ರಾಜ್ಯದಲ್ಲಿ ಹೊಸದಾಗಿ 22 ಕೊರೊನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 22 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬರೋಬ್ಬರಿ 14 ಜನರಿಗೆ ಕೊರೊನಾ ಅಟ್ಯಾಕ್ ಆಗಿದ್ದು, ಬೆಂಗಳೂರು 3, ವಿಜಯಪುರ 2, ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. 557 ಸೋಂಕಿತರ ಪೈಕಿ ಈವರೆಗೆ 223 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ 21 ಜನರು ಮೃತಪಟ್ಟಿದ್ದು, ಉಳಿದ 313 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ […]

ರಾಜ್ಯದಲ್ಲಿ ಹೊಸದಾಗಿ 22  ಕೊರೊನಾ ಕೇಸ್ ಪತ್ತೆ, ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆ
ಸಾಧು ಶ್ರೀನಾಥ್​

Updated on: Apr 30, 2020 | 12:36 PM

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 22 ಜನರಿಗೆ ಕೊರೊನಾ ಸೋಂಕು ತಗುಲಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 557ಕ್ಕೆ ಏರಿಕೆಯಾಗಿದೆ. ಬೆಳಗಾವಿ ಜಿಲ್ಲೆಯಲ್ಲಿ ಬರೋಬ್ಬರಿ 14 ಜನರಿಗೆ ಕೊರೊನಾ ಅಟ್ಯಾಕ್ ಆಗಿದ್ದು, ಬೆಂಗಳೂರು 3, ವಿಜಯಪುರ 2, ದಕ್ಷಿಣ ಕನ್ನಡ, ತುಮಕೂರು, ದಾವಣಗೆರೆ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ.

557 ಸೋಂಕಿತರ ಪೈಕಿ ಈವರೆಗೆ 223 ಜನ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಕೊರೊನಾದಿಂದ 21 ಜನರು ಮೃತಪಟ್ಟಿದ್ದು, ಉಳಿದ 313 ಸೋಂಕಿತರಿಗೆ ನಿಗದಿತ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.

Published On - 12:34 pm, Thu, 30 April 20

sadhu srinath

ಭಾರತೀಯ ವಿದ್ಯಾ ಭವನದಲ್ಲಿ 1995ರಲ್ಲಿ ಸ್ನಾತಕೋತ್ತರ ಪದವಿ ಬಳಿಕ ಪತ್ರಿಕೋದ್ಯಮದಲ್ಲಿ 29 ವರ್ಷದ ಅನುಭವ. ಡಿಜಿಟಲ್ ಮಾಧ್ಯಮದಲ್ಲಿ 14 ವರ್ಷಗಳ ಅನುಭವ. ಹಾಗಾಗಿ ಡಿಜಿಟಲ್ ಮಾಧ್ಯಮದ ನಾಡಿಮಿಡಿತ ಚೆನ್ನಾಗಿ ಬಲ್ಲೆ. ಭವಿಷ್ಯವೂ ಇದೇ ಡಿಜಿಟಲ್ ಮಾಧ್ಯಮ! ಬಯಲು ಸೀಮೆಯಿಂದ ಬಂದವನು. 3 ದಶಕಗಳಿಂದ ಬೆಂಗಳೂರು ವಾಸಿ, ಮೂಲ ಶಿಡ್ಲಘಟ್ಟ. ಪೊಲೀಸ್​ ನ್ಯೂಸ್​​ ಪತ್ರಿಕೆ ಮೂಲಕ ವೃತ್ತಿ ಜೀವನ ಆರಂಭ. ಆಕಾಶವಾಣಿಯಲ್ಲಿ ಸಕ್ರಿಯ ಕ್ರೀಡಾ ಪತ್ರಕರ್ತ. ಆನಂತರ ವಿಜಯ ಕರ್ನಾಟಕ ದಿನ ಪತ್ರಿಕೆಯಲ್ಲಿ 10 ವರ್ಷ ಹಿರಿಯ ಉಪಸಂಪಾದಕ. ಕಾಲೇಜು ದಿನಗಳಲ್ಲಿ ಕ್ರಿಕೆಟ್​​ ಆಲ್​​ರೌಂಡರ್. ಪ್ರವಾಸ, ಪುಸ್ತಕ ಪ್ರೀತಿ ತುಸು ಹೆಚ್ಚು.​ ನೇರ-ದಿಟ್ಟ-ನಿರಂತರ. ಉತ್ತಮ ಸಮಾಜಕ್ಕಾಗಿ ಸೇವೆ ಮುಡಿಪು

Follow Us