Karnataka Dam Water Level: ಮೇ 15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ

ಕರ್ನಾಟಕದ ಜಲಾಶಯಗಳ ಮೇ 15ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಮೇ 15ರ ರಾಜ್ಯದ ಪ್ರಮುಖ ಡ್ಯಾಂಗಳ ನೀರಿನ ಮಟ್ಟದ ವಿವರ ಇಲ್ಲಿದೆ
ಮಂಚನಬೆಲೆ ಅಣೆಕಟ್ಟು
Follow us
|

Updated on: May 15, 2024 | 7:11 AM

ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಉತ್ತಮ ಮಳೆಯಾಗುತ್ತಿದೆ. ಇದರಿಂದ ಜಲಾಶಯಗಳಿಗೆ ಒಳಹರಿವು ಅಲ್ಪ ಪ್ರಮಾಣದಲ್ಲಿ ಹೆಚ್ಚಾಗಿದೆ. ಇದರಿಂದ ಡ್ಯಾಂಗಳಲ್ಲಿ ನೀರಿನ ಪ್ರಮಾಣ ಅಲ್ಪ ಮಟ್ಟಿಗೆ ಏರಿಕೆ ಕಂಡಿದೆ. ಆದರೆ ರಾಜ್ಯದ ಬಹುತೇಕ ಜಲಾಶಯಗಳಲ್ಲಿ ಕಳೆದ ವರ್ಷಕ್ಕೆ ಹೋಲಿಸಿದರೆ ಈ ಬಾರಿ ನೀರಿನ ಪ್ರಮಾಣ ಕಡಿಮೆ. ಹಾಗಾದರೆ ರಾಜ್ಯದ ಜಲಾಶಯಗಳಲ್ಲಿ ನೀರಿನ ಪ್ರಮಾಣ ಎಷ್ಟಿದೆ? (Karnataka Dam Water Level) ಮೇ 15 ಒಳಹರಿವು, ಹೊರಹರಿವು ಎಷ್ಟು? ಎಂಬ ಸಂಪೂರ್ಣ ಇಲ್ಲಿದೆ ಮಾಹಿತಿ

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 27.15 24.24 0 7893
ತುಂಗಭದ್ರಾ ಜಲಾಶಯ (Tungabhadra Dam) 497.71 105.79 3.42 3.30 0 90
ಮಲಪ್ರಭಾ ಜಲಾಶಯ (Malaprabha Dam) 633.80 37.73 7.92 9.49 0 232
ಕೆ.ಆರ್.ಎಸ್ (KRS Dam) 38.04 49.45 10.63 13.63 802 541
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 16.81 24.59 86 1758
ಕಬಿನಿ ಜಲಾಶಯ (Kabini Dam) 696.13 19.52 6.38 4.81 41 500
ಭದ್ರಾ ಜಲಾಶಯ (Bhadra Dam) 657.73 71.54 13.38 28.07 479 375
ಘಟಪ್ರಭಾ ಜಲಾಶಯ (Ghataprabha Dam) 662.91 51.00 13.74 7.92 0 4921
ಹೇಮಾವತಿ ಜಲಾಶಯ (Hemavathi Dam) 890.58 37.10 9.11 17.49 300 250
ವರಾಹಿ ಜಲಾಶಯ (Varahi Dam) 594.36 31.10 4.38 3.30 0 0
ಹಾರಂಗಿ ಜಲಾಶಯ (Harangi Dam)​​ 871.38 8.50 2.94 2.67 262 300
ಸೂಫಾ (Supa Dam) 564.00 145.33 37.13 49.37 0 1628

ಮೇ 22ರ ವರೆಗೆ ರಾಜ್ಯದಾದ್ಯಂತ ಗುಡುಗು, ಮಿಂಚು ಮತ್ತು ಜೋರಾದ ಗಾಳಿಯೊಂದಿಗೆ ಮಳೆ ಹಾಗೂ ಅಲ್ಲಲ್ಲಿ ಭಾರೀ ಮಳೆ ಮಳೆಯಾಗುವ ಸಾಧ್ಯತೆ ಇದೆ. ನಂತರ ರಾಜ್ಯದಲ್ಲಿ ಮಳೆ ಕಡಿಮೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ