ಸಾರಿಗೆ ಇಲಾಖೆಯಲ್ಲಿ 24/7 ಕಾಲ್ ಸೆಂಟರ್: ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹೊಸ ಪ್ಲಾನ್​

ಇತ್ತೀಚಿಗೆ ಓಲಾ, ಉಬರ್ ಮತ್ತು ಸಾರ್ವಜನಿಕ ವಾಹನಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿವೆ. ಹಾಗಾಗಿ ಇದನ್ನು ತಡೆಗಟ್ಟಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದ್ದು, ಆ ನಿಟ್ಟಿನಲ್ಲಿ ಸಾರಿಗೆ ಇಲಾಖೆಯಲ್ಲಿ 24/7 ಕಾಲ್ ಸೆಂಟರ್​ ಓಪನ್​ ಮಾಡಲಾಗಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಇದಕ್ಕೆ ಚಾಲನೆ ನೀಡಿದ್ದಾರೆ.

ಸಾರಿಗೆ ಇಲಾಖೆಯಲ್ಲಿ 24/7 ಕಾಲ್ ಸೆಂಟರ್: ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹೊಸ ಪ್ಲಾನ್​
ಸಾರಿಗೆ ಇಲಾಖೆಯಲ್ಲಿ 24/7 ಕಾಲ್ ಸೆಂಟರ್: ಮಹಿಳಾ ಪ್ರಯಾಣಿಕರ ಸುರಕ್ಷತೆಗೆ ಹೊಸ ಪ್ಲಾನ್​
Follow us
| Updated By: ಗಂಗಾಧರ​ ಬ. ಸಾಬೋಜಿ

Updated on: Jun 19, 2024 | 5:52 PM

ಬೆಂಗಳೂರು, ಜೂನ್​ 19: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (Transport Department) ಮಹಿಳಾ (Women) ಪ್ರಯಾಣಿಕರ ಸುರಕ್ಷತೆಗಾಗಿ ಹಲವಾರು ಕ್ರಮಕೈಗೊಳ್ಳುತ್ತಿದೆ. ಅದೇ ರೀತಿಯಾಗಿ ಇದೀಗ ಮತ್ತೊಂದು ಹೆಜ್ಜೆ ಮುಂದೆ ಹೋಗಿ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ಸಾರಿಗೆ ಇಲಾಖೆಯಿಂದ ಮಾಸ್ಟರ್ ಪ್ಲಾನ್​ ಸಿದ್ಧಗೊಂಡಿದೆ. ಸಾರಿಗೆ ಇಲಾಖೆಯಲ್ಲಿ 24/7 ಕಾಲ್ ಸೆಂಟರ್​ ಓಪನ್​ ಮಾಡಲಾಗಿದೆ. ಸಾರಿಗೆ ಸಚಿವ ರಾಮಲಿಂಗರೆಡ್ಡಿ ಅವರು ಇದಕ್ಕೆ ಚಾಲನೆ ನೀಡಿದ್ದಾರೆ.

ಇತ್ತೀಚಿಗೆ ಓಲಾ, ಉಬರ್ ಮತ್ತು ಸಾರ್ವಜನಿಕ ವಾಹನಗಳಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ, ಅಪಘಾತ ಪ್ರಕರಣಗಳು ಹೆಚ್ಚಾಗುತ್ತಿರುವ ಬೆನ್ನಲ್ಲೇ ಇದನ್ನು ತಡೆಗಟ್ಟಲು ರಾಜ್ಯ ಸಾರಿಗೆ ಇಲಾಖೆ ಮುಂದಾಗಿದ್ದು, ಆ ನಿಟ್ಟಿನಲ್ಲಿ ಈ ಹೊಸ 24/7 ಕಾಲ್ ಸೆಂಟರ್​ ಅನ್ನು ತೆರೆಯಲಾಗಿದೆ.

ಇದನ್ನೂ ಓದಿ: ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ನಮ್ಮ ಮೆಟ್ರೋದಲ್ಲಿದೆ ನಾನಾ ಸೌಲಭ್ಯ, 24 ಎಮರ್ಜೆನ್ಸಿ ಬಟನ್

ಈ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೂ ಮಹಿಳಾ ಪ್ರಯಾಣಿಕರ ಸುರಕ್ಷತೆಗಾಗಿ ನಾನಾ ಕ್ರಮಗಳನ್ನು ಕೈಗೊಳ್ಳಲಾಗಿತ್ತು. ಕೆಎಸ್​ಆರ್​ಟಿಸಿ ಮತ್ತು ಬಿಎಂಟಿಸಿ ಬಸ್​ನಲ್ಲಿ ಈಗಾಗಲೇ ಪ್ಯಾನಿಕ್ ಬಟನ್​ ವ್ಯವಸ್ಥೆಯನ್ನು ತರಲಾಗಿದೆ.

ಇದನ್ನೂ ಓದಿ: ಐದು ಸಾವಿರ ಬಿಎಂಟಿಸಿ ಬಸ್​ಗಳಿಗೆ ಸಿಸಿ ಕ್ಯಾಮೆರಾ, ಪ್ಯಾನಿಕ್ ಬಟನ್ ಅಳವಡಿಕೆ, ಹೇಗೆ ಕಾರ್ಯನಿರ್ವಹಿಸುತ್ತದೆ ಎಂದುದು ಇಲ್ಲಿದೆ

ಪ್ಯಾನಿಕ್ ಬಟನ್ ಅನ್ನು ಒತ್ತಿದರೆ ಸಿಸಿ ಟಿವಿ ಅಲರ್ಟ್ ಆಗುವುದರೊಂದಿಗೆ ಸೈರನ್ ಆನ್ ಆಗುತ್ತದೆ. ಬಟನ್ ಪ್ರೆಸ್ ಆಗುತ್ತಿದ್ದಂತೆ ಕಂಟ್ರೋಲ್‌ ರೂಮ್​ಗೆ ಬಸ್​ನ ಸಂಪೂರ್ಣ ಮಾಹಿತಿ‌ ರವಾನೆಯಾಗುತ್ತದೆ. ಅಲ್ಲದೆ, ಕಂಡಕ್ಟರ್ ಮತ್ತು ಡ್ರೈವರ್​ಗೆ ಕಂಟ್ರೋಲ್ ರೂಮ್​ನಿಂದ ಕರೆ ಬರುತ್ತದೆ. ಆ ಮೂಲಕ ಬಸ್​ಗಳಲ್ಲಿ ಪ್ರಯಾಣ ಮಾಡುವ ಮಹಿಳೆಯರ ರಕ್ಷಣೆ ಮಾಡಲಾಗುತ್ತಿದೆ.

ಇನ್ನು ಕೇವಲ ಬಸ್​ಗಳಲ್ಲಿ ಮಾತ್ರವಲ್ಲದೇ ನಮ್ಮ ಮೆಟ್ರೋದಲ್ಲೂ ಕೂಡ ಮಹಿಳಾ ಪ್ರಯಾಣಿಕರ ಸುರಕ್ಷತೆ ಬಗ್ಗೆ ಸರ್ಕಾರ ಸುರಕ್ಷಾ ಕ್ರಮಗಳನ್ನು ಕೈಗೊಂಡಿವೆ. ನಮ್ಮ ಮೆಟ್ರೋದಲ್ಲಿ ಕೂಡ ಪ್ಯಾನಿಕ್​ ಬಟನ್​ ಅಳವಡಿಸಲಾಗಿದೆ. ಪ್ರತಿಯೊಂದು ಬೋಗಿಗಳಲ್ಲಿ ಈ ಪ್ಯಾನಿಕ್​ ಬಟನ್ ಇರಲಿದ್ದು ಸಮಸ್ಯೆ ಆದಾಗ ಇದನ್ನ ಪ್ರೆಸ್ ಮಾಡೋದ್ರಿಂದ ಮೆಟ್ರೋ ಸಿಬ್ಬಂದಿಗಳು ನಿಮ್ಮ ನೆರೆವಿಗೆ ಧಾವಿಸುತ್ತಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ.

ತಾಜಾ ಸುದ್ದಿ
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ಜೈಲಿನಲ್ಲಿ ದರ್ಶನ್​ ಭೇಟಿಯ ಬಳಿಕ ರಕ್ಷಿತಾ-ಪ್ರೇಮ್ ಹೇಳಿದ್ದಿಷ್ಟು?
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ದರ್ಶನ್ ನನಗೆ ಚೀಲದ ತುಂಬ ಹಣ ಕಳಿಸಿದ್ದರು: ನಟ ಹರೀಶ್ ರಾಯ್
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಅಮರನಾಥ ಗುಹೆಗೆ ಮೊದಲ ಬ್ಯಾಚ್​ನ 1100​​ ಭಕ್ತರಿಂದ ಯಾತ್ರೆ ಆರಂಭ
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಿದ್ದರಾಮಯ್ಯ ಡೆಮೋಕ್ರ್ಯಾಟಿಕಲ್ಲೀ ನೇಮಕವಾಗಿರುವ ಸಿಎಂ: ಸಂತೋಷ್ ಲಾಡ್
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಸಾಲ ವಾಪಸ್​ ಕೇಳಿದ್ದಕ್ಕೆ ಬಟ್ಟೆ ಅಂಗಡಿಗೆ ನುಗ್ಗಿ ಮಹಿಳೆ ಮೇಲೆ ಹಲ್ಲೆ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಚಿತ್ರದುರ್ಗದಲ್ಲಿ ವಿದ್ಯಾರ್ಥಿನಿಯರಿಗಿಲ್ಲ ಸುರಕ್ಷತೆ? ಪುಂಡ ಪೋಕರಿಗಳ ಕಾಟ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಬೆಂಗಳೂರಿಗೆ ಸರ್ಕ್ಯೂಲರ್ ರೇಲ್ವೇ ಯೋಜನೆ ಘೋಷಿಸಿದ ರೇಲ್ವೇ ಸಚಿವ ವಿ ಸೋಮಣ್ಣ
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಉತ್ತರಾಖಂಡದಲ್ಲಿ ಪ್ರವಾಹ; ಗಂಗಾ ನದಿಯಲ್ಲಿ ತೇಲಿ ಹೋದ ಕಾರುಗಳು
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬಕ್ರೀದ್ ಹಬ್ಬದಲ್ಲಿ ಗೋಹತ್ಯೆ ನಡೆದಿವೆ ಎಂದು ಫೋನ್ ಬಿಸಾಡಿದ ಚನ್ನಬಸಪ್ಪ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ
ಬೆಂಗಳೂರಿನ ಖಾಸಗಿ ನರ್ಸಿಂಗ್ ಕಾಲೇಜಿನ ಬಸ್​ಗಳು ಬೆಂಕಿಗಾಹುತಿ