Karnataka Dam Water Level: ಜೂ.23ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

ಕರ್ನಾಟಕದ ಜಲಾಶಯಗಳ ಜೂ. 23ರ ನೀರಿನ ಮಟ್ಟ: ಕೆಆರ್​ಎಸ್ ಡ್ಯಾಂ, ತುಂಗಭದ್ರಾ, ಮಲಪ್ರಭಾ, ವಾರಾಹಿ ಮತ್ತು ಸೂಫಾ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಲ್ಲಿ ನೀರಿನ ಮಟ್ಟ ಮತ್ತು ಒಳ ಹರಿವು ಎಷ್ಟಿದೆ? ಯಾವ ಡ್ಯಾಂ ನಲ್ಲಿ ಎಷ್ಟು ಪ್ರಮಾಣದ ನೀರು ಸಂಗ್ರಹವಾಗಿದೆ ಎಂಬ ಸಂಪೂರ್ಣ ಮಾಹಿತಿ ಇಲ್ಲಿದೆ.

Karnataka Dam Water Level: ಜೂ.23ರ ರಾಜ್ಯದ ಡ್ಯಾಂಗಳ ನೀರಿನ ಮಟ್ಟ ವಿವರ ಹೀಗಿದೆ

Updated on: Jun 23, 2024 | 7:30 AM

ಕಳೆದ ವರ್ಷಕ್ಕಿಂತ ಈ ವರಷ ರಾಜ್ಯದಲ್ಲಿ ಮುಂಗಾರು ಅಬ್ಬರ ಜೋರಾಗಿದೆ. ಈ ವರ್ಷ ಮುಂಗಾರು ಆರಂಭಕ್ಕೂ ಮೊದಲೇ ರಾಜ್ಯದಲ್ಲಿ ಭರ್ಜರಿ ಮಳೆಯಾಗುತ್ತಿದೆ. ವರುಣನ ಆಗಮನದಿಂದಾಗಿ ಕೆರೆ, ಕುಂಟೆ, ಹಳ್ಳ-ಕೊಳ್ಳ ಮತ್ತು ನದಿಗಳಲ್ಲಿ ಹರಿವು ಹೆಚ್ಚಾಗಿದೆ. ಇದರಿಂದ ಜಲಾಶಯಗಳಲ್ಲೂ ಒಳಹರಿವು ಹೆಚ್ಚಾಗಿದೆ. ಹಾಗಾದರೆ ಕೆಆರ್​ಎಸ್​, ತುಂಗಭದ್ರಾ, ಮಲಪ್ರಭಾ, ಆಲಮಟ್ಟಿ ಸೇರಿದಂತೆ ಕರ್ನಾಟಕದ ಪ್ರಮುಖ ಜಲಾಶಯಗಳಿಗೆ (Karnataka Dam Water Level) ಜೂನ್​​​ 22 ರಂದು ಒಳ, ಹೊರ ಹರಿವು ಮತ್ತು ನೀರಿನ ಮಟ್ಟ ಎಷ್ಟಿದೆ? ಇಲ್ಲಿದೆ ಮಾಹಿತಿ.

ಜಲಾಶಯಗಳ ನೀರಿನ ಮಟ್ಟ
ಕರ್ನಾಟಕದ ಪ್ರಮುಖ ಜಲಾಶಯಗಳು (Dam) ಗರಿಷ್ಠ ನೀರಿನ ಮಟ್ಟ (ಮೀ) ಒಟ್ಟು ಸಾಮರ್ಥ್ಯ (ಟಿಎಂಸಿ) ಇಂದಿನ ನೀರಿನ ಮಟ್ಟ (ಟಿಎಂಸಿ) ಕಳೆದ ವರ್ಷದ ನೀರಿನ ಮಟ್ಟ (ಟಿಎಂಸಿ) ಒಳಹರಿವು (ಕ್ಯೂಸೆಕ್ಸ್) ಹೊರಹರಿವು (ಕ್ಯೂಸೆಕ್ಸ್)
ಆಲಮಟ್ಟಿ ಜಲಾಶಯ (Almatti Dam) 519.60 123.08 29.42 19.92 3715 430
ತುಂಗಭದ್ರಾ ಜಲಾಶಯ (Tungabhadra Dam) 497.71 105.79 5.57 4.21 638 2026
ಮಲಪ್ರಭಾ ಜಲಾಶಯ (Malaprabha Dam) 633.80 37.73 6.43 7.16 0 194
ಕೆ.ಆರ್.ಎಸ್ (KRS Dam) 38.04 49.45 14.56 10.14 1413 798
ಲಿಂಗನಮಕ್ಕಿ ಜಲಾಶಯ (Linganamakki Dam) 554.44 151.75 13.97 11.30 2497 1686
ಕಬಿನಿ ಜಲಾಶಯ (Kabini Dam) 696.13 19.52 9.01 4.30 910 408
ಭದ್ರಾ ಜಲಾಶಯ (Bhadra Dam) 657.73 71.54 15.22 24.97 875 343
ಘಟಪ್ರಭಾ ಜಲಾಶಯ (Ghataprabha Dam) 662.91 51.00 7.95 4.12 545 119
ಹೇಮಾವತಿ ಜಲಾಶಯ (Hemavathi Dam) 890.58 37.10 10.82 14.61 1376 250
ವರಾಹಿ ಜಲಾಶಯ (Varahi Dam) 594.36 31.10 3.06 2.33 457 0
ಹಾರಂಗಿ ಜಲಾಶಯ (Harangi Dam)​​ 871.38 8.50 3.28 2.59 289 200
ಸೂಫಾ (Supa Dam) 564.00 145.33 30.42 32.64 4171 2054
ನಾರಾಯಣಪುರ ಜಲಾಶಯ (Narayanpura Dam) 492.25 15.87 21.16 14.78 235 235
ವಾಣಿವಿಲಾಸ ಸಾಗರ (VaniVilas Sagar Dam) 652.24 30.42 18.23 25.06 0 147

ಕಳೆದ 24 ಗಂಟೆಗಳಲ್ಲಿ ಉಡುಪಿ ಜಿಲ್ಲೆಯ ಬೈಂದೂರಿನ ಕೆರ್ಗಾಲುನಲ್ಲಿ ಅತ್ಯಧಿಕ 95 ಮಿಮೀ ಮಳೆಯಾಗಿದೆ. ಜೂನ್ 22 ರಿಂದ ಜೂನ್ 30 ರವರೆಗೆ ಕಾವೇರಿ ಜಲಾನಯನ ಪ್ರದೇಶದಲ್ಲಿ ಚದುರಿದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ