ಕಲಬುರಗಿ ಜಿಲ್ಲೆಗೆ ಬೋಯಿಂಗ್ ಇಂಡಿಯಾ ಸಂಸ್ಥೆಯ 250 ಆಕ್ಸಿಜನ್ ಬೆಡ್ ಆಸ್ಪತ್ರೆ ನಿರ್ಮಾಣ: ಮುರುಗೇಶ್ ನಿರಾಣಿ ಮಾಹಿತಿ

ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದೇ‌ ಸಂಸ್ಥೆಯಿಂದ ಬೆಂಗಳೂರಿನ ಯಲಹಂಕದಲ್ಲಿಯೂ 200 ಆಕ್ಸಿಜನ್ ಬೆಡ್ ಸ್ಥಾಪಿಸಲಾಗುತ್ತಿದೆ ಎಂದರು.

ಕಲಬುರಗಿ ಜಿಲ್ಲೆಗೆ ಬೋಯಿಂಗ್ ಇಂಡಿಯಾ ಸಂಸ್ಥೆಯ 250 ಆಕ್ಸಿಜನ್ ಬೆಡ್ ಆಸ್ಪತ್ರೆ ನಿರ್ಮಾಣ: ಮುರುಗೇಶ್ ನಿರಾಣಿ ಮಾಹಿತಿ
ಮುರುಗೇಶ್ ನಿರಾಣಿ
Follow us
TV9 Web
| Updated By: ganapathi bhat

Updated on:Aug 23, 2021 | 12:45 PM

ಕಲಬುರಗಿ: ಕೊವಿಡ್19 ಸೋಂಕಿತರಿಗಾಗಿಯೇ ಬೋಯಿಂಗ್ ವಿಮಾನ ಸಂಸ್ಥೆಯು ಸುಮಾರು 250 ಹಾಸಿಗೆಯ ಸಾಮಾರ್ಥ್ಯವುಳ್ಳ ಆಮ್ಲಜನಕಯುಕ್ತ ಆಸ್ಪತ್ರೆಯನ್ನು ನಿರ್ಮಾಣ ಮಾಡಲು ಮುಂದೆ ಬಂದಿದೆ. ಗಣಿ ಮತ್ತು ಭೂವಿಜ್ಞಾನ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮುರುಗೇಶ್ ಆರ್. ನಿರಾಣಿ ಈ ಬಗ್ಗೆ ಕಲಬುರಗಿಯಲ್ಲಿ ಮಾಹಿತಿ ಪ್ರಕಟಿಸಿದರು. ಈ ಆಸ್ಪತ್ರೆಯು ಖಾಸಗಿ ಸಾರ್ವಜನಿಕ ಸಹಭಾಗಿತ್ವ (ಪಿಪಿಪಿ) ಮಾದರಿಯಲ್ಲಿ ನಿರ್ಮಾಣವಾಗಲಿದ್ದು, ಎಷ್ಟು ಸಾಧ್ಯವೋ ಅಷ್ಟು ತ್ವರಿತಗತಿಯಲ್ಲಿ ಕಾರ್ಯಾರಂಭ ಮಾಡಲಿದೆ ಎಂದು ಹೇಳಿದರು.

ನಗರದ ಐವಾನ್-ಎ-ಶಾಹಿ ಅತಿಥಿಗೃಹದಲ್ಲಿ ಶನಿವಾರ ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, ಇದೇ‌ ಸಂಸ್ಥೆಯಿಂದ ಬೆಂಗಳೂರಿನ ಯಲಹಂಕದಲ್ಲಿಯೂ 200 ಆಕ್ಸಿಜನ್ ಬೆಡ್ ಸ್ಥಾಪಿಸಲಾಗುತ್ತಿದೆ ಎಂದರು. ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ಆಸ್ಪತ್ರೆ ನಿರ್ಮಾಣಕ್ಕೆ ನಿವೇಶನವನ್ನು ಇಂದೇ ಗುರುತಿಸಲಾಗುವುದು. ಜಿಲ್ಲಾಡಳಿತ ಹಾಗೂ ಜಿಲ್ಲಾ ಜನಪ್ರತಿನಿಧಿಗಳ ಜೊತೆ ಚರ್ಚೆಸಿ ಸೂಕ್ತ ಸ್ಥಳದಲ್ಲಿ ನಿರ್ಮಾಣ ಮಾಡಲಾಗುವುದು ಎಂದರು.

ನಾಳೆಯಿಂದ ಕೆಲಸ ಆರಂಭವಾಗಲಿದೆ. ಮುಂದಿನ ಆರು ತಿಂಗಳ ಒಳಗೆ ಪೂಣ೯ಗೊಳ್ಳಲಿದೆ ಎಂಬ ವಿಶ್ವಾಸವನ್ನು ವ್ಯಕ್ತಪಡಿಸಿದರು. ಕಲಬುರಗಿಯಲ್ಲಿ ಒಟ್ಟು 1600 ಬೆಡ್ ಇದೆ. ಆಕ್ಸಿಜನ್ ಬೆಡ್ 400, ಐಸಿಯು ಬೆಡ್ 378 ವ್ಯವಸ್ಥೆ ಇದೆ. ಇಎಸ್ಐ ಆಸ್ಪತ್ರೆಯಲ್ಲಿ 500 ಬೆಡ್ ವ್ಯವಸ್ಥೆ ಮಾಡಲಾಗಿದೆ ಎಂದು ಮಾಹಿತಿ ನೀಡಿದರು. ಇಂದು ಜಿಲ್ಲೆಗೆ 200 ವಯುಲ್ ರೆಮಿಡಿಸಿವರ್ ಇಂಜೆಕ್ಷನ್ ಬಂದಿದೆ. ನಾಳೆ ಹೆಚ್ಚಿನ ಇಂಜೆಕ್ಷನ್ ಕಳುಹಿಸುವಂತೆ ಡಿಸಿಎಂ ಅಶ್ವಥ್ ನಾರಾಯಣ್ ಅವರ ಗಮನಕ್ಕೆ ತರಲಾಗಿದೆ. ಜಿಲ್ಲೆಯಲ್ಲಿ ಆಕ್ಸಿಜನ್ ಕೊರತೆ ಇಲ್ಲ, ಆದರೆ, ಬೇರೆ ಕಡೆಯಿಂದ ತರುವುದಕ್ಕೆ ನಮಗೆ ತೊಂದರೆ ಆಗುತ್ತಿದೆ‌ ಎಂದು ‌ವಾಸ್ತವವನ್ನು ಬಿಚ್ಚಿಟ್ಟರು.

ವೈದ್ಯಕೀಯ ಸೌಲಭ್ಯದ ಬಗ್ಗೆ ಮಾಹಿತಿ ಸರ್ಕಾರದ ಖೋಟಾ ಹೊರತಾಗಿ ಬೇರೆ ಕಡೆಯಿಂದ ಎರಡು ಟ್ಯಾಂಕ್ ಆಕ್ಸಿಜನ್ ತರಲಾಗುತ್ತಿದೆ. ನಾಳೆ ಬೆಳಗ್ಗೆ ಒಳಗೆ ಕಲಬುರಗಿ ಜಿಲ್ಲೆಗೆ ಒಂದು ಟ್ಯಾಂಕರ್ ಆಕ್ಸಿಜನ್ ಬರುತ್ತದೆ. ಮುಂದಿನ ವಾರಕ್ಕೆ ನಮಗೆ 30 ಕೆಎಲ್ ಆಕ್ಸಿಜನ್ ಬೇಕಾಗಬುದು ಎಂದು ಸಚಿವ ನಿರಾಣಿ ಅವರು ಅಂದಾಜಿಸಿದರು.

ಆ ನಿಟ್ಟಿನಲ್ಲಿ ಗಮನ ವಹಿಸಿ ಆಕ್ಸಿಜನ್ ಪೂರೈಕೆ ಮಾಡಿಕೊಳ್ಳಲಾಗುತ್ತಿದೆ. ಸಿಲಿಂಡರ್ ಖರೀದಿಗ ಹಣ ನೀಡಲಾಗಿದೆ, ಆದರೆ, ಮಹಾರಾಷ್ಟ್ರದವರು ದೂರವಾಣಿ ಕರೆಗಳನ್ನು ಸ್ವೀಕರಿಸುತ್ತಿಲ್ಲ. 100 ಆಕ್ಸಿಜನ್ ಕಾನ್ಸಂಟ್ರೇಟರ್ ಸೋಮವಾರ ಕಲಬುರಗಿಗೆ ಬರಲಿದೆ ಎಂದು ಹೇಳಿದರು. ಅಕ್ಕ ಪಕ್ಕದ ರಾಜ್ಯದಲ್ಲಿ ಲಾಕ್ ಡೌನ್ ಸಂದರ್ಭದಲ್ಲಿ ಬಡವರಿಗೆ ಏನು ವ್ಯವಸ್ಥೆ ಕಲ್ಪಿಸಿದ್ದಾರೆ ಅನ್ನೋದನ್ನ ನೋಡಿ ಮುಂದಿನ ದಿನಗಳಲ್ಲಿ ಸರ್ಕಾರ ನಿರ್ಣಯ ತೆಗೆದುಕೊಳ್ಳಲಾಗುವುದು ಎಂದು ಸ್ಪಷ್ಟಪಡಿಸಿದರು.

ಎರಡು ದಿನಗಳ ಜಿಲ್ಲಾ ಪ್ರವಾಸ ಕೈಗೊಂಡಿದ್ದ ಸಚಿವ ನಿರಾಣಿ, ಮೊದಲು ಸೇಡಂ ಪಟ್ಟಣದಲ್ಲಿ ಕೋವಿಡ್ ಕೇರ್ ಸೆಂಟರ್ ಉದ್ಘಾಟಿಸಿ ಹಾಸಿಗೆ ಇಲ್ಲದೆ ಸಂಕಷ್ಟದಲ್ಲಿದ್ದವರಿಗೆ ಧೈರ್ಯ ತುಂಬುವ ಪ್ರಯತ್ನ ಮಾಡಿದರು. ಬಳಿಕ ಅಫಜಲಪುರ ತಾಲ್ಲೂಕು ಅಸ್ಪತ್ರೆಗೆ ದಿಢೀರ್ ಭೇಟಿ ನೀಡಿದ ಸಚಿವ, ಅಲ್ಲಿನ‌ ಸ್ಥಿತಿಗತಿ ಬಗ್ಗೆ ಖುದ್ದು ಮಾಹಿತಿ ಪಡೆದರು. ಕೊವಿಡ್ ಸೋಂಕಿತರಿಗೆ ಅಗತ್ಯವಿರುವ ಹಾಸಿಗೆ, ಐಸಿಯು ಬೆಡ್, ಲಸಿಕೆ, ಔಷಧಿ, ಅಕ್ಸಿಜನ್ ಸೇರಿದಂತೆ ಎಲ್ಲಾ ರೀತಿಯ ಸೌಲಭ್ಯಗಳು ಇರಬೇಕೆಂದು ವೈದ್ಯಧಿಕಾರಿಗಳಿಗೆ ತಾಕೀತು ಮಾಡಿದರು.

ಸೇಡಂನಿಂದ ನೇರವಾಗಿ ಕಲಬುರಗಿಗೆ ಆಗಮಿಸಿದ ಅವರು, ಶ್ರೀ ಸ್ವಾಮಿನಾರಾಯಣ ಗುರುಕುಲ ಇಂಟರ್ ನ್ಯಾಶನಲ್ ಸ್ಕೂಲ್ ವತಿಯಿಂದ ‌ತೆರೆದಿರುವ 150 ಹಾಸಿಗೆಯ ಸಾಮಾಥ್ರ್ಯ೯ದ ಕೋವಿಡ್ ಕೇರ್ ಸೆಂಟರ್​ನ್ನು ಸಾರ್ವಜನಿಕರ ಸೇವೆಗೆ ಸಮರ್ಪಿಸಿದರು. ಬಳಿಕ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾ ಜ‌ನಪ್ರತಿನಿಧಿಗಳು ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳ ಸಭೆ ನಡೆಸಿ, ಕೊವಿಡ್ -19 ನಿಯಂತ್ರಣ ಹಾಗೂ ವೈದ್ಯಕೀಯ ಸೋಂಕಿತರಿಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ಅಭಿಪ್ರಾಯ ಪಡೆದರು.

ಇದನ್ನೂ ಓದಿ: ಬೆಂಗಳೂರಲ್ಲಿ ಆಕ್ಸಿಜನ್ ವ್ಯವಸ್ಥೆ ಜತೆಗೆ 200 ಹಾಸಿಗೆಯ ಆಸ್ಪತ್ರೆ ಸ್ಥಾಪನೆಗೆ ಮುಂದಾದ ಬೋಯಿಂಗ್ ಇಂಡಿಯಾ

ರಾಜ್ಯದ ಎಲ್ಲಾ ಆಸ್ಪತ್ರೆಗಳಲ್ಲಿ ಮೇ.11ರ ಒಳಗೆ ಸಿಸಿ ಕ್ಯಾಮರಾ ಅಳವಡಿಸಬೇಕು: ಆರೋಗ್ಯ ಇಲಾಖೆ

Published On - 7:08 pm, Sat, 8 May 21

ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಯಾವ ದೋಷಕ್ಕೆ ನವಗ್ರಹವನ್ನು ಹೇಗೆ ಪ್ರದಕ್ಷಿಣೆ ಹಾಕಬೇಕು? ಇಲ್ಲಿದೆ ನೋಡಿ
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ಈ ರಾಶಿಯವರಿಗಿಂದು 6 ಗ್ರಹಗಳ ಶುಭ ಫಲ! ಉಳಿದ ರಾಶಿಗಳ ಫಲಾಫಲವೇನು?
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ನವೆಂಬರ್ ಕೊನೆಯ ವಾರ ಹೇಗಿರಲಿದೆ ನಿಮ್ಮ ರಾಶಿ ಭವಿಷ್ಯ? ಇಲ್ಲಿದೆ ನೋಡಿ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಬೊಮ್ಮಾಯಿ ವಿರುದ್ಧ ಏಕಾಂಗಿಯಾಗಿ ಹೋರಾಡಿ 74,000 ಮತ ಪಡೆದಿದ್ದೆ: ಖಾದ್ರಿ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ