ರಾಜ್ಯದಲ್ಲಿ ಹೊಸದಾಗಿ 22 ಮಂದಿಗೆ ಕೊರೊನಾ ಅಟ್ಯಾಕ್, ಇಬ್ಬರು ಬಲಿ!
ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 22 ಜನರಿಗೆ ಕೊರೊನಾ ವೈರಸ್ ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಇಂದು ಒಂದೇ ದಿನ 12 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ. ಕೊರೊನಾಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದು, ದಾವಣಗೆರೆ, ವಿಜಯಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ 640ನೇ ಸೋಂಕಿತ, ದಾವಣಗೆರೆ ಜಿಲ್ಲೆಯ […]

ಬೆಂಗಳೂರು: ರಾಜ್ಯದಲ್ಲಿ ಹೊಸದಾಗಿ 22 ಜನರಿಗೆ ಕೊರೊನಾ ವೈರಸ್ ಅಟ್ಯಾಕ್ ಆಗಿದ್ದು, ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 673ಕ್ಕೆ ಏರಿಕೆಯಾಗಿದೆ. ದಾವಣಗೆರೆಯಲ್ಲಿ ಇಂದು ಒಂದೇ ದಿನ 12 ಜನರಿಗೆ ಸೋಂಕು ತಗುಲಿದ್ದು, ಬೆಂಗಳೂರು 3, ಬಾಗಲಕೋಟೆ 2, ಬಳ್ಳಾರಿ, ದಕ್ಷಿಣ ಕನ್ನಡ, ಉತ್ತರ ಕನ್ನಡ, ಹಾವೇರಿ, ಧಾರವಾಡ ಜಿಲ್ಲೆಯಲ್ಲಿ ತಲಾ ಒಬ್ಬರಿಗೆ ಸೋಂಕು ದೃಢಪಟ್ಟಿದೆ.
ಕೊರೊನಾಗೆ ಇಂದು ಮತ್ತೆ ಇಬ್ಬರು ಬಲಿಯಾಗಿದ್ದು, ದಾವಣಗೆರೆ, ವಿಜಯಪುರದಲ್ಲಿ ತಲಾ ಒಬ್ಬರು ಮೃತಪಟ್ಟಿದ್ದಾರೆ. ವಿಜಯಪುರ ಜಿಲ್ಲೆಯ 640ನೇ ಸೋಂಕಿತ, ದಾವಣಗೆರೆ ಜಿಲ್ಲೆಯ 662ನೇ ಸೋಂಕಿತರು ಸಾವಿಗೀಡಾಗಿದ್ದಾರೆ. ಒಟ್ಟಾರೆಯಾಗಿ ರಾಜ್ಯದಲ್ಲಿ ಕೊರೊನಾ ಸೋಂಕಿಗೆ ಈವರೆಗೆ 29 ಜನರು ಬಲಿಯಾಗಿದ್ದಾರೆ.
Published On - 5:26 pm, Tue, 5 May 20




