AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ಕೊವಿಡ್ ಸೋಂಕಿನ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಸಿದ್ಧತೆ, ಶೀಘ್ರವೇ 2,480 ವೈದ್ಯರ ನೇಮಕ: ಸಚಿವ ಕೆ.ಸುಧಾಕರ್​

ಬೆಂಗಳೂರು/ಚಿಕ್ಕಬಳ್ಳಾಪುರ: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕಕ್ಕೆ ಸೂಚಿಸಲಾಗಿದೆ. ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರಿನ ಕೆ.ಆರ್.ಪುರ, ಹೊಸಕೋಟೆ, ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ, ಮೂಲಸೌಕರ್ಯವನ್ನು ಸಚಿವರು ಪರಿಶೀಲಿಸಿ ಬಳಿಕ ಮಾತನಾಡಿದರು. ಕಳೆದ ಆರೇಳು ತಿಂಗಳಲ್ಲಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ, ಆರು ವೆಂಟಿಲೇಟರ್ ಅಳವಡಿಸಲಾಗಿದೆ. ಕೆಲವೆಡೆ […]

ಕೊವಿಡ್ ಸೋಂಕಿನ ವಿರುದ್ಧ ಹೋರಾಟಕ್ಕೆ ಇನ್ನಷ್ಟು ಸಿದ್ಧತೆ, ಶೀಘ್ರವೇ 2,480 ವೈದ್ಯರ ನೇಮಕ: ಸಚಿವ ಕೆ.ಸುಧಾಕರ್​
ಡಾ.ಕೆ. ಸುಧಾಕರ್​
Lakshmi Hegde
|

Updated on: May 12, 2021 | 11:41 PM

Share

ಬೆಂಗಳೂರು/ಚಿಕ್ಕಬಳ್ಳಾಪುರ: ರಾಜ್ಯದ ಎಲ್ಲಾ ತಾಲೂಕು ಆಸ್ಪತ್ರೆಗಳಲ್ಲಿ ವೆಂಟಿಲೇಟರ್ ಅಳವಡಿಕೆ ಹಾಗೂ ಅರವಳಿಕೆ ತಜ್ಞರ ನೇಮಕಕ್ಕೆ ಸೂಚಿಸಲಾಗಿದೆ. ಒಟ್ಟು 2,480 ವೈದ್ಯರ ನೇಮಕವೂ ಶೀಘ್ರ ಆಗಲಿದೆ ಎಂದು ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ತಿಳಿಸಿದರು. ಬೆಂಗಳೂರಿನ ಕೆ.ಆರ್.ಪುರ, ಹೊಸಕೋಟೆ, ಚಿಕ್ಕಬಳ್ಳಾಪುರದ ಚಿಂತಾಮಣಿಯಲ್ಲಿ ಆಸ್ಪತ್ರೆಗಳಿಗೆ ಭೇಟಿ ನೀಡಿ ಕೋವಿಡ್ ರೋಗಿಗಳಿಗೆ ಚಿಕಿತ್ಸೆ, ಮೂಲಸೌಕರ್ಯವನ್ನು ಸಚಿವರು ಪರಿಶೀಲಿಸಿ ಬಳಿಕ ಮಾತನಾಡಿದರು.

ಕಳೆದ ಆರೇಳು ತಿಂಗಳಲ್ಲಿ ಪ್ರತಿ ತಾಲೂಕು ಆಸ್ಪತ್ರೆಯಲ್ಲಿ 50 ಆಕ್ಸಿಜನ್ ಹಾಸಿಗೆ, ಆರು ವೆಂಟಿಲೇಟರ್ ಅಳವಡಿಸಲಾಗಿದೆ. ಕೆಲವೆಡೆ ಪೂರ್ಣ ಪ್ರಮಾಣದಲ್ಲಿ ಆಗಿಲ್ಲ. ಅದಕ್ಕಾಗಿ ಸೂಚನೆ ನೀಡಲಾಗಿದೆ. ಅರವಳಿಕೆ ತಜ್ಞರು, ಫಿಸಿಶಿಯನ್ ಇಲ್ಲದ ಕಡೆ ತಾತ್ಕಾಲಿಕ ವ್ಯವಸ್ಥೆ ಮಾಡಲು ಸೂಚಿಸಲಾಗಿದೆ. 720 ತಜ್ಞರನ್ನು ನೇರ ನೇಮಕ ಸೇರಿ ಒಟ್ಟು 2,480 ವೈದ್ಯರನ್ನು ನೇರ ನೇಮಕ ಮಾಡುವ ಪ್ರಕ್ರಿಯೆ ನಡೆದಿದೆ ಎಂದರು.

ಬೆಂಗಳೂರು ನಗರದಲ್ಲಿ ಕೋವಿಡ್ ಹತೋಟಿಗೆ ಬರಲಿದೆ. ಗ್ರಾಮೀಣ ಪ್ರದೇಶಗಳಲ್ಲಿ ಏರಿಕೆ ಹಾಗೂ ನಿಯಂತ್ರಣ ಕುರಿತು ಚರ್ಚಿಸಲಾಗಿದೆ. ಬೇರೆ ಜಿಲ್ಲೆಗಳಲ್ಲಿ ಲಭ್ಯವಿರುವ ಮೂಲಸೌಕರ್ಯ ಬಳಸಿಕೊಂಡು ಸೇವೆ ನೀಡಬೇಕಾಗಿದೆ. ಅದಕ್ಕಾಗಿ ಈಗಿನಿಂದಲೇ ಸಿದ್ಧತೆಗೆ ಸೂಚಿಸಲಾಗಿದೆ ಎಂದರು.

ಹೊಸಕೋಟೆಯ ಎಂವಿಜೆ ಆಸ್ಪತ್ರೆಗೆ 10 ವೆಂಟಿಲೇಟರ್ ನೀಡಲಾಗಿದೆ. ಇನ್ನೂ 10 ವೆಂಟಿಲೇಟರ್ ಕೇಳಿದ್ದು, ಅದನ್ನೂ ಕಳುಹಿಸಿಕೊಡಲಾಗುವುದು. ಹೊಸದಾಗಿ 115 ಹಾಸಿಗೆಯ ಸ್ಟೆಪ್ ಡೌನ್ ಆಸ್ಪತ್ರೆ ನಿರ್ಮಿಸಿ ಕೋವಿಡ್ ರೋಗಿಗಳಿಗೆ ಆರೈಕೆ ನೀಡಲು ನಿರ್ಧರಿಸಲಾಗಿದೆ. ರೋಗಿಗಳು ತಡವಾಗಿ ಆಸ್ಪತ್ರೆಗೆ ಬರುವುದರಿಂದ ಸಾವಿನ ಪ್ರಮಾಣ ಹೆಚ್ಚಾಗಿದೆ. ವರದಿ ಬಂದ ಕೂಡಲೇ ತಕ್ಷಣ ಚಿಕಿತ್ಸೆ ನೀಡಬೇಕು. ಟಾಸ್ಕ್ ಫೋರ್ಸ್ ಪ್ರತಿ ದಿನ ಮನೆಗೆ ಭೇಟಿ ನೀಡಿ ರೋಗಿಗಳ ಪರಿಸ್ಥಿತಿ ಪರೀಕ್ಷಿಸಬೇಕು ಎಂದು ಸೂಚಿಸಲಾಗಿದೆ ಎಂದು ತಿಳಿಸಿದರು.

ಹೊಸಕೋಟೆಯ ತಾಲೂಕು ಆಸ್ಪತ್ರೆಯಲ್ಲಿ 60 ಹಾಸಿಗೆ ಇದ್ದು, 40ನ್ನು ಆಕ್ಸಿಜನ್ ಹಾಸಿಗೆ ಮಾಡಲಾಗಿದೆ. ಔಷಧಿ ಕೊರತೆ ಕಂಡುಬಂದರೆ, ಸ್ಥಳೀಯವಾಗಿಯೇ ಖರೀದಿಸಿ ತಕ್ಷಣ ಪೂರೈಸಲಾಗುತ್ತದೆ ಎಂದು ಮಾಹಿತಿ ನೀಡಿದರು.

ಚಿಕ್ಕಬಳ್ಳಾಪುರಕ್ಕೆ ಇನ್ನೂ 15 ಆ್ಯಂಬುಲೆನ್ಸ್​ ಚಿಕ್ಕಬಳ್ಳಾಪುರದಲ್ಲಿ 16 ಆಂಬ್ಯುಲೆನ್ಸ್ ಇದ್ದು, ಇನ್ನೂ 15 ಪಡೆಯಲು ಸೂಚಿಸಲಾಗಿದೆ. ಪ್ರತಿ ತಾಲೂಕಿನಲ್ಲಿ 5-6 ಆಂಬ್ಯುಲೆನ್ಸ್ ಇರಬೇಕು. ಖಾಸಗಿ ಆಸ್ಪತ್ರೆಯ 112 ಆಕ್ಸಿಜನ್ ಹಾಸಿಗೆಗಳನ್ನು ಜಿಲ್ಲೆಯ ಜನರಿಗೆ ಮೀಸಲಿಡಲಾಗುತ್ತಿದೆ. ಚಿಂತಾಮಣಿಯಲ್ಲಿ 25% ಪಾಸಿಟಿವಿಟಿ ದರ ಇದೆ. ಇಲ್ಲಿ ಸಾವಿನ ಪ್ರಮಾಣ ಇಳಿಸುವುದು ಮುಖ್ಯ. ಬೂತ್ ಮಟ್ಟದ ಟಾಸ್ಕ್ ಫೋರ್ಸ್ ಸಮಿತಿ ಮನೆಗೆ ಭೇಟಿ ನೀಡಿ ರೋಗಿಗಳ ಆರೋಗ್ಯ ಸ್ಥಿತಿ ಪರೀಕ್ಷಿಸುತ್ತಿದ್ದಾರೆ ಎಂದು ತಿಳಿಸಿದರು.

ಚಿಕ್ಕಬಳ್ಳಾಪುರದಲ್ಲಿ 10 ಸಾವಿರ ಜನರಿಗೆ ಆಗುವಷ್ಟು ಕೋವಿಡ್ ಕೇರ್ ಸೆಂಟರ್ ಗುರುತಿಸಿದ್ದರೂ ರೋಗಿಗಳು ಹೆಚ್ಚು ಬರುತ್ತಿಲ್ಲ. ಮನೆಯಲ್ಲೇ ಆರೈಕೆ ಮಾಡಿಕೊಳ್ಳುತ್ತಿದ್ದಾರೆ. ಚಿಂತಾಮಣಿಗೆ ಒಂದು ಆಕ್ಸಿಜನ್ ಘಟಕ ಮಂಜೂರಾಗಿದೆ. ಸಿಎಸ್ ಆರ್ ಅನುದಾನದಡಿ, ಜಿಲ್ಲಾ ಕೇಂದ್ರಕ್ಕೆ ಒಂದು ಆಕ್ಸಿಜನ್ ಜನರೇಟರ್ ಬರಲಿದೆ. ಗೌರಿಬಿದನೂರಿನಲ್ಲಿ ಒಂದು ಘಟಕ, ಬಾಗೇಪಲ್ಲಿಯಲ್ಲಿ ಒಂದು ಘಟಕ ಬರಲಿದೆ ಎಂದು ಮಾಹಿತಿ ನೀಡಿದರು.

ಕೆ.ಆರ್.ಪುರ ಆಸ್ಪತ್ರೆಯಲ್ಲಿ 10 ವೆಂಟಿಲೇಟರ್​ಗೆ ಬೇಡಿಕೆ ಕೆ.ಆರ್.ಪುರ ಆಸ್ಪತ್ರೆಯಲ್ಲಿ 10 ವೆಂಟಿಲೇಟರ್​ಗೆ ಬೇಡಿಕೆ ಇಡಲಾಗಿದೆ. ಅದಕ್ಕೆ ಕೂಡಲೇ ವ್ಯವಸ್ಥೆ ಮಾಡಲಾಗುತ್ತದೆ. ಕೋವಿಡ್ ಲಸಿಕೆಯ ಕೊರತೆ ಇಲ್ಲ. ಲಸಿಕೆ ಪೂರೈಕೆಯಾದ ಕೂಡಲೇ ಎಲ್ಲರಿಗೂ ಲಸಿಕೆ ನೀಡಲಾಗುವುದು. ಎಲ್ಲರೂ ಆನ್ ಲೈನ್ ನಲ್ಲಿ ನೋಂದಣಿ ಮಾಡುವಾಗ ತಮ್ಮ ಜಿಲ್ಲೆಯಲ್ಲೇ ನಿಗದಿ ಮಾಡಿ ಅಲ್ಲೇ ಲಸಿಕೆ ಪಡೆಯಿರಿ ಎಂದು ಹೇಳಿದ ಅವರು, ವೈದ್ಯರಂತೆ ದಾದಿಯರು ಕೂಡ ತುಂಬ ಮುಖ್ಯ. ಕೋವಿಡ್ ವಿರುದ್ಧ ಹೋರಾಡುತ್ತಿರುವ ಅವರಿಗೆ ರಿಸ್ಕ್ ಭತ್ಯೆ ನೀಡಲಾಗುವುದು.

ಇದನ್ನೂ ಓದಿ: ಮಾಧ್ಯಮದವರನ್ನು ಕೊವಿಡ್​ ವಾರಿಯರ್ಸ್​ ಎಂದು ಗುರುತಿಸಿದರೆ ಸಾಲದು, ಅವರಿಗೂ ಪರಿಹಾರ ನೀಡಬೇಕು: ಸಿಎಂಗೆ ಮಾಜಿ ಸಿಎಂ ಪತ್ರ

ದೇಶದಲ್ಲಿ ತೀವ್ರವಾಗುತ್ತಿದೆ ಕೊವಿಡ್​ 19; ಇಂದು ಮತ್ತೆ ಉನ್ನತ ಮಟ್ಟದ ಪರಿಶೀಲನಾ ಸಭೆ ನಡೆಸಿದ ಪ್ರಧಾನಿ ಮೋದಿ

ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದರ್ಶನ್ ನಟನೆಯ ‘ದಿ ಡೆವಿಲ್’ ಸಿನಿಮಾ ನೋಡಿ ಫಿದಾ ಆದ ಪೂಜಾ ಗಾಂಧಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ದೇಶಿ ಟಿ20 ಟೂರ್ನಿಯಲ್ಲಿ ಹ್ಯಾಟ್ರಿಕ್ ವಿಕೆಟ್ ಪಡೆದ ನಿತೀಶ್ ರೆಡ್ಡಿ
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ನನ್ನ ಹಿಂದೆ ಯಾರೂ ಬರೋದು ಬೇಡ: ಡಿಕೆ ಶಿವಕುಮಾರ್​​ ಹೀಗಂದಿದ್ದೇಕೆ?
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಆಂಧ್ರದಲ್ಲಿ ಬಸ್ ಅಪಘಾತ; ಪ್ರಧಾನಿಯಿಂದ 2 ಲಕ್ಷ ರೂ. ಪರಿಹಾರ ಘೋಷಣೆ
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ಮೈಸೂರಿನ ಅಭಿಮಾನಿಗಳಿಗೆ ‘ದಿ ಡೆವಿಲ್’ ಸಿನಿಮಾ ಇಷ್ಟ ಆಯ್ತಾ? ವಿಡಿಯೋ ನೋಡಿ..
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ರೈತರಿಗೆ ಕನ್ಯಾ ಕೊಡುತ್ತಿಲ್ಲ ಎಂದು ಡಿಸಿ ಮುಂದೆ ಅಳಲು ತೋಡಿಕೊಂಡ ಯುವಕ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ಇನ್ಸ್​​ಸ್ಟಾದಲ್ಲಿ ನೋಡಿ ಓಡೋಡಿ ಬಂದು ಪ್ರಿಯಕರನ ಮದ್ವೆ ತಡೆದ ಪ್ರೇಯಿಸಿ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದರ್ಶನ್ ಪತ್ನಿ ವಿಜಯಲಕ್ಷ್ಮಿಗೆ ಧನ್ಯವಾದ ಹೇಳಿದ ‘ಡೆವಿಲ್’ ನಟಿ ರಚನಾ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ದುರಹಂಕಾರದ ಫೈಟ್: ಬಿಗ್ ಬಾಸ್ ಮನೆಯಲ್ಲಿ ರಜತ್, ಅಶ್ವಿನಿ ಗೌಡ, ಚೈತ್ರಾ ಜಗಳ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ
ಭಾರತದಲ್ಲಿ ಇದೇ ಮೊದಲ ಬಾರಿಗೆ ಡಿಜಿಟಲ್ ಜನಗಣತಿ