ರಾಜ್ಯದಲ್ಲಿ ಹೊಸದಾಗಿ 22 ಸೋಂಕಿತರು ಪತ್ತೆ, ಒಟ್ಟು ಸಂಖ್ಯೆ 981ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ. ಬೆಂಗಳೂರು 5, ಗದಗ ಜಿಲ್ಲೆ 4, ಮಂಡ್ಯ ಜಿಲ್ಲೆ 4, ಬೀದರ್ ಜಿಲ್ಲೆ 4, ದಾವಣಗೆರೆ ಜಿಲ್ಲೆ 3, ಬಾಗಲಕೋಟೆ 1, ಬೆಳಗಾವಿ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 981 ಸೋಂಕಿತರ ಪೈಕಿ 456 ಜನ ಆಸ್ಪತ್ರೆಯಿಂದ […]

ರಾಜ್ಯದಲ್ಲಿ ಹೊಸದಾಗಿ 22 ಸೋಂಕಿತರು ಪತ್ತೆ, ಒಟ್ಟು ಸಂಖ್ಯೆ 981ಕ್ಕೆ ಏರಿಕೆ
ಸಾಧು ಶ್ರೀನಾಥ್​

Updated on: May 14, 2020 | 12:39 PM

ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 22 ಜನರಿಗೆ ಸೋಂಕು ತಗುಲಿದೆ. ಹೀಗಾಗಿ ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 981ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಬಲಿಯಾದವರ ಸಂಖ್ಯೆ 35ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಬೆಂಗಳೂರು 5, ಗದಗ ಜಿಲ್ಲೆ 4, ಮಂಡ್ಯ ಜಿಲ್ಲೆ 4, ಬೀದರ್ ಜಿಲ್ಲೆ 4, ದಾವಣಗೆರೆ ಜಿಲ್ಲೆ 3, ಬಾಗಲಕೋಟೆ 1, ಬೆಳಗಾವಿ ಜಿಲ್ಲೆಯಲ್ಲಿ ಒಬ್ಬರಿಗೆ ಕೊರೊನಾ ಸೋಂಕು ತಗುಲಿರುವುದು ದೃಢಪಟ್ಟಿದೆ. 981 ಸೋಂಕಿತರ ಪೈಕಿ 456 ಜನ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ.

Published On - 12:37 pm, Thu, 14 May 20

ಸಾಧು ಶ್ರೀನಾಥ್​

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Loading...
Unable to load recommendations.
Follow Us