ದಾವಣಗೆರೆಯಲ್ಲಿ ಕೊರೊನಾ ಸೋಂಕಿತೆಯರಿಬ್ಬರು ಕೊವಿಡ್ ಕೇಂದ್ರದಿಂದ ಪರಾರಿ; ಪ್ರೀತಿಸಿದವರ ಜೊತೆ ಓಡಿ ಹೋಗಿರುವ ಶಂಕೆ

ಕೊರೊನಾ ಸೋಂಕಿತ ಯುವತಿಯರು ದಾವಣಗೆರೆ ಜೆ.ಎಚ್.ಪಟೇಲ್ ಬಡಾವಣೆಯ ಕೊವಿಡ್ ಕೇರ್ ಸೆಂಟರ್​ನಿಂದ ಪರಾರಿಯಾಗಿದ್ದಾರೆ. ರಾಜ್ಯ ಮಹಿಳಾ ನಿಲಯ ನಿವಾಸಿಗಳಾಗಿದ್ದ 21 ಮತ್ತು 19 ವರ್ಷದ ಯುವತಿಯರು ಪರಾರಿಯಾದವರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಅಂತರ್ ಧರ್ಮೀಯ ಯುವಕನನ್ನು ಒಬ್ಬರು ಮದುವೆಯಾಗಿದ್ದರು.

Follow us
sandhya thejappa
|

Updated on: May 20, 2021 | 10:09 AM

ದಾವಣಗೆರೆ: ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಗಣನೀಯವಾಗಿ ಏರಿಕೆಯಾಗುತ್ತಿದೆ. ಸೋಂಕನ್ನು ನಿಯಂತ್ರಿಸುವ ಸಲುವಾಗಿ ರಾಜ್ಯ ಸರ್ಕಾರ ಲಾಕ್​ಡೌನ್​​ ಘೋಷಿಸಿದ ಜೊತೆಗೆ ಚಿಕಿತ್ಸೆಗೆ ಸಂಬಂಧಿಸಿದ ಸೌಲಭ್ಯಗಳನ್ನು ಕಲ್ಪಿಸುತ್ತಿದೆ. ಆದರೆ ಕೊರೊನಾ ಬಗ್ಗೆ ಕೆಲ ಜನರಿಗೆ ಮಾತ್ರ ಇನ್ನು ಭಯ ಹುಟ್ಟಿಲ್ಲ. ಇಬ್ಬರು ಯುವತಿಯರಿಗೆ ಕೊರೊನಾ ಸೋಂಕು ತಗುಲಿತ್ತು. ಕೊವಿಡ್ ಕೇರ್ ಸೆಂಟರ್​ಗೆ ದಾಖಲಾಗಿದ್ದರು. ಆದರೆ ಆ ಯುವತಿಯರು ಕೊರೊನಾ ಭೀತಿಯಲ್ಲದೆ ಕೊವಿಡ್ ಕೇರ್ ಸೆಂಟರ್ನಿಂದ ಪರಾರಿಯಾಗಿದ್ದಾರೆ.

ಕೊರೊನಾ ಸೋಂಕಿತ ಯುವತಿಯರು ದಾವಣಗೆರೆ ಜೆ.ಎಚ್.ಪಟೇಲ್ ಬಡಾವಣೆಯ ಕೊವಿಡ್ ಕೇರ್ ಸೆಂಟರ್​ನಿಂದ ಪರಾರಿಯಾಗಿದ್ದಾರೆ. ರಾಜ್ಯ ಮಹಿಳಾ ನಿಲಯ ನಿವಾಸಿಗಳಾಗಿದ್ದ 21 ಮತ್ತು 19 ವರ್ಷದ ಯುವತಿಯರು ಪರಾರಿಯಾದವರು. ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ಅಂತರ್ ಧರ್ಮೀಯ ಯುವಕನನ್ನು ಒಬ್ಬರು ಮದುವೆಯಾಗಿದ್ದರು. ಆದರೆ ಆಗ 18 ವರ್ಷ ತುಂಬದೇ ಇದ್ದ ಕಾರಣ ಪ್ರಕರಣ ದಾಖಲಿಸಿ ಯುವಕನನ್ನು ಜೈಲಿಗೆ ಕಳುಹಿಸಲಾಗಿತ್ತು. ಯುವತಿ ಹೆತ್ತವರ ಮನೆಗೆ ಹೋಗಲು ಒಪ್ಪಿರಲಿಲ್ಲ.

ಅದೇ ರೀತಿ ಮತ್ತೊಬ್ಬರು 2020ರಲ್ಲಿ ತನ್ನ ಸಂಬಂಧಿ ಯುವಕನನ್ನು ಪ್ರೀತಿಸಿ ಮದುವೆಯಾಗಲು ಹೊರಟಿದ್ದರು. ಅವರಿಗೂ ಆಗ 18 ತುಂಬಿರಲಿಲ್ಲ. ಮದುವೆಯನ್ನು ತಡೆಯಲಾಗಿತ್ತು. ಆಕೆಯೂ ತಾಯಿ ಜೊತೆ ಹೋಗಲು ಒಪ್ಪಿರಲಿಲ್ಲ. ಹಾಗಾಗಿ ಇಬ್ಬರೂ ಸ್ಟೇ ಹೋಂನಲ್ಲಿದ್ದರು. ಕೊರೊನಾ ಬಂದರೂ ಲಕ್ಷಣಗಳು ಇಲ್ಲದ ಕಾರಣ ಅವರನ್ನು ಕೊವಿಡ್ ಕೇರ್ ಸೆಂಟರ್​ಗೆ ದಾಖಲಿಸಲಾಗಿತ್ತು. ತಡರಾತ್ರಿ ವಾಚ್ಮನ್ ಊಟಕ್ಕೆ ಹೋಗಿದ್ದ ಸಮಯದಲ್ಲಿ ಪರಾರಿಯಾಗಿದ್ದಾರೆ. ಪರಾರಿಯಾದ ಯುವತಿಯರು ಆ ಯುವಕರ ಜೊತೆಗೆ ಪರಾರಿಯಾಗಿರಬೇಕು ಎಂದು ಶಂಕಿಸಲಾಗಿದೆ. ಈ ಪ್ರಕರಣ ವಿದ್ಯಾನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

ಇದನ್ನೂ ಓದಿ

ನಿಮ್ಮ ಅಡುಗೆ ಮನೆಯಲ್ಲಿರುವ ಪದಾರ್ಥಗಳಲ್ಲಿ ರೋಗನಿರೋಧಕ ಶಕ್ತಿ ಹೆಚ್ಚಿಸುವ ಆಹಾರಗಳು ಇದೆಯೇ ಒಮ್ಮೆ ಗಮನಿಸಿ

ನಮ್ಮ ಊರಿಗೆ ಕೊವಿಡ್​ ಬಾರದಂತೆ ನೋಡಿಕೊಳ್ತೀವಿ; ಕೊರೊನಾ ನಿಯಂತ್ರಣಕ್ಕೆ ಪ್ರತಿಜ್ಞಾವಿಧಿ ಸ್ವೀಕರಿಸಿದ ಗ್ರಾಮಸ್ಥರು

(Two Corona infected escapes from davanagere covid care center )

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್