ಮಹಾಮಾರಿ ಕೊರೊನಾಗೆ ರಾಜ್ಯದಲ್ಲಿ ಎರಡು ಬಲಿ! ಎಲ್ಲೆಲ್ಲಿ?

ಕಲಬುರಗಿ: ಮಹಾಮಾರಿ ಕೊರೊನಾ ವೈರಸ್​ ದೇಶದಲ್ಲೇ ಮೊದಲು ಕಾಲಿಟ್ಟಿದ್ದು ರಾಜ್ಯದ ಕಲಬುರಗಿ ಜಿಲ್ಲೆಗೆ. ಕೊರೊನಾ ವೈರಸ್​ಗೆ ಕಲಬುರಗಿ ಜಿಲ್ಲೆಯ 76 ವರ್ಷದ ವೃದ್ಧ ಮೊದಲ ಬಲಿಯಾಗಿದ್ದರು. ಇದೀಗ ಜಿಲ್ಲೆಯಲ್ಲಿ ಕೊವಿಡ್ ಸೋಂಕಿಗೆ ಮತ್ತೆ ಒಬ್ಬ ವೃದ್ಧ ಬಲಿಯಾಗಿದ್ದಾರೆ. ಮೇ 11ರಂದು ಉಸಿರಾಟ ಸಮಸ್ಯೆಯಿಂದ 60 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಜಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯುವಾಗ ವೃದ್ಧ ಸಾವಿಗೀಡಾಗಿದ್ದಾರೆ. ಕೊರೊನಾ ಕಂಟೇನ್‌ಮೆಂಟ್‌ ಜೋನ್‌ನಲ್ಲಿ ಅವರ ಮನೆಯಿತ್ತು. ಆದ್ರೆ ವೃದ್ಧನಿಗೆ ಹೇಗೆ ಸೋಂಕು ಬಂದಿದೆ ಎಂಬುದು ತಿಳಿದಿಲ್ಲ. ಈ ಬಗ್ಗೆ ಸಂಬಂಧಪಟ್ಟ […]

ಮಹಾಮಾರಿ ಕೊರೊನಾಗೆ ರಾಜ್ಯದಲ್ಲಿ ಎರಡು ಬಲಿ! ಎಲ್ಲೆಲ್ಲಿ?
Follow us
ಸಾಧು ಶ್ರೀನಾಥ್​
|

Updated on:May 13, 2020 | 2:49 PM

ಕಲಬುರಗಿ: ಮಹಾಮಾರಿ ಕೊರೊನಾ ವೈರಸ್​ ದೇಶದಲ್ಲೇ ಮೊದಲು ಕಾಲಿಟ್ಟಿದ್ದು ರಾಜ್ಯದ ಕಲಬುರಗಿ ಜಿಲ್ಲೆಗೆ. ಕೊರೊನಾ ವೈರಸ್​ಗೆ ಕಲಬುರಗಿ ಜಿಲ್ಲೆಯ 76 ವರ್ಷದ ವೃದ್ಧ ಮೊದಲ ಬಲಿಯಾಗಿದ್ದರು. ಇದೀಗ ಜಿಲ್ಲೆಯಲ್ಲಿ ಕೊವಿಡ್ ಸೋಂಕಿಗೆ ಮತ್ತೆ ಒಬ್ಬ ವೃದ್ಧ ಬಲಿಯಾಗಿದ್ದಾರೆ.

ಮೇ 11ರಂದು ಉಸಿರಾಟ ಸಮಸ್ಯೆಯಿಂದ 60 ವರ್ಷದ ವೃದ್ಧ ಮೃತಪಟ್ಟಿದ್ದಾರೆ. ಜಿಮ್ಸ್‌ ಆಸ್ಪತ್ರೆಗೆ ಕರೆದೊಯ್ಯುವಾಗ ವೃದ್ಧ ಸಾವಿಗೀಡಾಗಿದ್ದಾರೆ. ಕೊರೊನಾ ಕಂಟೇನ್‌ಮೆಂಟ್‌ ಜೋನ್‌ನಲ್ಲಿ ಅವರ ಮನೆಯಿತ್ತು. ಆದ್ರೆ ವೃದ್ಧನಿಗೆ ಹೇಗೆ ಸೋಂಕು ಬಂದಿದೆ ಎಂಬುದು ತಿಳಿದಿಲ್ಲ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಮಾಹಿತಿ ಕಲೆ ಹಾಕುತ್ತಿದ್ದಾರೆ. ಈವರೆಗೆ ಕಲಬುರಗಿ ಜಿಲ್ಲೆಯಲ್ಲಿ ವೈರಸ್ ಸೋಂಕಿಗೆ ಒಟ್ಟು 7 ಜನರು ಬಲಿಯಾಗಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೊಬ್ಬರು ಬಲಿ:

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ ಮತ್ತೊಬ್ಬರು ಬಲಿಯಾಗಿದ್ದಾರೆ. ಬೋಳೂರಿನ 58 ವರ್ಷದ ಮಹಿಳೆ ಕೊರೊನಾದಿಂದ ಮೃತಪಟ್ಟಿದ್ದಾರೆ. ಮಿದುಳು ಸಂಬಂಧಿತ ಕಾಯಿಲೆಯಿಂದ ಬಳಲುತ್ತಿದ್ದ ಮಹಿಳೆ ಮಂಗಳೂರಿನ ಕೊವಿಡ್ ಆಸ್ಪತ್ರೆಯಲ್ಲಿ ಸಾವಿಗೀಡಾಗಿದ್ದಾರೆ.

ಮಹಿಳೆಗೆ ಆಸ್ಪತ್ರೆಯ ಸ್ವೀಪರ್‌ ಸಂಪರ್ಕದಿಂದ ಸೋಂಕು ತಗುಲಿತ್ತು. ಏಪ್ರಿಲ್ 30ರಂದು ಮಹಿಳೆಗೆ ಕೊರೊನಾ ದೃಢಪಟ್ಟಿತ್ತು. ಫಸ್ಟ್‌ ನ್ಯೂರೋ ಆಸ್ಪತ್ರೆಯಲ್ಲಿ ಈ ಮಹಿಳೆ ಚಿಕಿತ್ಸೆ ಪಡೆಯುತ್ತಿದ್ದರು. ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೊನಾ ಸೋಂಕಿಗೆ 4ಮಂದಿ ಬಲಿಯಾಗಿದ್ದಾರೆ.

Published On - 2:39 pm, Wed, 13 May 20

‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
‘ವಟವಟ ಅಂತಾನೆ’; ಐಶ್ವರ್ಯಾಗೆ ಶಿಶಿರ್ ಮೇಲಿದ್ದ ಅಭಿಪ್ರಾಯ ಬದಲಾಯ್ತಾ?
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಮನೆಯಲ್ಲಿ ತೆಂಗಿನಕಾಯಿ ಕಟ್ಟುವುದರ ಹಿಂದಿನ ಅರ್ಥವೇನು ಗೊತ್ತಾ? ವಿಡಿಯೋ ನೋಡಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಇಂದಿನ ರಾಶಿ ಫಲ, ಪಂಚಾಂಗ ಮತ್ತು ಜ್ಯೋತಿಷ್ಯ ಭವಿಷ್ಯ ತಿಳಿಯಿರಿ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಶರಣಾದ ನಕ್ಸಲರ ಶಸ್ತ್ರಾಸ್ತ್ರ ಎಲ್ಲಿ? ಕೊನೆಗೂ ಉತ್ತರಿಸಿದ ಸಿದ್ದರಾಮಯ್ಯ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಬುಲಂದ್‌ಶಹರ್‌ನಲ್ಲಿ ಟ್ರ್ಯಾಕ್ಟರ್ ಸ್ಟಂಟ್‌ ವೇಳೆ ದುರಂತ
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಸರ್ಕಾರದ ಪ್ರಸ್ತಾವನೆಯನ್ನು ಆಶಾ ಕಾರ್ಯಕರ್ತೆಯರು ಒಪ್ಪಿಲ್ಲವೇ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಡಿಕೆಶಿ ಮಾಡಿಸಿದ ಹೋಮದ ಹಿಂದಿನ ರಹಸ್ಯವೇನು? ಶತ್ರುನಾಶವಾಗುತ್ತಾ?
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಶಾಸಕ ಚಂದ್ರರನ್ನು ಸುನೀಲ ಮಾಮಾ ಅಂತ ಕರೆಯುತ್ತಿದ್ದ: ಆನಂದ್
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ