ಇಂಜೆಕ್ಷನ್ ರಿಯಾಕ್ಷನ್ನಿಂದ 2 ತಿಂಗಳು ಮಗು ಸಾವು ಆರೋಪ
ಕೊಡಗು: ಮಡಿಕೇರಿ ತಾಲೂಕಿನ ಭಾಗಮಂಡಲ ಸರ್ಕಾರಿ ಆಸ್ಪತ್ರೆ ವೈದ್ಯರು ನೀಡಿದ ಇಂಜೆಕ್ಷನ್ ರಿಯಾಕ್ಷನ್ ಆಗಿ 2 ತಿಂಗಳ ಮಗು ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ. ಭಾಗಮಂಡಲದ ತೇಜಸ್ವಿನಿ, ಅಶೋಕ್ ದಂಪತಿಯ ಮಗು ಇಂಜೆಕ್ಷನ್ ಕೊಟ್ಟ ತಕ್ಷಣವೇ ಮೃತಪಟ್ಟಿದೆ ಎಂದು ಹೇಳಲಾಗಿದೆ. ಭಾಗಮಂಡಲ ಸರ್ಕಾರಿ ಆಸ್ಪತ್ರೆ ವೈದ್ಯರು 2 ತಿಂಗಳಿಗೆ ನೀಡಬೇಕಾಗಿದ್ದ ಇಂಜೆಕ್ಷನ್ ಕೊಟ್ಟಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣವೇ ಮಗುವಿಗೆ ರಿಯಾಕ್ಷನ್ ಆಗಿದೆ. ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಪೋಷಕರು ಮಗುವನ್ನು ಕರೆತಂದಿದ್ದಾರೆ. ಮಡಿಕೇರಿ ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಮಗು ಮೃತಪಟ್ಟು 1 […]
ಕೊಡಗು: ಮಡಿಕೇರಿ ತಾಲೂಕಿನ ಭಾಗಮಂಡಲ ಸರ್ಕಾರಿ ಆಸ್ಪತ್ರೆ ವೈದ್ಯರು ನೀಡಿದ ಇಂಜೆಕ್ಷನ್ ರಿಯಾಕ್ಷನ್ ಆಗಿ 2 ತಿಂಗಳ ಮಗು ಮೃತಪಟ್ಟಿದೆ ಎಂದು ಆರೋಪಿಸಲಾಗಿದೆ. ಭಾಗಮಂಡಲದ ತೇಜಸ್ವಿನಿ, ಅಶೋಕ್ ದಂಪತಿಯ ಮಗು ಇಂಜೆಕ್ಷನ್ ಕೊಟ್ಟ ತಕ್ಷಣವೇ ಮೃತಪಟ್ಟಿದೆ ಎಂದು ಹೇಳಲಾಗಿದೆ.
ಭಾಗಮಂಡಲ ಸರ್ಕಾರಿ ಆಸ್ಪತ್ರೆ ವೈದ್ಯರು 2 ತಿಂಗಳಿಗೆ ನೀಡಬೇಕಾಗಿದ್ದ ಇಂಜೆಕ್ಷನ್ ಕೊಟ್ಟಿದ್ದಾರೆ. ಇಂಜೆಕ್ಷನ್ ಕೊಟ್ಟ ತಕ್ಷಣವೇ ಮಗುವಿಗೆ ರಿಯಾಕ್ಷನ್ ಆಗಿದೆ. ಬಳಿಕ ಮಡಿಕೇರಿ ಜಿಲ್ಲಾಸ್ಪತ್ರೆಗೆ ಪೋಷಕರು ಮಗುವನ್ನು ಕರೆತಂದಿದ್ದಾರೆ. ಮಡಿಕೇರಿ ಆಸ್ಪತ್ರೆಯಲ್ಲಿ ಪರಿಶೀಲಿಸಿದಾಗ ಮಗು ಮೃತಪಟ್ಟು 1 ಗಂಟೆಯಾಗಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಈ ಸಂಬಂಧ ಭಾಗಮಂಡಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.