ಮತ್ತೆ 21 ತಾಲೂಕುಗಳಲ್ಲಿ ಬರ: ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ

|

Updated on: Oct 14, 2023 | 7:54 AM

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಮುಖ್ಯಮಂತ್ರಿ ಸಿದ್ದರಾಮಯ್ಯ ಆದೇಶ ಹೊರಡಿಸಿದ್ದಾರೆ.

ಮತ್ತೆ 21 ತಾಲೂಕುಗಳಲ್ಲಿ ಬರ: ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ
ಸಿಎಂ ಸಿದ್ದರಾಮಯ್ಯ
Follow us on

ಬೆಂಗಳೂರು ಅ.13: ರಾಜ್ಯ ಸರ್ಕಾರ ಈ ಹಿಂದೆ ನಡೆಸಿದ ಸಮೀಕ್ಷೆಯಲ್ಲಿ ರಾಜ್ಯದ 236 ತಾಲೂಕುಗಳ ಪೈಕಿ 161 ತಾಲೂಕುಗಳನ್ನು ತೀವ್ರ ಬರಪೀಡಿತ (Drought) ತಾಲೂಕು ಹಾಗೂ 34 ತಾಲೂಕುಗಳನ್ನು ಸಾಧಾರಣ ಬರಪೀಡಿತವೆಂದು ಒಟ್ಟು 195 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿತ್ತು. ಈ ಪೈಕಿ 22 ಸಾಧಾರಣ ಬರಪೀಡಿತ ತಾಲೂಕುಗಳಲ್ಲಿ ಮತ್ತೊಮ್ಮೆ ಬೆಳೆ ಹಾನಿ ಸಮೀಕ್ಷೆ ನಡೆಸಿ 11 ತಾಲೂಕುಗಳನ್ನು ತೀವ್ರ ಬರಪೀಡಿತ ತಾಲೂಕು ಹಾಗೂ 11 ಸಾಧಾರಣ ಬರಪೀಡಿತ ತಾಲೂಕುಗಳೆಂದು ಅಧಿಕೃತವಾಗಿ ಘೋಷಿಸಿದೆ. ಒಟ್ಟು 216 ಬರ ಪೀಡಿತ ತಾಲೂಕುಗಳಲ್ಲಿ ಮುಂದಿನ ಆರು ತಿಂಗಳ ಬರ ನಿರ್ವಹಣೆ ಕ್ರಮ ಕೈಗೊಳ್ಳುವಂತೆ ಸರ್ಕಾರ ಸೂಚನೆ ನೀಡಿದೆ.

ಕೇಂದ್ರ ಸರ್ಕಾರದ ಬರ ನಿರ್ವಹಣೆ ಕೈಪಿಡಿ 2020ರ ಮಾರ್ಗಸೂಚಿಯಂತೆ 189 ತೀವ್ರ ಬರಪೀಡಿತ ತಾಲೂಕು ಹಾಗೂ 27 ಸಾಧಾರಣ ಬರಪೀಡಿತ ತಾಲೂಕುಗಳು ಒಳಗೊಂಡಂತೆ ಒಟ್ಟು 216 ತಾಲೂಕುಗಳನ್ನು ಬರಪೀಡಿತ ತಾಲೂಕುಗಳೆಂದು ಘೋಷಿಸಿ ಆದೇಶ ಹೊರಡಿಸಿದ್ದಾರೆ.

ರಾಜ್ಯದಲ್ಲಿ ಹೊಸದಾಗಿ ಬರ ಪೀಡಿತ ತಾಲೂಕು ಎಂದು ಘೋಷಿಸಿರುವ 21 ತಾಲೂಕುಗಳಲ್ಲಿ ಆ್ಯಪ್ ಮೂಲಕ ತಳಮಟ್ಟದ ನೈಜ ಸ್ಥಿತಿ ಪರಿಶೀಲಿಸಿ ಬರ ಕೈಪಿಡಿ ಅನ್ವಯ ದೃಢೀಕರಿಸಿ ವರದಿ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಕಂದಾಯ ಅ.9ರಂದು ಸುತ್ತೋಲೆ ಹೊರಡಿಸಿತ್ತು.

ಇದನ್ನೂ ಓದಿ: ಬೆಳಗಾವಿ: ಭೀಕರ ಬರಗಾಲದಿಂದ ತತ್ತರಿಸಿದ ಕಬ್ಬು ಬೆಳೆಗಾರರು: ಸಕ್ಕರೆ ಉದ್ಯಮಕ್ಕೂ ಸಂಕಷ್ಟ?

ಈ ಹಿನ್ನೆಲೆಯಲ್ಲಿ ಸಂಬಂಧಪಟ್ಟ ತಾಲೂಕು ಗಳಲ್ಲಿ ಶೇ.10ರಷ್ಟು ಗ್ರಾಮಗಳನ್ನು ಆಯ್ಕೆ ಮಾಡಿ ಪ್ರಮುಖ ಬೆಳೆಗಳನ್ನು ಗುರುತಿಸಿ, ಪ್ರತಿ ಬೆಳೆಗಳ ಸುಮಾರು 5 ಜಮೀನುಗಳಿಗೆ (1 ಎಕರೆಗಿಂತ ಕಡಿಮೆ ಇಲ್ಲದ) ಭೇಟಿ ನೀಡಿ ಇ-ಆಡಳಿತ ಇಲಾಖೆ ಅಭಿವೃದ್ಧಿಪಡಿಸಿರುವ ಆ್ಯಪ್ ಮೂಲಕ ಗೌಂಡ್ ಟ್ಯೂಶನಿಂಗ್ ಮಾಡಿ ಅ.11ರಂದು ಜಿಲ್ಲಾಧಿಕಾರಿಗಳು ವರದಿ ಸಲ್ಲಿಸಿದ್ದರು. ಇದರ ಆಧಾರದ ಮೇಲೆ ಅ.13 ರಂದು 21 ತಾಲೂಕು ಗಳನ್ನು ಬರ ಪೀಡಿತ ಎಂದು ಘೋಷಿಸಿದೆ.

ಬರಪೀಡಿತ ನೂತನ 21 ತಾಲೂಕುಗಳು

ಚಾಮರಾಜನಗರ, ಕೃಷ್ಣರಾಜನಗರ, ಯಳಂದೂರು, ಬೆಳಗಾವಿ, ಖಾನಾಪುರ, ಮುಂಡರಗಿ, ಬ್ಯಾಡಗಿ, ಹಾನಗಲ್​​, ಶಿಗ್ಗಾವಿ, ಕಲಘಟಗಿ, ಅಳ್ನಾವರ, ಅಣ್ಣಿಗೇರಿ, ಆಲೂರು, ಅರಸೀಕೆರೆ, ಹಾಸನ, ಮೂಡಿಗೆರೆ, ತರೀಕೆರೆ, ಪೊನ್ನಂಪೇಟೆ, ಹೆಬ್ರಿ, ಸಿದ್ದಾಪುರ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ