ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ ವಂಚನೆ: ಸ್ಪಷ್ಟನೆ ನೀಡಿದ ಮಂಗಳೂರು ಸಮಾಜ ಸೇವಾ ಬ್ಯಾಂಕ್

ಮಂಗಳೂರಿನಲ್ಲಿ ನಡೆದ 2 ಕೋಟಿ ರೂ. ನಕಲಿ ಚಿನ್ನ ಅಡವಿಟ್ಟು ವಂಚನೆ ಪ್ರಕರಣದ ಬಗ್ಗೆ ಸಮಾಜ ಸೇವಾ ಸಹಕಾರಿ ಸಂಘ ಸ್ಪಷ್ಟನೆ ನೀಡಿದೆ. ಸಂಘದ ವಿರುದ್ಧ ಹರಿದಾಡುತ್ತಿರುವ ಆರೋಪಗಳನ್ನು ತಳ್ಳಿಹಾಕಿರುವ ಸಂಘ, ಪ್ರಕರಣದಲ್ಲಿ ಕಾನೂನು ಕ್ರಮ ಕೈಗೊಂಡಿರುವುದಾಗಿ ತಿಳಿಸಿದೆ. ಈ ಘಟನೆಯಲ್ಲಿ 28 ಜನರ ವಿರುದ್ಧ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ ವಂಚನೆ: ಸ್ಪಷ್ಟನೆ ನೀಡಿದ ಮಂಗಳೂರು ಸಮಾಜ ಸೇವಾ ಬ್ಯಾಂಕ್
ನಕಲಿ ಚಿನ್ನ ಅಡವಿಟ್ಟು ಕೋಟ್ಯಂತರ ರೂ ವಂಚನೆ: ಸ್ಪಷ್ಟನೆ ನೀಡಿದ ಮಂಗಳೂರು ಸಮಾಜ ಸೇವಾ ಬ್ಯಾಂಕ್
Edited By:

Updated on: Dec 25, 2024 | 3:59 PM

ಮಂಗಳೂರು, ಡಿಸೆಂಬರ್​ 25: ನಕಲಿ ಚಿನ್ನ (fake gold) ಅಡವಿಟ್ಟು ವ್ಯಕ್ತಿ ಓರ್ವ ರೂ. 2 ಕೋಟಿಗೂ ಅಧಿಕ ಸಾಲವನ್ನು ಪಡೆದು ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳದಲ್ಲಿರುವ ಸಮಾಜ ಸೇವಾ ಸಹಕಾರಿ ಸಂಘಕ್ಕೆ ವಂಚಿಸಿರುವ ಆರೋಪ ಕೇಳಿಬಂದಿತ್ತು. ಆದರೆ, ಬ್ಯಾಂಕ್​​ನ ಪ್ರಧಾನ ಕಚೇರಿಯಿಂದ ಪ್ರಕರಣದ ಕುರಿತಾಗಿ ಸಮಜಾಯಿಷಿ ಸಂದೇಶ ನೀಡಿದ್ದು, ಸಮಾಜ ಸೇವಾ ಸಹಕಾರಿ ಸಂಘವು ಉತ್ತಮ ಲಾಭದಲ್ಲಿ ಯಶಸ್ವಿಯಾಗಿ ಮುನ್ನಡೆಯುತ್ತಿದೆ. ಇದನ್ನು ಸಹಿಸಲಾಗದ ಕೆಲವರು ಸಂಘ, ಸಂಘದ ಆಡಳಿತ ಮಂಡಳಿಯ ವಿರುದ್ಧ ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿದ್ದಾರೆ ಎಂದಿದ್ದಾರೆ.

ಟಿವಿ 9ಗೆ ಪತ್ರದ ಮೂಲಕ ಸಮಜಾಯಿಷಿಯ ಸಂದೇಶ ಕಳುಹಿಸಿರುವ ಬ್ಯಾಂಕ್, ನಮ್ಮ ಸಂಘದಲ್ಲಿ ಇಂತಹ ಒಂದು ಘಟನೆ ಆಗಿದೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ಘಟನೆ ಬಗ್ಗೆ ನಾವು ಕಾನೂನು ರೀತಿಯಲ್ಲಿ ಎಲ್ಲಾ ಕ್ರಮಕೈಗೊಂಡಿದ್ದೇವೆ. ಯಾರ ಮೇಲೆ ಶಿಸ್ತು ಕ್ರಮಕೈಗೊಳ್ಳಬೇಕು ಅದನ್ನು ಕೂಡ ನಮ್ಮ ಸಂಘದ ಆಡಳಿತ ಮಂಡಳಿಯ ಸಭೆ ಕರೆದು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು: 500 ನಕಲಿ ಚಿನ್ನದ ಬಳೆ ಅಡವಿಟ್ಟು 2 ಕೋಟಿ ರೂ. ಸಾಲ ಪಡೆದ ಭೂಪ

ಮುಂದೆ ನಡೆಯುವ ಚುನಾವಣೆಯ ದೃಷ್ಟಿಯಿಂದ ಇಂತಹ ಕೃತ್ಯಗಳನ್ನು ಮಾಡಲಾಗುತ್ತಿದೆ. ಇದಕ್ಕೆ ಮುಂದಿನ ದಿನಗಳಲ್ಲಿ ಕಾನೂನು ರೀತಿಯಲ್ಲಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. ನಮಗೆ ಪೊಲೀಸರ ಮೇಲೆ ಮತ್ತು ನ್ಯಾಯಾಲಯದ ಮೇಲೆ ಗೌರವ, ನಂಬಿಕೆ ಇದೆ ಎಂದಿದ್ದಾರೆ.

ಪುತ್ತೂರು ತಾಲೂಕಿನ ಈಶ್ವರಮಂಗಲದ ಅಬೂಬಕ್ಕರ್ ಸಿದ್ದಿಕ್​ ಎಂಬಾತ ನಕಲಿ ಚಿನ್ನ ಅಡವಿಟ್ಟು 2 ಕೋಟಿ 11 ಲಕ್ಷದ 89 ಸಾವಿರದ 800 ರೂ ಸಾಲ ನೀಡಿದ್ದ ವ್ಯಕ್ತಿ. ಚಿನ್ನ ಪರೀಕ್ಷೆ ನಡೆಸುವ ಸರಫ, ಬ್ಯಾಂಕ್​ನ ಅಧ್ಯಕ್ಷ, ಜನರಲ್ ಮ್ಯಾನೇಜರ್, ನಿರ್ದೇಶಕರು, ಬ್ಯಾಂಕ್ ಸಿಬ್ಬಂದಿಗಳ ಸಹಕಾರದಿಂದಲೇ ಈ ಅವ್ಯವಹಾರ ನಡೆದಿರುವ ಆರೋಪ ಕೇಳಿಬಂದಿದೆ.

ಇದನ್ನೂ ಓದಿ: 4 ಲಕ್ಷ ರೂ ಲಂಚ ಸ್ವೀಕರಿಸುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದ ಮುಲ್ಕಿ ಆರ್‌ಐ

ಸದ್ಯ ಈ ಬಗ್ಗೆ ಬ್ಯಾಂಕ್​ನ ಸದಸ್ಯರು, ಮಾಜಿ ನಿರ್ದೇಶಕರಿಂದ ಮಂಗಳೂರಿನ ಸೆನ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಒಟ್ಟು 28 ಮಂದಿಯ ವಿರುದ್ಧ ಪ್ರಕರಣ ದಾಖಲಿಸಿರುವ ಪೊಲೀಸರು ತನಿಖೆಗೆ ಇಳಿದಿದ್ದಾರೆ.

ಕರ್ನಾಟಕದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ಅಶೋಕ್​ ಪೂಜಾರಿ

ದಕ್ಷಿಣಕನ್ನಡ ಜಿಲ್ಲೆಯ ಪುತ್ತೂರು ನಿವಾಸಿಯಾದ ಅಶೋಕ್ ಪತ್ರಿಕೋದ್ಯಮದಲ್ಲಿ ಪದವಿ ಶಿಕ್ಷಣ ಪೂರೈಸಿರುತ್ತಾರೆ. ಸ್ಥಳೀಯ ದಿನಪತ್ರಿಕೆಯ ಮೂಲಕ ವೃತ್ತಿರಂಗಕ್ಕೆ ಪಾದಾರ್ಪಣೆ ಮಾಡಿದ ಇವರು ಬಳಿಕ ಖಾಸಗಿ ಸುದ್ದಿ ವಾಹಿನಿಯಲ್ಲಿ ಉಡುಪಿ ಜಿಲ್ಲಾ ವರದಿಗಾರರಾಗಿ ಕೆಲಕಾಲ ಸೇವೆ ಸಲ್ಲಿಸಿರುತ್ತಾರೆ. ನಂತರ ಉಡುಪಿ ಹಾಗೂ ದಕ್ಷಿಣಕನ್ನಡ ಜಿಲ್ಲೆಯಲ್ಲಿ ಆರು ವರ್ಷಗಳ ಕಾಲ ದಿಗ್ವಿಜಯ ನ್ಯೂಸ್ ನ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸಿ ನಂತರ ಟಿವಿ9 ಸುದ್ದಿ ವಾಹಿನಿಯಲ್ಲಿ ಉತ್ತರ ಕನ್ನಡ ಜಿಲ್ಲಾ ವರದಿಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಪತ್ರಿಕೋದ್ಯಮ ರಂಗದಲ್ಲಿ ಇವರು ನೀಡಿದ ಸೇವೆಗೆ indiatelevision.com 2020ರಲ್ಲಿ ಅತ್ಯುತ್ತಮ ವರದಿಗಾರ ಎಂಬ ರಾಷ್ಟ್ರೀಯ ಪ್ರಶಸ್ತಿ ನೀಡಿ ಗೌರವಿಸಿದೆ.

Read More
Loading...
Unable to load recommendations.
Follow Us