2023ನೇ ಸಾಲಿನ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರ, ಮುದ್ರಾಂಕ, ನೋಂದಣಿ ಶುಲ್ಕ ಹೆಚ್ಚಳ

2023 Karnataka Stamp duty Bill Passed: ಹಣಕಾಸು ಸಂಪನ್ಮೂಲಗಳನ್ನು ಕ್ರೋಢೀಕರಿಸುವ ಉದ್ದೇಶದಿಂದ ಮುದ್ರಾಂಕ ಶುಲ್ಕವನ್ನು (Stamp Duty) ಹೆಚ್ಚಿಸುವ ವಿಧೇಯಕ ಅಂಗೀಕಾರವಾಗಿದೆ. ಇಂದು(ಡಿಸೆಂಬರ್ 11) ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ 2023ನೇ ಸಾಲಿನ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರವಾಗಿದೆ. ಹಾಗಾದ್ರೆ, ಏನಿದು ಸ್ಟಾಂಪ್ ತಿದ್ದುಪಡಿ ವಿಧೇಯಕ? ಎನ್ನುವ ವಿವರ ಈ ಕೆಳಗಿನಂತಿದೆ.

2023ನೇ ಸಾಲಿನ ಕರ್ನಾಟಕ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರ, ಮುದ್ರಾಂಕ, ನೋಂದಣಿ ಶುಲ್ಕ ಹೆಚ್ಚಳ
ಸಾಂದರ್ಭಿಕ ಚಿತ್ರ
Follow us
| Updated By: ರಮೇಶ್ ಬಿ. ಜವಳಗೇರಾ

Updated on: Dec 11, 2023 | 3:26 PM

ಬೆಳಗಾವಿ, (ಡಿಸೆಂಬರ್ 11): 2023ನೇ ಸಾಲಿನ ಕರ್ನಾಟಕ ಸ್ಟಾಂಪು(ತಿದ್ದುಪಡಿ) ವಿಧೇಯಕ ಅಂಗೀಕಾರವಾಗಿದೆ. ಇಂದು (ಡಿಸೆಂಬರ್ 11) ಬೆಳಗಾವಿಯ ಚಳಿಗಾಲದ ಅಧಿವೇಶನದಲ್ಲಿ ಸ್ಟಾಂಪ್ ತಿದ್ದುಪಡಿ ವಿಧೇಯಕ ಅಂಗೀಕಾರಗೊಂಡಿದೆ. ಇನ್ನು ಈ ಬಗ್ಗೆ ಕಂದಾಯ ಸಚಿವ ಕೃಷ್ಣಬೈರೇಗೌಡ ಪ್ರತಿಕ್ರಿಯಿಸಿದ್ದು, ನೋಂದಣಿ ಇಲಾಖೆಯಲ್ಲಿ ಸ್ಟಾಂಪ್ ನಿಂದ ಬರುವ ಆದಾಯ ಕೇವಲ 10%. ಅದರಲ್ಲಿ ಸೋರಿಕೆ ತಡೆಗಟ್ಟಲು ಕ್ರಮದ ಜೊತೆಗೆ ಪರಿಷ್ಕರಣೆಗೆ ನಿರ್ಧಾರಿಸಿರುವುದಾಗಿ ಸ್ಪಷ್ಟಪಡಿಸಿದರು.

ಪವರ್ ಆಫ್ ಅಟಾರ್ನಿ, ಡೀಡ್ಸ್​​ ಆ್ಯಂಡ್ ಅಫಿಡವಿಟ್‌ ಹಾಗೂ ಇತರ ಕಾನೂನು ದಾಖಲೆಗಳಿಗೆ ಸಂಬಂಧಿಸಿದ ಮುದ್ರಾಂಕ ಶುಲ್ಕ ಹೆಚ್ಚಳವಾಗಲಿದೆ. ಮುದ್ರಾಂಕ ಶುಲ್ಕ ಮತ್ತು ನೋಂದಣಿ ಶುಲ್ಕಗಳು ರಾಜ್ಯ ಸರ್ಕಾರಕ್ಕೆ ನಿರ್ಣಾಯಕ ಆದಾಯದ ಮಾರ್ಗಗಳಾಗಿವೆ. ಇವುಗಳ ಮೂಲಕ ಈ ಹಣಕಾಸು ವರ್ಷದಲ್ಲಿ 25,000 ರೂ. ಕೋಟಿ ಸಂಗ್ರಹಿಸುವ ಗುರಿಯನ್ನು ಸರ್ಕಾರ ಹೊಂದಿದೆ.

ಇದನ್ನೂ ಓದಿ: Belagavi Session: ವೈದ್ಯರ ಕಡ್ಡಾಯ ಗ್ರಾಮೀಣ ಸೇವೆಗೆ ವಿನಾಯಿತಿ ನೀಡುವ ವಿಧೇಯಕ ಅಂಗೀಕಾರ

ಎಷ್ಟಾಗಲಿದೆ ಪರಿಷ್ಕೃತ ಮುದ್ರಾಂಕ ಶುಲ್ಕ?

ಮಸೂದೆ ಪ್ರಕಾರ, ದತ್ತು ಪತ್ರಗಳ ಮೇಲಿನ ಮುದ್ರಾಂಕ ಶುಲ್ಕ 500 ರಿಂದ 1,000 ರೂ.ಗೆ ಏರಿಕೆಯಾಗಲಿದೆ. ಸದ್ಯ 20 ರೂಪಾಯಿಗಳ ಮುದ್ರಾಂಕ ಶುಲ್ಕವನ್ನು ಹೊಂದಿರುವ ಅಫಿಡವಿಟ್​​ಗಳಿಗೆ ಮುಂದೆ 100 ರೂಪಾಯಿ ವರೆಗೆ ಮುದ್ರಾಂಕ ಶುಲ್ಕ ಇರಲಿದೆ.

ಪವರ್ ಆಫ್ ಅಟಾರ್ನಿ ಮೇಲಿನ ಮುದ್ರಾಂಕ ಶುಲ್ಕವನ್ನು 100 ರೂ.ನಿಂದ 500 ರೂ.ಗೆ ಹೆಚ್ಚಿಸಲಾಗುತ್ತದೆ. ಐದಕ್ಕಿಂತ ಹೆಚ್ಚು ಮಂದಿ, ಆದರೆ 10 ಕ್ಕಿಂತ ಕಡಿಮೆ ವ್ಯಕ್ತಿಗಳು ಜಂಟಿಯಾಗಿ ಪವರ್ ಆಫ್ ಅಟಾರ್ನಿ ನೀಡುವುದಾದರೆ ಅದರ ಮೇಲಿನ ಮುದ್ರಾಂಕ ಶುಲ್ಕ 200 ರೂ.ನಿಂದ 1,000 ರೂ.ಗೆ ಹೆಚ್ಚಳವಾಗಲಿದೆ.

ನಗರ ಪ್ರದೇಶಗಳಲ್ಲಿರುವ ಆಸ್ತಿ ವಿಭಜನಾ ಪತ್ರಗಳಿಗೆ ಮುದ್ರಾಂಕ ಶುಲ್ಕವನ್ನು ಪ್ರತಿ ಷೇರಿಗೆ 1,000 ರೂ.ನಿಂದ 5,000 ರೂ.ಗೆ ಹೆಚ್ಚಿಸಲು ಪ್ರಸ್ತಾಪಿಸಲಾಗಿದೆ. ನಗರ ಮಿತಿಯಿಂದ ಹೊರಗಿರುವ ಆಸ್ತಿಗಳಿಗೆ, ಪ್ರಸ್ತುತ 500 ರೂ. ಬದಲಾಗಿ ಪ್ರತಿ ಷೇರಿಗೆ 3,000 ರೂ. ಮಾಡಲು ಪ್ರಸ್ತಾವಿಸಲಾಗಿದೆ. ಕೃಷಿ ಆಸ್ತಿಗಳನ್ನು ವಿಭಜಿಸಲು ಪ್ರತಿ ಷೇರಿಗೆ 250 ರೂ. ಬದಲಾಗಿ 1,000 ರೂ.ಗೆ ಹೆಚ್ಚಿಸಲು ತೀರ್ಮಾನಿಸಲಾಗಿದೆ.

ವಿಚ್ಛೇದನ ಪತ್ರಗಳ ಮೇಲಿನ ಸ್ಟ್ಯಾಂಪ್ ಡ್ಯೂಟಿ ಕೂಡ 100 ರಿಂದ 500 ರೂ.ಗೆ ಹೆಚ್ಚಾಗಲಿದೆ. ಪ್ರಮಾಣೀಕೃತ ಪ್ರತಿಗಳಿಗೆ, ಸ್ಟ್ಯಾಂಪ್ ಸುಂಕವನ್ನು 5 ರಿಂದ 20 ಕ್ಕೆ ಹೆಚ್ಚಿಸಲು ವಿಧೇಯಕದಲ್ಲಿದೆ. ಅಲ್ಲದೇ ಟ್ರಸ್ಟ್‌ಗಳನ್ನು ನೋಂದಾಯಿಸುವುದು ಸಹ ದುಬಾರಿಯಾಗಲಿದೆ. ಕಂಪನಿಗಳ ವಿಲೀನ ಮತ್ತಿತರ ಪ್ರಕ್ರಿಯೆಗಳ ಶುಲ್ಕದಲ್ಲೂ ಸಹ ಹೆಚ್ಚಳವಾಗಲಿದೆ.

ಕರ್ನಾಟಕದ ಮತ್ತಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
ಮನೆಯ ಬಾಗಿಲಿಗೆ ಸ್ಪಟಿಕ ಕಟ್ಟುವುದರ ಹಿಂದಿನ ಕಾರಣ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
Nithya Bhavishya: ಭಾದ್ರಪದ ಮಾಸ ಮೂರನೇ ಶುಕ್ರವಾರದ ರಾಶಿಭವಿಷ್ಯ ತಿಳಿಯಿರಿ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹುಬ್ಬಳ್ಳಿ: ಕಚ್ಚಿದ ಹಾವಿನೊಂದಿಗೆ ಆಸ್ಪತ್ರೆಗೆ ಬಂದ ಯುವಕ
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ಹಳೆ ಬೈಕ್‌ಗೆ ಬಣ್ಣ ಬಳಿದು ಕೊಟ್ಟು ರೈತನಿಗೆ ಮೋಸ ಮಾಡಿದ್ರಾ ಶೋ ರೂಮ್‌ನವರು?
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ನಟ ಮಯೂರ್ ಪಟೇಲ್ ವಿನಯವನ್ನು ಕೊಂಡಾಡಿದ ದುನಿಯಾ ವಿಜಯ್
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ವಿಮಾನ ಟೇಕ್ ಆಫ್ ಆಗುವಾಗ ರನ್​ವೇಯಲ್ಲಿ ಮರಿಗಳ ಜೊತೆ ಕಾಣಿಸಿಕೊಂಡ ಚಿರತೆ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಭರ್ಜರಿ ಸಿಕ್ಸರ್ ಸಿಡಿಸಿದ ಅಶ್ವಿನ್​ಗೆ ಅಜ್ಜಿಯ ಮೆಚ್ಚುಗೆ; ವಿಡಿಯೋ ನೋಡಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಉಜ್ಜಯಿನಿ ಮಹಾಕಾಳೇಶ್ವರ ದೇವಸ್ಥಾನದಲ್ಲಿ ಪೂಜೆ ಸಲ್ಲಿಸಿದ ರಾಷ್ಟ್ರಪತಿ
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಹಾಲಿನ ದರ ಏರಿಕೆ ಬಿಸಿ: ಎಷ್ಟು ಹೆಚ್ಚಳ? KMF ಅಧ್ಯಕ್ಷ ಹೇಳಿದ್ದಿಷ್ಟು
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ
ಪ್ಯಾಲೆಸ್ತೀನ್ ಧ್ವಜ ಹಿಡಿದರೆ ತಪ್ಪೇನು? ಸಚಿವ ಜಮೀರ್ ಅಹ್ಮದ್ ಪ್ರಶ್ನೆ