ರಾಜ್ಯದಲ್ಲಿ ಹೊಸದಾಗಿ 22 ಕೊರೊನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ

ರಾಜ್ಯದಲ್ಲಿ ಹೊಸದಾಗಿ 22  ಕೊರೊನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 22 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬರೋಬ್ಬರಿ 14 ಜನರಿಗೆ ಕೊರೊನಾ ಅಟ್ಯಾಕ್ ಆಗಿದ್ದು, ಬೆಂಗಳೂರು 3, ವಿಜಯಪುರ 2, ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

557 ಸೋಂಕಿತರ ಪೈಕಿ ಈವರೆಗೆ 223 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ 21 ಜನರು ಮೃತಪಟ್ಟಿದ್ದು, ಉಳಿದ 313 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 12:34 pm, Thu, 30 April 20

Click on your DTH Provider to Add TV9 Kannada