ರಾಜ್ಯದಲ್ಲಿ ಈ ವರ್ಷ ಡೆಂಗ್ಯೂ ಜ್ವರ ಶೇ 22 ರಷ್ಟು ಏರಿಕೆ

ಕಳೆದ ಕೆಲವು ವಾರಗಳಿಂದ ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ ಮಾರ್ಗಸೂಚಿ ಮತ್ತು ಸೂಚನೆಗಳನ್ನೂ ನೀಡಿದೆ. ಇದೀಗ ಇಲಾಖೆ ಗಮನಿಸಿದ ಪ್ರಕಾರ ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣ 2022 ಕ್ಕೆ ಹೋಲಿಸಿದರೆ ರೋಗಿಗಳ ಸಂಖ್ಯೆ ಶೇ 22 ರಷ್ಟು ಏರಿಕೆಯಾಗಿದೆ.

ರಾಜ್ಯದಲ್ಲಿ ಈ ವರ್ಷ ಡೆಂಗ್ಯೂ ಜ್ವರ ಶೇ 22 ರಷ್ಟು ಏರಿಕೆ
ಸಾಂದರ್ಭಿಕ ಚಿತ್ರ
Follow us
ವಿವೇಕ ಬಿರಾದಾರ
|

Updated on:Aug 19, 2023 | 10:00 AM

ಬೆಂಗಳೂರು: ಕಳೆದ ಕೆಲವು ವಾರಗಳಿಂದ ರಾಜ್ಯದಲ್ಲಿ ಡೆಂಗ್ಯೂ ಜ್ವರ (Dengue Fever) ಪ್ರಕರಣಗಳು ಹೆಚ್ಚುತ್ತಿದ್ದು, ಆರೋಗ್ಯ ಇಲಾಖೆ (Health Department) ಮಾರ್ಗಸೂಚಿ ಮತ್ತು ಸೂಚನೆಗಳನ್ನೂ ನೀಡಿದೆ. ಇದೀಗ ಇಲಾಖೆ ಗಮನಿಸಿದ ಪ್ರಕಾರ ರಾಜ್ಯದಲ್ಲಿ ಡೆಂಗ್ಯೂ ಜ್ವರ ಪ್ರಕರಣ 2022 ಕ್ಕೆ ಹೋಲಿಸಿದರೆ ಶೇ 22 ರಷ್ಟು ಏರಿಕೆಯಾಗಿದೆ. ಈ ಬಗ್ಗೆ ರಾಷ್ಟ್ರೀಯ ರೋಗವಾಹಕ ಆಶ್ರಿತ ರೋಗ ನಿಯಂತ್ರಣ ಕಾರ್ಯಕ್ರಮದ (NVBDCP) ಉಪನಿರ್ದೇಶಕ ಡಾ.ಮಹಮೂದ್ ಷರೀಫ್ ಮಾತನಾಡಿ, ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (BBMP) ವ್ಯಾಪ್ತಿಯಲ್ಲಿ ಗರಿಷ್ಠ ಸಂಖ್ಯೆಯ ಜನರು ರೋಗದಿಂದ ಬಳಲುತ್ತಿದ್ದಾರೆ.

ನಗರದಲ್ಲಿ ಶೇ 60 ರಷ್ಟು ಜನರಿಗೆ ಅಂದರೇ 2,969 ಜನರು ಡೆಂಗ್ಯೂ ಜ್ವರ ಬಂದಿದ್ದೆ. ಹೆಚ್ಚಾಗಿ ಬಿಬಿಎಂಪಿ ಪೂರ್ವ, ದಕ್ಷಿಣ ಮತ್ತು ಮಹದೇವಪುರ ವಲಯಗಳಲ್ಲಿ ಜನರು ಜ್ವರದಿಂದ ಬಳಲುತ್ತಿದ್ದಾರೆ. ಕಳೆದ ವರ್ಷ ಜನವರಿಯಿಂದ ಆಗಸ್ಟ್​​ವರೆಗೆ 4,507 ಮಂದಿಗೆ ಡೆಂಗ್ಯೂ ಜ್ವರ ಬಂದಿತ್ತು. ಈ ವರ್ಷ ಆಗಸ್ಟ್ 11 ರವರೆಗೆ, 5,526 ಜನರಿಗೆ ಡೆಂಗ್ಯೂ ಜ್ವರ ಬಂದಿದೆ.

ಮೈಸೂರು (353), ವಿಜಯಪುರ (146), ಶಿವಮೊಗ್ಗ (155), ದಕ್ಷಿಣ ಕನ್ನಡ (110), ಉಡುಪಿ (126) ಮತ್ತು ಬೆಳಗಾವಿ (135) ಹೆಚ್ಚಿನ ಸಂಖ್ಯೆಯ ಪ್ರಕರಣಗಳನ್ನು ಪ್ರಕರಣಗಳು ಪತ್ತೆಯಾಗಿವೆ. ಡೆಂಗ್ಯೂ ಜ್ವರ, ಈಡಿಸ್ ಸೊಳ್ಳೆಗಳು ಕಡಿಯುವುದರಿಂದ ಬರುತ್ತದೆ. ಜಾಗತಿಕವಾಗಿ ಪ್ರತಿ ವರ್ಷ ಸುಮಾರು 400 ಮಿಲಿಯನ್ ಜನರು ಡೆಂಗ್ಯೂ ಜ್ವರದಿಂದ ಬಳಲುತ್ತಾರೆ. ಈ ವರ್ಷ ಡೆಂಗ್ಯೂಯಿಂದ ಯಾವುದೇ ಸಾವು ಸಂಭವಿಸಿಲ್ಲ. ಆದರೆ ರಾಜ್ಯದಲ್ಲಿ ಕಳೆದ ವರ್ಷ ನಾಲ್ಕು ಸಾವು ಸಂಭವಿಸಿದ್ದವು.

ಇದನ್ನೂ ಓದಿ: ಡೆಂಗ್ಯೂ ಭಾದಿಸಿದಾಗ ಅಪ್ಪಿತಪ್ಪಿಯೂ ಈ ಆಹಾರಗಳನ್ನು ಸೇವಿಸಬೇಡಿ, ರೋಗನಿರೋಧಕ ಶಕ್ತಿ ದುರ್ಬಲಗೊಳ್ಳುವ ಸಾಧ್ಯತೆ ಹೆಚ್ಚು

ಡೆಂಗ್ಯೂ ಮತ್ತು ಇತರ ವೈರಸ್‌ಗಳಿಂದ ಹೆಚ್ಚಾಗಿ ಮಕ್ಕಳು ತೀವ್ರವಾಗಿ ಬಾಧಿತರಾಗುತ್ತಿದ್ದಾರೆ. ಕೊರೊನಾ ಸಮಯದಲ್ಲಿ ಮಕ್ಕಳಲ್ಲಿ ರೋಗನಿರೋಧಕ ಶಕ್ತಿಯನ್ನು ಕುಂಟಿತವಾಗಿದೆ. ಈ ಮಳೆಗಾಲದಲ್ಲಿ ಡೆಂಗ್ಯೂ, ವೈರಲ್ ಜ್ವರ, ಟೈಫಾಯಿಡ್, ತೀವ್ರವಾದ ಅತಿಸಾರ ಮತ್ತು ವೈರಲ್ ನ್ಯುಮೋನಿಯಾ ಪ್ರಕರಣಗಳು ಸಹ ಏರಿಕೆ ಕಂಡಿವೆ.

ಡೆಂಗ್ಯೂ ಜ್ವರದ ಲಕ್ಷಣಗಳು

ಸೊಳ್ಳೆ ಕಚ್ಚಿದ ನಾಲ್ಕರಿಂದ ಹತ್ತು ದಿನಗಳ ಒಳಗೆ ರೋಗ ಲಕ್ಷಣಗಳು ಕಾಣಿಸಿಕೊಳ್ಳಬಹುದು. ತಲೆನೋವು, ಮೈಕೈ ನೋವು ಅಥವಾ ಕೀಲು ನೋವು, ವಾಕರಿಕೆ, ಕಣ್ಣುಗಳ ಹಿಂಭಾಗದಲ್ಲಿ ನೋವು, ಊದಿಕೊಂಡಿರುವ ಗ್ರಂಥಿಗಳು, ಚರ್ಮದ ಭಾಗದಲ್ಲಿ ದದ್ದುಗಳು, ಜ್ವರ, ತಲೆನೋವು, ಸುಸ್ತು, ಶೀತ, ಗಂಟಲು ನೋವು, ವಾಂತಿ, ಹೊಟ್ಟೆನೋವು, ಮೈ ಕೈ ನೋವು, ಮೈಮೇಲೆ ಅಲರ್ಜಿ ರೀತಿಯಲ್ಲಿ ಗುಳ್ಳೆಗಳು ಏಳುವುದು. ಡೆಂಗ್ಯೂ ಬಂದಾಗ ಪಪ್ಪಾಯಿ ಹಾಗೂ ಕಿವಿ ಹಣ್ಣನ್ನು ತಿನ್ನಬೇಕು. ಪಪ್ಪಾಯಿ ಎಲೆಯ ರಸ ಪ್ಲೇಟ್‌ಲೆಟ್‌ ಹೆಚ್ಚಿಸುತ್ತದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

Published On - 3:37 pm, Fri, 18 August 23

ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
‘ಬಾಯಲ್ಲಿ ಬರುವ ಮಾತು ವ್ಯಕ್ತಿತ್ವದ ವರ್ಚಸ್ಸು’ ಎಂದ ಸುದೀಪ್
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆಯಲ್ಲಿ ಇಬ್ಬರೂ ಮಾಜಿ ಮುಖ್ಯಮಂತ್ರಿಗಳ ಮಕ್ಕಳಿಗೆ ಸೋಲು
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ
ಉಪ ಚುನಾವಣೆ ಫಲಿತಾಂಶ 2028ರ ವಿಧಾನಸಭೆ ಚುನಾವಣೆಗೆ ದಿಕ್ಸೂಚಿ: ಡಿಕೆಶಿ