ಕೊರೊನಾ ಎರಡನೇ ಅಲೆಯಲ್ಲಿ 2062 ಮಕ್ಕಳಿಗೆ ಸೋಂಕು ಪತ್ತೆ; ಮೂರನೇ ಅಲೆ ಮುನ್ನವೇ ಬಾಗಲಕೋಟೆ ಜಿಲ್ಲಾಡಳಿತದಿಂದ ಸಿದ್ಧತೆ

ಬಾಗಲಕೋಟೆ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ ಇವರೆಗೂ 2062 ಮಕ್ಕಳಿಗೆ ಸೋಂಕು ತಗಲಿದೆ. 0 ದಿಂದ 10 ವರ್ಷದ 694 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದರೆ, 11 ರಿಂದ 18ವರ್ಷದ 1368 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ ಈಗಾಗಲೇ ಶೇಕಡಾ 50ಕ್ಕೂ ಹೆಚ್ಚು ಮಕ್ಕಳು ಸಂಪೂರ್ಣವಾಗಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಮಾಧಾನದ ವಿಷಯ ಎಂದರೆ ಈ ಸೋಂಕಿಗೆ ಯಾವುದೇ ಮಕ್ಕಳು ಬಲಿಯಾಗಿಲ್ಲ.

ಕೊರೊನಾ ಎರಡನೇ ಅಲೆಯಲ್ಲಿ 2062 ಮಕ್ಕಳಿಗೆ ಸೋಂಕು ಪತ್ತೆ; ಮೂರನೇ ಅಲೆ ಮುನ್ನವೇ ಬಾಗಲಕೋಟೆ ಜಿಲ್ಲಾಡಳಿತದಿಂದ ಸಿದ್ಧತೆ
ಪ್ರಾತಿನಿಧಿಕ ಚಿತ್ರ
Follow us
preethi shettigar
|

Updated on: May 31, 2021 | 3:50 PM

ಬಾಗಲಕೋಟೆ: ಕೊರೊನಾ ಎರಡನೇ ಅಲೆ ಮಧ್ಯ ವಯಸ್ಕರನ್ನು ಸಾವಿನ ಕೂಪಕ್ಕೆ ತಳ್ಳುತ್ತಿದೆ. ಇನ್ನು ಮುಂಬರುವ ಮೂರನೇ ಅಲೆ ಮಕ್ಕಳಿಗೆ ಹೆಚ್ಚು ಅಪಾಯಕಾರಿ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಆದರೆ ಕೊರೊನಾ ಎರಡನೇ ಅಲೆಯಲ್ಲಿಯೇ ಮಕ್ಕಳು ಕೊರೊನಾಗೆ ತುತ್ತಾಗುತ್ತಿದ್ದಾರೆ. ಬಾಗಲಕೋಟೆ ಜಿಲ್ಲೆಯಲ್ಲಿ ಎರಡನೇ ಅಲೆಗೆ ಅದಾಗಲೇ ಎರಡು ಸಾವಿರಕ್ಕೂ ಅಧಿಕ ಮಕ್ಕಳಲ್ಲಿ ಸೋಂಕು ದೃಢಪಟ್ಟಿದ್ದು, ಪೋಷಕರನ್ನು ಮತ್ತಷ್ಟು ಚಿಂತೆಗೀಡು ಮಾಡಿದೆ. ಹೀಗಾಗಿಯೇ ಮೂರನೇ ಅಲೆ ಬರುವ ಮುಂಚೆಯೇ ಎಚ್ಚೆತ್ತುಕೊಂಡಿರುವ ಜಿಲ್ಲಾಡಳಿತ ಈಗಿನಿಂದಲೇ ಪೂರ್ವ ತಯಾರಿಯನ್ನು ಆರಂಭಿಸಿದೆ.

ಕೊರೊನಾ ಎರಡನೇ ಅಲೆ ನಿರೀಕ್ಷೆಗೂ ಮೀರಿ ಪರಿಣಾಮ ಬೀರಿದ್ದು, ಸೋಂಕು ಮತ್ತು ಸಾವಿನ ಪ್ರಮಾಣ ಗಣನೀಯ ಪ್ರಮಾಣದಲ್ಲಿ ನಡೆದು ಹೋಗಿದೆ. ಇನ್ನೂ ಸಹ ಸಂಪೂರ್ಣ ನಿಂತಿಲ್ಲ. ಎರಡನೇ ಅಲೆಯಿಂದ ಇನ್ನು ಸುಧಾರಿಸಿಕೊಳ್ಳುವಾಗಲೇ ತಜ್ಞರು ಮೂರನೇ ಅಲೆ ಎಚ್ಚರಿಕೆಯನ್ನು ನೀಡಿದ್ದಾರೆ. ಮುಖ್ಯವಾಗಿ ಮಕ್ಕಳು ಗುರಿಯಾಗುವ ಸಾಧ್ಯತೆಯನ್ನು ವ್ಯಕ್ತಪಡಿಸಿರುವುದು ಜನರ ನಿದ್ದೆಗೆಡಿಸಿದೆ. ಇಂತ ಸಂದರ್ಭದಲ್ಲೆ ಬಾಗಲಕೋಟೆ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ ಈ ಎರಡು ತಿಂಗಳಲ್ಲಿ 2 ಸಾವಿರಕ್ಕೂ ಅಧಿಕ ಮಕ್ಕಳಿಗೆ ಸೋಂಕು ಕಾಣಿಸಿರುವುದು ಆತಂಕಕ್ಕೆ ಕಾರಣವಾಗಿದೆ. ಹೀಗಾಗಿಯೇ ಬಾಗಲಕೋಟೆ ಜಿಲ್ಲಾಡಳಿತ ಈಗಿನಿಂದಲೇ ಮೂರನೇ ಅಲೆಗೆ ಸಕಲ‌ಸಿದ್ಧತೆ ಮಾಡಿಕೊಳ್ಳುತ್ತಿದೆ.

3ನೇ ಅಲೆ ವಿಚಾರವಾಗಿ ಈಗಾಗಲೇ ಜಿಲ್ಲಾಡಳಿತ ಮೂರು ಸಲ ಸಭೆಯನ್ನು ನಡೆಸಿದೆ. ಜಿಲ್ಲೆಯ ವಿವಿಧ ಚಿಕ್ಕಮಕ್ಕಳ ತಜ್ಞ ವೈದ್ಯರ ಜೊತೆ ಚರ್ಚೆ ಮಾಡಿದೆ. ಜಿಲ್ಲಾ ಕೊವಿಡ್ ಆಸ್ಪತ್ರೆಯಲ್ಲಿ 20 ಐಸಿಯು ಬೆಡ್ ಮೀಸಲಿಡಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನು ನಗರದ ಕುಮಾರೇಶ್ವರ ಖಾಸಗಿ ಆಸ್ಪತ್ರೆಯಲ್ಲೂ ಐಸಿಯು ಬೆಡ್ ಸೇರಿದಂತೆ ಆಕ್ಷಿಜನ್ ಬೆಡ್​ ಪೂರೈಕೆಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಮಕ್ಕಳಿಗಾಗಿ ಮೊದಲ ಹಂತದಲ್ಲಿ ಜಿಲ್ಲಾದ್ಯಂತ ಒಟ್ಟು 200 ಬೆಡ್ ಮೀಸಲಿಡಲು ಜಿಲ್ಲಾಡಳಿತ ಸಿದ್ಧತೆ ಮಾಡಿಕೊಳ್ಳುತ್ತಿದೆ. ಅಗತ್ಯ ಔಷಧಿ ಖರೀದಿ ಪ್ರಕ್ರಿಯೆ ಕೂಡ ಆರಂಭವಾಗಿದ್ದು, ತಾಲೂಕಾಸ್ಪತ್ರೆ, ತಾಲೂಕಾವಾರು ಖಾಸಗಿ ಆಸ್ಪತ್ರೆಗಳಲ್ಲೂ ಮಕ್ಕಳ ಚಿಕಿತ್ಸೆಗೆ ಸಿದ್ಧತೆ ಮಾಡಿಕೊಳ್ಳಲಾಗಿದೆ ಎಂದು ಡಿಎಚ್ಒ ಡಾ.ಅನಂತ ದೇಸಾಯಿ ತಿಳಿಸಿದ್ದಾರೆ.

ಸದ್ಯ ಬಾಗಲಕೋಟೆ ಜಿಲ್ಲೆಯಲ್ಲಿ ಎರಡನೇ ಅಲೆಯಲ್ಲಿ ಇವರೆಗೂ 2062 ಮಕ್ಕಳಿಗೆ ಸೋಂಕು ತಗಲಿದೆ. 0 ದಿಂದ 10 ವರ್ಷದ 694 ಮಕ್ಕಳಲ್ಲಿ ಸೋಂಕು ಕಾಣಿಸಿಕೊಂಡಿದ್ದರೆ, 11 ರಿಂದ 18ವರ್ಷದ 1368 ಮಕ್ಕಳಲ್ಲಿ ಸೋಂಕು ದೃಢಪಟ್ಟಿದೆ. ಇದರಲ್ಲಿ ಈಗಾಗಲೇ ಶೇಕಡಾ 50ಕ್ಕೂ ಹೆಚ್ಚು ಮಕ್ಕಳು ಸಂಪೂರ್ಣವಾಗಿ ಸೋಂಕಿನಿಂದ ಗುಣಮುಖರಾಗಿದ್ದಾರೆ. ಸಮಾಧಾನದ ವಿಷಯ ಎಂದರೆ ಈ ಸೋಂಕಿಗೆ ಯಾವುದೇ ಮಕ್ಕಳು ಬಲಿಯಾಗಿಲ್ಲ.

ಪಾಲಕರು ಸಹ ಮಕ್ಕಳ ಬಗ್ಗೆ ಹೆಚ್ಚು ನಿಗಾ ವಹಿಸಬೇಕು. ಹೊರಗಡೆ ಹೋಗಿ ಬರುವ ತಂದೆ-ತಾಯಿಗಳು ಜಾಗೃತಿ ವಹಿಸಬೇಕು. ಬಾಣಂತಿಯರು ಮಗುವಿಗೆ ಹಾಲು ಉಣಿಸುವಾಗ ಹೆಚ್ಚು ಸ್ವಚ್ಛತೆಗೆ ಆದ್ಯತೆ ಕೊಡಬೇಕು. ಮಕ್ಕಳಿಗೆ ಮಾಸ್ಕ್, ಸಾನಿಟೈಜಿಂಗ್ ಬಗ್ಗೆ ಜಾಗೃತಿ ಮೂಡಿಸಬೇಕು. ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣವೇ ಮಕ್ಕಳ ವೈದ್ಯರನ್ನು ಸಂಪರ್ಕಿಸಿ ಅವರು ನೀಡುವ ಸಲಹೆಗಳನ್ನು ಚಾಚೂ ತಪ್ಪದೇ ಪಾಲಿಸಬೇಕು. 3ನೇ ಅಲೆ ಬರಬಹುದು, ಬರದೇನೂ ಇರಬಹುದು. ಯಾವುದಕ್ಕೂ ನಿರ್ಲಕ್ಷ್ಯ ಮಾತ್ರ ಮಾಡದೇ, ಸೋಂಕು ಬರಬಹುದು ಎನ್ನುವ ಎಚ್ಚರಿಕೆಯಿಂದಲೇ ಎಚ್ಚರಿಕೆ ಕ್ರಮ ತೆಗೆದುಕೊಳ್ಳಬೇಕು. ಆದರೆ ಭಯ ಬೇಡ ಎಂದು ಮಕ್ಕಳ ತಜ್ಞರಾದ ಡಾ.ದೇವರಾಜ ಪಾಟೀಲ್ ತಿಳಿಸಿದ್ದಾರೆ.

ಬೆಳಗಾವಿಯಲ್ಲೂ ಮಕ್ಕಳಿಗೆ ಕೊರೊನಾತಂಕ ಮಕ್ಕಳಲ್ಲಿ ಕೊರೊನಾ ಹರಡುವ ಸಾಧ್ಯತೆ ಇದೆ ಎನ್ನುವಾಗಲೇ ಬೆಳಗಾವಿಯಲ್ಲಿಯೂ ಆತಂಕ ಶುರುವಾಗಿದೆ. ಎರಡು ದಿನದಲ್ಲಿ ಬರೋಬ್ಬರಿ 46 ಜನ 18ವರ್ಷದೊಳಗಿನ ಮಕ್ಕಳಿಗೆ ಸೋಂಕು ದೃಢಪಟಿದೆ. ಅದ್ರಲ್ಲೂ ನಿನ್ನೆ ಒಂದೇ ದಿನ 32ಜನ ಮಕ್ಕಳಿಗೆ ಸೋಂಕು ತಗುಲಿದ್ದು, ಈ ಎಲ್ಲ ಮಕ್ಕಳು ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದರಲ್ಲಿ ಇಬ್ಬರು ಹಸೂಗೂಸಿಗೂ ಸೋಂಕು ತಗುಲಿದ್ದು, ಜೀವನ್ಮರಣದ ಮಧ್ಯೆ ಈ ಮಕ್ಕಳು ಹೋರಾಟ ನಡೆಸುತ್ತಿವೆ. ಇನ್ನೂ 46ಜನ ಮಕ್ಕಳ ಪೈಕಿ 20 ಬಾಲಕಿಯರಿಗೆ ಕೊರೊನಾ ಸೋಂಕು ತಗುಲಿದರೆ, 26 ಬಾಲಕರಿಗೆ ಸೋಂಕಿರುವುದು ದೃಢಪಟ್ಟಿದೆ. ಅದರಲ್ಲೂ ಒಂದೇ ಮನೆಯ ಸಹೋದರ ಸಹೋದರಿಯರಿಗೆ ಕೊರೊನಾ ಸೋಂಕು ಹರಡಿದ್ದು ಪೋಷಕರಲ್ಲಿ ಭಯ ಹುಟ್ಟುವಂತೆ ಮಾಡಿದೆ.

ಕಳೆದ ಒಂದು ತಿಂಗಳ ಈಚೇಗೆ ನಾಲ್ಕು ಜನ ಮಕ್ಕಳು ಬೆಳಗಾವಿಯಲ್ಲಿ ಸೋಂಕಿಗೆ ಬಲಿಯಾಗಿದ್ದಾರೆ. ಇನ್ನೂ ನಿನ್ನೆಯಿಂದ ಮಕ್ಕಳಲ್ಲಿ ಸೋಂಕಿನ ಸಂಖ್ಯೆ ಹೆಚ್ಚು ಕಾಣಿಸಿಕೊಳ್ಳುತ್ತಿದೆ. ಆದರೆ ಈ ಮಕ್ಕಳಿಗೆ ಚಿಕಿತ್ಸೆ ನೀಡಲು ಪ್ರತ್ಯೇಕ ವಾರ್ಡ್ ಆಗಲಿ ಅಥವಾ ಆಸ್ಪತ್ರೆಯನ್ನಾಗಿ ತೆರೆಯುವ ಕೆಲಸ ಬೆಳಗಾವಿ ಜಿಲ್ಲಾಡಳಿತ ಮಾಡಿಲ್ಲ. ಮಕ್ಕಳಿಗೆ ಹೆಚ್ಚಾಗಿ ಸೋಂಕು ಕಾಣಿಸುತ್ತಿಲ್ಲ ಎಂದು ಯಾವುದೇ ಮುಂಜಾಗ್ರತೆ ಕೂಡ ಜಿಲ್ಲಾಡಳಿತ ತೆಗೆದುಕೊಂಡಿಲ್ಲ. ಇದೀಗ ಮಕ್ಕಳು ಬೆಳಗಾವಿ ಬಿಮ್ಸ್ ಆಸ್ಪತ್ರೆ ಮತ್ತು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ಪೋಷಕರೇ ಕೊವಿಡ್ ವಾರ್ಡ್ ನಲ್ಲಿ ಮಕ್ಕಳನ್ನು ಆರೈಕೆ ಮಾಡುತ್ತಿದ್ದಾರೆ. ಮಕ್ಕಳ ಆರೈಕೆ ಮಾಡುವುದರ ಜೊತೆಗೆ ಇದೀಗ ಪೋಷಕರಿಗೂ ಆಸ್ಪತ್ರೆಯಲ್ಲಿ ಸೋಂಕು ತಗಲುವ ಭೀತಿ ಎದುರಾಗಿದೆ. ಇನ್ನೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಸ್ ಜಾರಕಿಹೊಳಿ ಕೂಡ ಈ ಬಗ್ಗೆ ಜಿಲ್ಲಾಡಳಿತಕ್ಕೆ ಮನವಿ ಮಾಡಿಕೊಂಡಿದ್ದು, ಪ್ರತ್ಯೇಕ ವಾರ್ಡ್ ವ್ಯವಸ್ಥೆಯನ್ನ ಮಕ್ಕಳಿಗೆ ಮಾಡಲಿ ಎಂದು ತಿಳಿಸಿದ್ದಾರೆ.

ಇದನ್ನೂ ಓದಿ:

ರಾಜಸ್ತಾನದಲ್ಲಿ ಮಕ್ಕಳಿಗೆ ಮಾರಕವಾಗುತ್ತಿದೆ ಕೊರೊನಾ ಸೋಂಕು; ಒಂದೇ ಜಿಲ್ಲೆಯಲ್ಲಿ 345 ಮಕ್ಕಳಲ್ಲಿ ವೈರಸ್ ದೃಢ

ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಮೈಸೂರು ಇನ್ಫೋಸಿಸ್ ಕ್ಯಾಂಪಸ್‌ನಲ್ಲಿ ಮತ್ತೆ ಕಾಣಿಸಿಕೊಂಡ ಚಿರತೆ
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಬಿಗ್ ಬಾಸ್ ಮನೆಯಿಂದ ಹೊರಗೆ ಹೋಗು: ಧನುಗೆ ಹನುಮಂತ ಹೀಗೆ ಹೇಳಿದ್ದೇಕೆ?
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಪ್ರಿಯಾಂಕ್ ಹೇಳಿದ್ದನ್ನು ಸಿದ್ದರಾಮಯ್ಯ ಬಹಳ ಹೊತ್ತು ಕಿವಿಗೆ ಹಾಕ್ಕೊಳಲ್ಲ!
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಅಧಿಕಾರಿಗಳ ಜೊತೆ ಕಾಫೀ ಹೀರಿದ ಮುಖಂಡರಲ್ಲಿ ಬಸನಗೌಡ ಯತ್ನಾಳ್ ಕಾಣಿಸಲಿಲ್ಲ
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಹೆಚ್ಎಂಪಿ ವೈರಸ್ ಪತ್ತೆಗೆ ಪ್ರತ್ಯೇಕವಾದ ಕಿಟ್ ಇಲ್ಲ: ದಿನೇಶ್ ಗುಂಡೂರಾವ್
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಫಿನಾಲೆ ಟಿಕೆಟ್ ಆಸೆಗೆ ಮನುಷ್ಯತ್ವ ಮರೆತ ಬಿಗ್ ಬಾಸ್ ಸ್ಪರ್ಧಿಗಳು
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಪ್ರಶ್ನೆಯನ್ನು ಸಿದ್ದರಾಮಯ್ಯ ಇಲ್ಲವೇ ಶಿವಕುಮಾರ್​​ರನ್ನು ಕೇಳಬೇಕು: ಸತೀಶ್
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ಸಫಾರಿ ವೇಳೆ ಜೀಪ್​ನಿಂದ ಘೇಂಡಾಮೃಗದ ಮುಂದೆ ಬಿದ್ದ ತಾಯಿ-ಮಗಳು; ಆಮೇಲೇನಾಯ್ತು
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ರೆಸಾರ್ಟ್​ನಲ್ಲಿ ನಟಿ ಹರಿಪ್ರಿಯಾ ಸೀಮಂತ ಶಾಸ್ತ್ರ; ಆಶೀರ್ವಾದ ಮಾಡಿದ ತಾರಾ
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್
ಹೆಚ್​ಎಂಪಿ ವೈರಸ್ ವಿಷಯದಲ್ಲಿ ನಮ್ಮ ಸರ್ಕಾರ ಅಲರ್ಟ್ ಆಗಿದೆ: ಶಿವಕುಮಾರ್