ರೋಜ್ ಕಾರ್ಯಕ್ರಮಕ್ಕೆ ಬಂದಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವು, ಮದ್ವೆ ಮನೆಯಲ್ಲಿ ನೀರವ ಮೌನ

ಕ್ರೈಸ್ತರ ರೋಜ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ದುರಂತ ಅಂತ್ಯ ಕಂಡಿದ್ದು, ಮನುಷ್ಯನ ಜೀವನದಲ್ಲಿ ಸಾವು ಹೇಗೆಲ್ಲಾ ಬರುತ್ತದೆ ಎನ್ನುವುದಕ್ಕೆ ಇದೊಂದು ಉದಾಹರಣೆ.

ರೋಜ್ ಕಾರ್ಯಕ್ರಮಕ್ಕೆ ಬಂದಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವು, ಮದ್ವೆ ಮನೆಯಲ್ಲಿ ನೀರವ ಮೌನ
ಮದ್ವೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಸಿದು ಬಿದ್ದು ಸಾವು
Follow us
TV9 Web
| Updated By: ರಮೇಶ್ ಬಿ. ಜವಳಗೇರಾ

Updated on:Nov 25, 2022 | 12:26 AM

ಉಡುಪಿ:  ಮದುವೆಗೆ  ಇನ್ನೇನು ಒಂದು ದಿನ ಇರುವ ಮುನ್ನ ಮಾಡಲಾಗುತ್ತಿದ್ದ ರೋಸ್‌ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಕುಳಿತಲ್ಲೇ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಇಂದು(ನವೆಂಬರ್ 24) ಬ್ರಹ್ಮಾವರದ ಹಾವಂಜೆಯಲ್ಲಿ ನಡೆದಿದೆ. ಸಂಬಂಧಿಕರ ರೋಸ್ ಕಾರ್ಯಕ್ರಮಕ್ಕೆ ಆಗಮಿಸಿದ್ದ ಯುವತಿ ಹಾವಂಜೆ ನಿವಾಸಿ ಜೋಸ್ನಾ ಲೂವಿಸ್ (23) ಕುಸಿದು ಬಿದ್ದು ಮೃತಪಟ್ಟಿದ್ದಾರೆ.

ಮದುವೆಗೆ ಒಂದು ದಿನ ಮುಂಚೆ ಮಾಡಲಾಗುತ್ತಿದ್ದ ರೋಸ್‌ ಕಾರ್ಯಕ್ರಮದಲ್ಲಿ ಎಲ್ಲರೂ ಖುಷಿಯಿಂದ ಇರುವಾಗ, ಇತ್ತ ಜೋಸ್ನಾ ಕುಳಿತಲ್ಲಿಯೇ ಕುಸಿದು ಬಿದ್ದಿದ್ದಾಳೆ. ಕೂಡಲೇ ಸಂಬಂಧಿಕರು ತಕ್ಷಣವೇ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದರಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾಳೆ. ಇದರಿಂದ ಮದುವೆ ಮನೆಯಲ್ಲಿ ದುಃಖ ಮಡುಗಟ್ಟಿದೆ.

ಜೋಸ್ನಾ ಬುಧವಾರ ರಾತ್ರಿ ಕೊಳಲಗಿರಿ ಹಾವಂಜೆಯ ತನ್ನ ಸಂಬಂಧಿಕರ ಮನೆಗೆ ಬಂದಿದ್ದರು. ರಾತ್ರಿ ಸುಮಾರು 8.30 ಸುಮಾರಿಗೆ ಕುಳಿತಲ್ಲೇ ಕುಸಿದು ಬಿದ್ದಿದ್ದಾಳೆ. ತಕ್ಷಣ ಸಂಬಂಧಿಕರು ಯುವತಿಯನ್ನು ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಜೋಸ್ನಾ ಕೊನೆಯುಸಿರೆಳೆದಿದ್ದಾಳೆ ಎಂದು ತಿಳಿದುಬಂದಿದೆ.

ಜೋಸ್ನಾಗೆ ಯಾವುದೇ ಅನಾರೋಗ್ಯ ಇರಲಿಲ್ಲ ಎಂದು ಕುಟುಂಬಸ್ಥರು ಹೇಳಿದ್ದು, ಈ ಬಗ್ಗೆ ಬ್ರಹ್ಮಾವರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕುಟುಂಬಸ್ಥರು ಪ್ರಕಾರ ಆರೋಗ್ಯವಾಗಿದ್ದ ಯುವತಿ ಕುಳಿತಲ್ಲಿಯೇ ಕುಸಿದುಬಿದ್ದು ದುರಂತ ಅಂತ್ಯ ಕಂಡಿದ್ದಾಳೆ. ಅಂದ್ರೆ ಮನುಷ್ಯನ ಜೀವನದಲ್ಲಿ ಸಾವು ಹೇಗೆಲ್ಲಾ ಬರುತ್ತದೆ ಎನ್ನುವುದನ್ನು ಊಹಿಸಲು ಅಸಾಧ್ಯ. ಹಾಗೇ ಸಾವು ಯಾವ ರೂಪದಲ್ಲಾದರೂ ಬರಬಹುದು ಎನ್ನುವುದಕ್ಕೆ ಇದೊಂದು ಉದಾಹರಣೆ.

ಇನ್ನಷ್ಟು ಸುದ್ದಿಗಾಗಿ ಇಲ್ಲಿ ಕ್ಲಿಕ್ಕಿಸಿ

Published On - 12:23 am, Fri, 25 November 22

ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ನಿನ್ನ ರೌಡಿಸಂ ನನ್ನ ಹತ್ರ ಬೇಡ: ರಜತ್​ಗೆ ಖಡಕ್ ಆವಾಜ್ ಹಾಕಿದ ಚೈತ್ರಾ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
ಐತಿಹಾಸಿಕ ಶತಕ ಸಿಡಿಸಿದ ಮಗನನ್ನು ತಬ್ಬಿ ಕಣ್ಣೀರಿಟ್ಟ ನಿತೀಶ್ ಅಪ್ಪ-ಅಮ್ಮ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
70 ಅಡಿ ಸೇತುವೆ ಮೇಲಿಂದ ಗಂಗಾ ನದಿಗೆ ಹಾರಿದ ಯುವತಿ; ವಿಡಿಯೋ ಇಲ್ಲಿದೆ
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಮೋಸ ಮಾಡಿದವರಿಗೆ ಕರ್ಮವಾಗಿ ಕಾಡಲು ಬಂದ ಸುದೀಪ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಿಮಾವೃತ ರಸ್ತೆಯಿಂದ ಜಾರಿ ಪ್ರಪಾತಕ್ಕೆ ಬಿದ್ದ ಟ್ರಕ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಹಾಸನ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ: ವಿದ್ಯಾರ್ಥಿಯ ವಿಡಿಯೋ ವೈರಲ್
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
ಗೋಕರ್ಣ, ಮುರುಡೇಶ್ವರಕ್ಕೆ ಪ್ರವಾಸಿಗರ ದಂಡು: ಹೊನ್ನಾವರದಲ್ಲಿ ಟ್ರಾಫಿಕ್ ಜಾಂ
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
‘ಡೆವಿಲ್’ ಶೂಟಿಂಗ್ ಆರಂಭದ ಬಗ್ಗೆ ಮಾಹಿತಿ ನೀಡಿದ ದರ್ಶನ್ ಸಹೋದರ ದಿನಕರ್
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಚಿನ್ನ ವಂಚನೆ ಕೇಸ್​ನಲ್ಲಿ ಹೆಸರು: ಡಿಕೆ ಸುರೇಶ್ ಹೇಳಿದ್ದೇನು ನೋಡಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ
ಮಾಜಿ ಪಿಎಂ ಮನಮೋಹನ್ ಸಿಂಗ್​ಗೆ ಅಂತಿಮ ನಮನ ಸಲ್ಲಿಸಿದ ಪ್ರಧಾನಿ ಮೋದಿ