ಇದು ಅಧಿಕೃತ.. ಕಾಲೇಜು ವಿದ್ಯಾರ್ಥಿಗಳಿಗೆ ನೋ ಎಕ್ಸಾಂ.. ಎಲ್ಲಾ ಪಾಸ್ ಪಾಸ್!

| Updated By:

Updated on: Jul 10, 2020 | 6:00 PM

[lazy-load-videos-and-sticky-control id=”fk13b2wypRA”] ಮಾರಕ ಕೊವಿಡ್19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಕೊಂಡಿದೆ. 2019-20ನೇ ಸಾಲಿನಲ್ಲಿ ಇಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆಯೇ ಪಾಸ್​ ಮಾಡಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ ಇಂಟರ್ನಲ್ ಮಾರ್ಕ್ಸ್ ಆಧರಿಸಿ ಅವರನ್ನು ಪಾಸ್ ಮಾಡಲು ಸರ್ಕಾರ ಸೂಚಿಸಿದೆ. ಅಂತಿಮ‌ ವರ್ಷದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲೇ ಬೇಕು ಆದರೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಇರುತ್ತದೆ. […]

ಇದು ಅಧಿಕೃತ.. ಕಾಲೇಜು ವಿದ್ಯಾರ್ಥಿಗಳಿಗೆ ನೋ ಎಕ್ಸಾಂ.. ಎಲ್ಲಾ ಪಾಸ್ ಪಾಸ್!
ಡಾ. ಸಿ.ಎನ್​ ಅಶ್ವಥ್​ ನಾರಾಯಣ್​
Follow us on

[lazy-load-videos-and-sticky-control id=”fk13b2wypRA”]

ಮಾರಕ ಕೊವಿಡ್19 ಹಿನ್ನೆಲೆಯಲ್ಲಿ ವಿದ್ಯಾರ್ಥಿಗಳ ಹಿತದೃಷ್ಟಿಯಿಂದ ರಾಜ್ಯ ಸರಕಾರ ಮಹತ್ವದ ನಿರ್ಧಾರ ಕೈಕೊಂಡಿದೆ. 2019-20ನೇ ಸಾಲಿನಲ್ಲಿ ಇಂಜಿನಿಯರಿಂಗ್ ಸೇರಿ ಇತರ ಪದವಿ, ಸ್ನಾತಕೋತ್ತರ, ಡಿಪ್ಲೊಮಾ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ಪ್ರಥಮ, ದ್ವಿತೀಯ ವರ್ಷದ ವಿದ್ಯಾರ್ಥಿಗಳಿಗೆ ಪರೀಕ್ಷೆ ಇಲ್ಲದೆಯೇ ಪಾಸ್​ ಮಾಡಲು ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳ ಇಂಟರ್ನಲ್ ಮಾರ್ಕ್ಸ್ ಆಧರಿಸಿ ಅವರನ್ನು ಪಾಸ್ ಮಾಡಲು ಸರ್ಕಾರ ಸೂಚಿಸಿದೆ.

ಅಂತಿಮ‌ ವರ್ಷದ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲೇ ಬೇಕು
ಆದರೆ ಅಂತಿಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಮಾತ್ರ ಪರೀಕ್ಷೆ ಇರುತ್ತದೆ. ಅಂತಿಮ ವರ್ಷದ ಪಿಜಿ ವಿದ್ಯಾರ್ಥಿಗಳಿಗೆ ಸೆಪ್ಟೆಂಬರ್‌ ತಿಂಗಳ ಅಂತ್ಯದೊಳಗೆ ಆನ್​ಲೈನ್​ ಮೂಲಕ ಪರೀಕ್ಷೆ ನಡೆಸಲಾಗುತ್ತೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಅಶ್ವತ್ಥ್ ನಾರಾಯಣ ತಿಳಿಸಿದ್ದಾರೆ.

ವಿದ್ಯಾರ್ಥಿಗಳ ಆರೋಗ್ಯ ಮತ್ತು ಭವಿಷ್ಯವನ್ನು ಗಣನೆಗೆ ತೆಗೆದುಕೊಂಡು ಶಿಕ್ಷಣ ತಜ್ಞರು, ವಿವಿಗಳ ಕುಲಪತಿಗಳ ಜತೆ ನಿರಂತರ ಸಮಾಲೋಚನೆ ನಡೆಸಿದ ನಂತರ ಈ ಮಹತ್ವದ ನಿರ್ಧಾರ ಕೈಕೊಳ್ಳಲಾಗಿದೆ. ತೀರ್ಮಾನವನ್ನು ಕೈಗೊಳ್ಳುವ ಮುನ್ನ ಯುಜಿಸಿ ಮಾಡಿರುವ ಶಿಫಾರಸುಗಳು ಹಾಗೂ ಅದರ ನಿಯಮಾವಳಿಗಳನ್ನು ಗಣನೆಗೆ ತೆಗೆದುಕೊಳ್ಳಲಾಗಿದೆ.

ಈ ನಿರ್ಧಾರ ಪ್ರಸಕ್ತ ಶೈಕ್ಷಣಿಕ ವರ್ಷಕ್ಕೆ (2019-20) ಮಾತ್ರ ಸೀಮಿತವಾಗಿರುತ್ತದೆ. ಸರಕಾರದ ಈ ನಿರ್ಧಾರಕ್ಕೆ ಕುಲಪತಿಯೂ ಆಗಿರುವ ರಾಜ್ಯಪಾಲ ವಜೂಭಾಯಿ ವಾಲ ಅವರು ಹಸಿರು ನಿಶಾನೆ ತೋರಿಸಿದ್ದಾರೆ ಎಂದು ಉನ್ನತ ಶಿಕ್ಷಣ ಖಾತೆ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ. ಸಿ.ಎನ್. ಅಶ್ವತ್ಥನಾರಾಯಣ ತಿಳಿಸಿದರು.

Published On - 2:40 pm, Fri, 10 July 20