಪಾಲಾಗಿದೆ.

ಇದನ್ನೂ ಓದಿ: ನಾಗಮಂಗಲ ಗಲಭೆಯಲ್ಲಿ ನಿಷೇಧಿತ PFI ಸದಸ್ಯರು ಭಾಗಿ?

ರಿಸರ್ವ್ ಪೊಲೀಸ್ ಸಿಬ್ಬಂದಿ ಊಟಕ್ಕೆ ಹೋದಾಗ ನಡೆಯಿತು ಗಲಭೆ!

ಗಲಾಟೆ ಹಿಂದೆ ಪೊಲೀಸರ ಲೋಪ ದೋಷ ಎದ್ದು ಕಾಣುತ್ತಿದೆ. ಗಣೇಶ ವಿಸರ್ಜನೆ ಮೆರವಣಿಗೆಗೆ ಕಾವಲಿಗೆ 24 ಜನ ಡಿಎಆರ್​ ಸಿಬ್ಬಂದಿಯನ್ನು ನಿಯೋಜಿಸಲಾಗಿತ್ತು. ಆದರೆ, ಈ ಸಿಬ್ಬಂದಿಗೆ ಊಟ ಕೊಡಿಸಲು ನಾಗಮಂಗಲ ಠಾಣೆ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಹಿಂದೇಟು ಹಾಕಿದ್ದರು. ಬದಲಿಗೆ 24 ಮಂದಿ ಡಿಎಆರ್​ ಸಿಬ್ಬಂದಿಯನ್ನು ಊಟಕ್ಕೆ ಬೇರೆ ಕಡೆ ಕಳುಹಿಸಿದ್ದರು. ರಿಸರ್ವ್ ಪೊಲೀಸ್ ಸಿಬ್ಬಂದಿ ‌ವಾಹನ ಹೊರಟ ಅರ್ಧ ಗಂಟೆ ನಂತರ ಕೋಮುಗಲಭೆ ಆರಂಭವಾಗಿತ್ತು.

ಗಲಾಟೆ ಆರಂಭವಾದಾಗ‌ ಸ್ಥಳದಲ್ಲಿ ಕೇವಲ ಏಳು ಸಿಬ್ಬಂದಿ‌ ಮಾತ್ರ ಇದ್ದರು. ಈ ಸಿಬ್ಬಂದಿ ಪ್ರಾಣ ಉಳಿಸಿಕೊಳ್ಳಲು‌ ಪರದಾಡಿದರು. ಪಿಎಸ್​ಐ ರವಿ ಸೇರಿದಂತೆ ಹಲವು ಸಿಬ್ಬಂದಿ ಮೇಲೆಯೇ ಕಿಡಿಗೇಡಿಗಳು ದಾಳಿ ಮಾಡಿದ್ದರು. ರಿಸರ್ವ್ ಸಿಬ್ಬಂದಿ ವಾಪಸ್‌ ಬರುವಷ್ಟರಲ್ಲಿ ಪರಿಸ್ಥಿತಿ ಕೈಮೀರಿತ್ತು. ಕಲ್ಲು, ದೊಣ್ಣೆ, ಮಾರಕಾಸ್ತ್ರ, ಪೆಟ್ರೋಲ್ ಬಾಂಬ್ ಎಸೆಯುವ ಜೊತೆಗೆ ‌ಅಂಗಡಿ ಮುಂಗಟ್ಟಿಗೆ ಬೆಂಕಿ ಹಚ್ಚಿ ಕ್ರೌರ್ಯ ಮೆರೆಯಲಾಗಿತ್ತು. ಹೀಗಾಗಿ ಇನ್ಸ್‌ಪೆಕ್ಟರ್ ಅಶೋಕ್ ಕುಮಾರ್ ಅವರನ್ನು ಗೃಹ ಇಲಾಖೆ ಅಮಾನತು ಮಾಡಿತ್ತು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 8:02 am, Wed, 18 September 24

Follow Us
ಪ್ರಶಾಂತ್​ ಬಿ.
ಪ್ರಶಾಂತ್​ ಬಿ.

ಊರು ಶಿವಮೊಗ್ಗ ಜಿಲ್ಲೆ ಭದ್ರಾವತಿ ತಾಲೂಕಿನ ಗೋಣಿಬೀಡು. ರೈತಾಪಿ ಕುಟುಂಬದಿಂದ ಬಂದ ನಾನು, ಶಂಕರಘಟ್ಟದಲ್ಲಿರುವ ಕುವೆಂಪು ವಿಶ್ವವಿದ್ಯಾನಿಲಯದಲ್ಲಿ ಪತ್ರಿಕೋದ್ಯಮ ಹಾಗೂ ಸಮೂಹ ಸಂವಹನ ವಿಭಾಗದಲ್ಲಿ ಎಂ ಎ ಪದವಿ ಪಡೆದು, ಆನಂತರ ಒಂದು ವರ್ಷಗಳ ಕಾಲ ಶಿವಮೊಗ್ಗದಲ್ಲಿ ಕೆಲ ಪತ್ರಿಕೆಗಳಲ್ಲಿ ಕೆಲಸ ಮಾಡಿ, ನಂತರ ಕಳೆದ ಹದಿಮೂರು ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡ ವಾಹಿನಿಯಲ್ಲಿ ಕೆಲಸ ನಿರ್ವಹಿಸುತ್ತಿದ್ದೇನೆ. ಒಂದು ವರ್ಷಗಳ ಕಾಲ ಹುಬ್ಬಳ್ಳಿ ವರದಿಗಾರನಾಗಿ, ಆನಂತರ ರಾಮನಗರ ಜಿಲ್ಲಾ ಪ್ರತಿನಿಧಿಯಾಗಿ ಕೆಲಸ ಮಾಡಿದ್ದು, ಪ್ರಸ್ತುತ ಮಂಡ್ಯ ಜಿಲ್ಲೆಯ ಹಿರಿಯ ವರದಿಗಾಗಿನಾಗಿ ಕರ್ತವ್ಯ ನಿರ್ವಹಿಸುತ್ತಿದ್ದೇನೆ. ಪೇಪರ್ ಹಾಗೂ ಬುಕ್ಸ್ ಗಳನ್ನ ಓದೋದು, ಕ್ರಿಕೆಟ್ ಆಡೊ ಹವ್ಯಾಸ ಇದೆ.

Read More
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
ಬಿಗ್ ಬಾಸ್ ಕನ್ನಡ: ಯಶಸ್ ಜೊತೆ ಮದುವೆ ಮಾತುಕಥೆ ಮಾಡಿದ ಸೌಂದರ್ಯಾ ಶೆಟ್ಟಿ
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
‘ಸತ್ಯ ಇನ್ ಲವ್’, ‘ಜೋಗಯ್ಯ’ ವಿಗ್ ನನಗೆ ಇಷ್ಟ ಆಗಿರಲಿಲ್ಲ: ಶಿವರಾಜ್​ಕುಮಾರ್
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ಬೆಂಗಳೂರಿನಲ್ಲಿ ಗುಂಡಿ ಮುಕ್ತ ರಸ್ತೆಗೆ ಕೃಷ್ಣಭೈರೇಗೌಡ ಪಣ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ದೊಮ್ಮಸಂದ್ರ ಫ್ಲೈಓವರ್ ಕಾಮಗಾರಿ ವಿಳಂಬಕ್ಕೆ ಕೃಷ್ಣಬೈರೇಗೌಡ ಅಸಮಾಧಾನ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಮಂಗಳೂರು MRPL ಸ್ಪೋಟ: 2 ಕಿ.ಮೀ ದೂರದಲ್ಲಿರುವ ಚರ್ಚ್​​​ಗೆ ಹಾನಿ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
ಬೆಳಗಾವಿ ಪಾಲಿಕೆ ಸಭೆಯಲ್ಲಿ BJP-ಕಾಂಗ್ರೆಸಿಗರ ನಡುವೆ 'ವಂದೇ ಮಾತರಂ' ಗದ್ದಲ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
4 ಮಂದಿ ರಕ್ಷಣೆ, ಆಸ್ಪತ್ರೆಗೆ ದಾಖಲು; 150 ಆಂಬುಲೆನ್ಸ್ ಸಿದ್ಧ
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಬೀದರ್ ಕೋಟೆಗೆ 'ಕರ್ನಾಟಕ ಪ್ರವಾಸೋದ್ಯಮ ಪ್ರಶಸ್ತಿ'
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಕೇಂದ್ರದ 10 ಅಧಿಕಾರಿಗಳ‌ ತಂಡದಿಂದ ಕರ್ನಾಟಕದಲ್ಲಿ ಬರ ಅಧ್ಯಯನ: ಎಲ್ಲೆಲ್ಲಿ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ
ಬೆಂಗಳೂರು: 4 ಗ್ಯಾಸ್ ಸಿಲಿಂಡರ್ ಸ್ಫೋಟ, ತಪ್ಪಿದ ಭಾರೀ ಅನಾಹುತ