ಕರ್ನಾಟಕಕ್ಕೆ ಕೇಂದ್ರದಿಂದ ಶೀಘ್ರ 25 ಸಾವಿರ ರೆಮ್ಡೆಸಿವಿರ್ ಔಷಧಿ
ರೆಮ್ಡೆಸಿವಿರ್ ಇಂಜೆಕ್ಷನ್ನ್ನು ಏಪ್ರಿಲ್ 20ರವರೆಗೆ ಬಳಕೆಗೆ ಅನುಕೂಲವಾಗುವಂತೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.
ದೆಹಲಿ: ಕರ್ನಾಟಕ ರಾಜ್ಯಕ್ಕೆ 25,000 ವಯಲ್ಸ್ ರೆಮ್ಡೆಸಿವಿರ್ ಇಂಜೆಕ್ಷನ್ ಒದಗಿಸಲು ಕೇಂದ್ರ ಸರ್ಕಾರ ನಿರ್ಧಾರ ಕೈಗೊಂಡಿದೆ. 25 ಸಾವಿರ ವಯಲ್ಸ್ ಅಥವಾ ಬಾಟಲಿ ರೆಮ್ಡೆಸಿವಿರ್ ಇಂಜೆಕ್ಷನ್ನ್ನು ಏಪ್ರಿಲ್ 20ರವರೆಗೆ ಬಳಕೆಗೆ ಅನುಕೂಲವಾಗುವಂತೆ ಬಿಡುಗಡೆ ಮಾಡಲು ಕೇಂದ್ರ ಸರ್ಕಾರ ನಿರ್ಧರಿಸಿದೆ. ಈ ಕುರಿತು ರಾಜ್ಯ ಆರೋಗ್ಯ ಇಲಾಖೆ ಕೇಂದ್ರ ಸರ್ಕಾರಕ್ಕೆ ಮನವಿ ಮಾಡಿತ್ತು.
ಈಕುರಿತು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಟ್ವೀಟ್ ಮಾಡಿದ್ದು, ಸಂಸದ ತೇಜಸ್ವಿ ಸೂರ್ಯ ಕರ್ನಾಟಕಕ್ಕೆ ಔಷಧದ ಕೊರತೆ ಉಂಟಾಗುವುದನ್ನು ಮನವರಿಕೆ ಮಾಡಿಕೊಟ್ಟರು. ಹೀಗಾಗಿ ತಕ್ಷಣವೇ ಕರ್ನಾಟಕಕ್ಕೆ ರೆಮ್ಡೆಸಿವಿರ್ ಇಂಜೆಕ್ಷನ್ ಪೂರೈಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಅವರು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ದೇಶದಲ್ಲಿ ಕೊವಿಡ್ ಸೊಂಕಿತರ ಚಿಕಿತ್ಸೆಗೆ ವೈದ್ಯಕೀಯ ಆಮ್ಲಜನಕದ ಪೂರೈಕೆಯ ಕುರಿತು ಉನ್ನತ ಮಟ್ಟದ ಅಧಿಕಾರಿಗಳ ಸಭೆ ನಡೆಸಿದರು. ಸಭೆಯಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ, ವೇಗವಾಗಿ ವಿತರಿಸುವ ಬಗೆ ಮತ್ತು ಅಗತ್ಯ ರೋಗಿಗಳಿಗೆ ಈ ಸೌಲಭ್ಯವನ್ನು ಸುಲಭವಾಗಿ ದೊರೆಯುವಂತೆ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚಿಸಿದರು. ವೈದ್ಯಕೀಯ ಆಮ್ಲಜನಕವನ್ನು ಇನ್ನಷ್ಟು ಹೆಚ್ಚಿನ ಪ್ರಮಾಣದಲ್ಲಿ ಪೂರೈಸಲು ಅಗತ್ಯ ಕ್ರಮಗಳನ್ನು ಕೈಗೊಳ್ಳುವ ಕುರಿತು ಚರ್ಚಿಸಲಾಯಿತು. ಅಧಿಕಾರಿಗಳು ಕೆಲ ವಾರಗಳಿಂದ ವೈದ್ಯಕೀಯ ಆಮ್ಲಜನಕ ಪೂರೈಕೆಗೆ ಕೈಗೊಂಡ ಕ್ರಮಗಳನ್ನು ಪ್ರಧಾನಿ ನರೇಂದ್ರ ಮೋದಿಗೆ ಮನವರಿಕೆ ಮಾಡಿಕೊಟ್ಟರು.
Bengaluru (South) MP @Tejasvi_Surya spoke to me on the shortage of Remdesivir allocation to Karnataka. Today an additional stock will be given and in the next few days further stocks will be sent. Thanking @DVSadanandGowda for the support.
— Nirmala Sitharaman (@nsitharaman) April 22, 2021
Profusely thank Sri @DVSadanandGowda for this! pic.twitter.com/XnX5nnH6yP
— Tejasvi Surya (@Tejasvi_Surya) April 22, 2021
ಪಿಎಂ ಪ್ರಧಾನ ಕಾರ್ಯದರ್ಶಿ, ಸಂಪುಟ ಕಾರ್ಯದರ್ಶಿ, ಆರೋಗ್ಯ ಇಲಾಖೆ ಕಾರ್ಯದರ್ಶಿ ಮತ್ತಿತರ ಪ್ರಮುಖರು ಸಭೆಯಲ್ಲಿ ಭಾಗಿಯಾಗಿದ್ದಾರೆ. ಸಭೆಯಲ್ಲಿ ದೇಶದ ಆಸ್ಪತ್ರೆಗಳಿಗೆ ಶೀಘ್ರ ಮೆಡಿಕಲ್ ಆಕ್ಸಿಜನ್ ಪೂರೈಕೆಗೆ ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ. ವೇಗವಾಗಿ ಆಕ್ಸಿಜನ್ ಪೂರೈಕೆ ಅಗತ್ಯವಾಗಿದೆ. ಮೆಡಿಕಲ್ ಆಕ್ಸಿಜನ್ಗಳ ಖಾಲಿ ಟ್ಯಾಂಕರ್ಗಳನ್ನು ಏರ್ ಲಿಫ್ಟ್ ಮೂಲಕ ಸಾಗಾಟ ಮಾಡಲು ಪ್ರಧಾನಿ ನರೇಂದ್ರ ಮೋದಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಈ ಸಭೆಯಲ್ಲಿ ವೈದ್ಯಕೀಯ ಆಮ್ಲಜನಕದ ಉತ್ಪಾದನೆ, ವೇಗವಾಗಿ ವಿತರಿಸುವ ಬಗೆ ಮತ್ತು ಅಗತ್ಯ ರೋಗಿಗಳಿಗೆ ಈ ಸೌಲಭ್ಯವನ್ನು ಸುಲಭವಾಗಿ ದೊರೆಯುವಂತೆ ಮಾಡುವ ಕುರಿತು ಪ್ರಧಾನಿ ನರೇಂದ್ರ ಮೋದಿ ಅಧಿಕಾರಿಗಳಿಗೆ ಸೂಚಿಸಿದರು. 20 ರಾಜ್ಯಗಳು ಈಗಾಗಲೇ ಕೇಂದ್ರ ಸರ್ಕಾರವನ್ನು ಕೇಳಿಕೊಂಡಂತೆ ಪ್ರತಿದಿನ 6,785 ಮೆಟ್ರಿಕ್ ಟನ್ ಆಮ್ಲಜನಕದ ಬದಲು 6,822 ಮೆಟ್ರಿಕ್ ಟನ್ ಆಮ್ಲಜನಕ ಪೂರೈಸಲಾಗಿದೆ ಎಂದು ಅಧಿಕಾರಿಗಳು ಪ್ರಧಾನಿ ನರೇಂದ್ರ ಮೋದಿ ಅವರಿಗೆ ತಿಳಿಸಿದರು.
ಸರ್ಕಾರಿ ಮತ್ತು ಖಾಸಗಿ ಉತ್ಪಾದನಾ ಸಂಸ್ಥೆಗಳಿಂದ ವೈದ್ಯಕೀಯ ಆಮ್ಲಜನಕದ ಉತ್ಪಾದನೆಯಲ್ಲಿ ಹೆಚ್ಚಳವಾಗಿದೆ. ಸದ್ಯ 3300 ಮೆಟ್ರಿಕ್ ಟನ್ ವೈದ್ಯಕೀಯ ಆಮ್ಲಜನಕವನ್ನು ದೇಶದಲ್ಲಿ ಒಂದು ದಿನದಲ್ಲಿ ಉತ್ಪಾದಿಸಲಾಗುತ್ತಿದೆ ಎಂದು ಅಧಿಕಾರಿಗಳು ಪ್ರಧಾನಿ ಮೋದಿ ಅವರಿಗೆ ತಿಳಿಸಿದರು. ಸಭೆಯಲ್ಲಿ ರಾಜ್ಯಗಳಿಗೆ ಯಾವುದೇ ಅಸಹಕಾರ ನೀಡದಂತೆ ಅಗತ್ಯ ಪ್ರಮಾಣದ ವೈದ್ಯಕೀಯ ಆಮ್ಲಜನಕವನ್ನು ಪೂರೈಸುವಂತೆ ಪ್ರಧಾನಿ ನರೇಂದ್ರ ಮೋದಿ ತಿಳಿಸಿದರು. ಅಲ್ಲದೇ, ದೇಶದ ವಿವಿಧ ಪ್ರದೇಶಗಳಲ್ಲಿ ಒಟ್ಟು 162 ಮೆಡಿಕಲ್ ಆಕ್ಸಿಜನ್ ಉತ್ಪಾದನಾ ಘಟಕಗಳನ್ನು ಕಾರ್ಯಾರಂಭಗೊಳಿಸಲಾಗುವುದು ಎಂದು ಪ್ರಧಾನಿ ಮೋದಿ ತಿಳಿಸಿದರು.
ಇದನ್ನೂ ಓದಿ: Explainer: ಮಕ್ಕಳನ್ನೂ ಬಾಧಿಸುತ್ತಿದೆ ಕೊರೊನಾ; ನಿಮ್ಮ ಮನೆಯಲ್ಲಿ ಮಕ್ಕಳಿದ್ದರೆ ಈ ಸ್ಟೋರಿ ಮಿಸ್ ಮಾಡದೇ ಓದಿ
Explainer: ಕೊವಿಡ್ ನಿರ್ವಹಣೆ ಕೈಪಿಡಿ, ನಿಮ್ಮ ಮನೆಯಲ್ಲಿಯೂ ಇರಲಿ ಈ ಆಪ್ತಮಿತ್ರ
Published On - 5:58 pm, Thu, 22 April 21