ಕೊವಿಡ್-19: ರಾಜ್ಯದಲ್ಲಿಂದು 20 ಸಾವು, 2,362 ಹೊಸ ಪಾಸಿಟಿವ್ ಪ್ರಕರಣಗಳು | 20 Covid-19 related deaths and 2,362 new cases in Karnataka on Tuesday
ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 20 ಜನ ಮೃತಪಟ್ಟಿದ್ದಾರೆ ಮತ್ತು ಹೊಸದಾಗಿ 2,362 ಜನರಲ್ಲಿ ಸೋಂಕು ದೃಢಪಟ್ಟಿದೆ. ಕರ್ನಾಟಕದಲ್ಲಿ ಇದುವರೆಗೆ 11,430 ಮಹಾಮಾರಿಗೆ ಆಹುತಿಯಾಗಿದ್ದು ಸೋಂಕಿತರ ಸಂಖ್ಯೆ 8,51,212ಕ್ಕೇರಿದೆ. ಅವರ ಪೈಕಿ 8,08,700 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 31,063 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ, ಬೆಂಗಳೂರಲ್ಲಿ ಇಂದು ಕೊವಿಡ್-19 ವ್ಯಾಧಿಗೆ 8 ಜನ ಬಲಿಯಾಗಿದ್ದಾರೆ […]

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಮಂಗಳವಾರ ಸಾಯಂಕಾಲ ಲಭ್ಯವಾಗಿರುವ ಮಾಹಿತಿ ಪ್ರಕಾರ ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 20 ಜನ ಮೃತಪಟ್ಟಿದ್ದಾರೆ ಮತ್ತು ಹೊಸದಾಗಿ 2,362 ಜನರಲ್ಲಿ ಸೋಂಕು ದೃಢಪಟ್ಟಿದೆ.
ಕರ್ನಾಟಕದಲ್ಲಿ ಇದುವರೆಗೆ 11,430 ಮಹಾಮಾರಿಗೆ ಆಹುತಿಯಾಗಿದ್ದು ಸೋಂಕಿತರ ಸಂಖ್ಯೆ 8,51,212ಕ್ಕೇರಿದೆ. ಅವರ ಪೈಕಿ 8,08,700 ಜನ ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ 31,063 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಹಾಗೆಯೇ, ಬೆಂಗಳೂರಲ್ಲಿ ಇಂದು ಕೊವಿಡ್-19 ವ್ಯಾಧಿಗೆ 8 ಜನ ಬಲಿಯಾಗಿದ್ದಾರೆ ಮತ್ತು ನಿನ್ನೆಯಿಂದ 1,176 ಹೊಸ ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ನಗರದಲ್ಲಿ ಕೊರೊನಾದಿಂದ ಈವರೆಗೆ 3,969 ಜನರು ಮರಣಿಸಿದ್ದಾರೆ ಹಾಗೂ ಸೋಂಕು ಪೀಡಿತರ ಸಂಖ್ಯೆ 3,51,481 ತಲುಪಿದೆ
ಸೋಂಕಿತರ ಪೈಕಿ 3,30,205 ಜನರು ಗುಣಮುಖರಾಗಿದ್ದಾರೆ ಮತ್ತು ಉಳಿದ 17,306 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ದೊರೆತಿರುವ ಮಾಹಿತಿ ತಿಳಿಸುತ್ತದೆ.




