ಏಪ್ರಿಲ್​ ನಂತರ ಕರ್ನಾಟಕದಲ್ಲಿ 251 ರೈತರ ಆತ್ಮಹತ್ಯೆ; ತೊಂದರೆ ನೀಡುವ ಲೇವಾದೇವಿಗಾರರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ

|

Updated on: Sep 13, 2023 | 3:01 PM

ಈವರೆಗೆ ಕೇವಲ 174 ಪ್ರಕರಣಗಳು ಮಾತ್ರ ಇತ್ಯರ್ಥಗೊಂಡಿವೆ ಎಂದ ಸಿದ್ದರಾಮಯ್ಯ, ಆತ್ಮಹತ್ಯೆ ಮಾಡಿಕೊಂಡ ರೈತರ ಉಳಿದ ಕುಟುಂಬಗಳಿಗೆ ಶೀಘ್ರವೇ ಪರಿಹಾರ ವಿತರಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ. ಏಪ್ರಿಲ್‌ನಿಂದ 251 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿರುವುದಾಗಿ ಮುಖ್ಯಮಂತ್ರಿ ಕಚೇರಿ ಖಚಿತಪಡಿಸಿದೆ.

ಏಪ್ರಿಲ್​ ನಂತರ ಕರ್ನಾಟಕದಲ್ಲಿ 251 ರೈತರ ಆತ್ಮಹತ್ಯೆ; ತೊಂದರೆ ನೀಡುವ ಲೇವಾದೇವಿಗಾರರ ವಿರುದ್ಧ ಕ್ರಮಕ್ಕೆ ಸಿಎಂ ಸೂಚನೆ
ಸಾಂದರ್ಭಿಕ ಚಿತ್ರ
Follow us on

ಬೆಂಗಳೂರು, ಸೆಪ್ಟೆಂಬರ್ 13: ಕರ್ನಾಟಕದಲ್ಲಿ ಏಪ್ರಿಲ್‌ನಿಂದ ಇಲ್ಲಿಯವರೆಗೆ 251 ರೈತರು ಆತ್ಮಹತ್ಯೆ (Farmers Suicide) ಮಾಡಿಕೊಂಡಿರುವುದಾಗಿ ವರದಿಯಾಗಿದೆ. ರೈತರ ಆತ್ಮಹತ್ಯೆಗಳಿಗೆ ಲೇವಾದೇವಿಗಾರರು ಮತ್ತು ಬ್ಯಾಂಕ್‌ಗಳ ಕಿರುಕುಳವೇ ಮುಖ್ಯ ಕಾರಣ ಎನ್ನಲಾಗಿದೆ. ಮುಂಗಾರು ಮಳೆ ಕೊರತೆಯಿಂದಾಗಿ ಬೆಳೆ ನಷ್ಟವಾಗಿದ್ದು, ಸಾಲವನ್ನು ಮರುಪಾವತಿಸಲು ಸಾಧ್ಯವಾಗದೆ ಹೆಚ್ಚಿನ ರೈತರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಈ ವಿಚಾರವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ (Siddaramaiah) ಅವರು ಗಂಭೀರವಾಗಿ ಪರಿಗಣಿಸಿದ್ದು, ರೈತರಿಗೆ ತೊಂದರೆ ನೀಡುವ ಲೇವಾದೇವಿಗಾರರ ವಿರುದ್ಧ ಕ್ರಮಕೈಗೊಳ್ಳುವಂತೆ ಜಿಲ್ಲಾ ಪಂಚಾಯಿತಿ ಅಧಿಕಾರಿಗಳು ಮತ್ತು ಸಿಇಒಗಳಿಗೆ ಸೂಚಿಸಿದ್ದಾರೆ. ಬರಪೀಡಿತ ತಾಲೂಕುಗಳ ಪಟ್ಟಿ ಬಿಡುಗಡೆ ಮಾಡಿದ ಬಳಿಕ ಮೃತ ರೈತರ ಕುಟುಂಬಗಳಿಗೆ ಪರಿಹಾರ ನೀಡುವಂತೆ ಸೂಚಿಸಿದ್ದಾರೆ. ಸದ್ಯದಲ್ಲೇ ಪಟ್ಟಿ ಬಿಡುಗಡೆಯಾಗುವ ನಿರೀಕ್ಷೆ ಇದೆ.

ಈವರೆಗೆ ಕೇವಲ 174 ಪ್ರಕರಣಗಳು ಮಾತ್ರ ಇತ್ಯರ್ಥಗೊಂಡಿವೆ ಎಂದ ಸಿದ್ದರಾಮಯ್ಯ, ಆತ್ಮಹತ್ಯೆ ಮಾಡಿಕೊಂಡ ರೈತರ ಉಳಿದ ಕುಟುಂಬಗಳಿಗೆ ಶೀಘ್ರವೇ ಪರಿಹಾರ ವಿತರಿಸಲು ಕ್ರಮಕೈಗೊಳ್ಳುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದ್ದಾರೆ.

ಏಪ್ರಿಲ್‌ನಿಂದ 251 ಆತ್ಮಹತ್ಯೆ ಪ್ರಕರಣಗಳು ವರದಿಯಾಗಿರುವುದಾಗಿ ಮುಖ್ಯಮಂತ್ರಿ ಕಚೇರಿ ಖಚಿತಪಡಿಸಿದೆ. ಮೇ ತಿಂಗಳಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ರೈತರ ಆತ್ಮಹತ್ಯೆ ಕುರಿತು ಅಧಿಕೃತ ಅಂಕಿಅಂಶ ಹೊರಬರುತ್ತಿರುವುದು ಇದೇ ಮೊದಲಾಗಿದೆ ಎಂದು ‘ದಿ ನ್ಯೂ ಇಂಡಿಯನ್ ಎಕ್ಸ್​​​ಪ್ರೆಸ್’ ವರದಿ ಮಾಡಿದೆ.

2019 ರಲ್ಲಿ ಮೈಸೂರು ವಿಶ್ವವಿದ್ಯಾನಿಲಯವು ನಡೆಸಿದ ಅಧ್ಯಯನವೊಂದರ ಪ್ರಕಾರ, 1996 ರಿಂದ ಸುಮಾರು 11,000 ರೈತರು ಆತ್ಮಹತ್ಯೆಯಿಂದಾಗಿ ಸಾವನ್ನಪ್ಪಿದ್ದಾರೆ. ಒಂದೆಡೆ ಪ್ರಕೃತಿಯ ವೈಪರೀತ್ಯಗಳು ಬೆಳೆಗಳಿಗೆ ಹಾನಿಯನ್ನುಂಟುಮಾಡಿದರೆ, ಲೇವಾದೇವಿದಾರರು ಹೇರಿದ ಹೆಚ್ಚಿನ ಬಡ್ಡಿಗೆ ರೈತರು ಬಲಿಯಾಗಿದ್ದಾರೆ ಎಂದು ವರದಿ ತಿಳಿಸಿತ್ತು.

ಇದನ್ನೂ ಓದಿ: ಡಿಕೆ ಬ್ರದರ್ಸ್ ‘ಬೃಹತ್’ ಆಪರೇಷನ್: ಸಾಮ್ರಾಟ್ ಅಶೋಕ್ ಕ್ಷೇತ್ರದಲ್ಲಿ ಮಾಜಿ ಕಾರ್ಪೊರೇಟರ್​ಗಳಿಗೆ ‘ಕೈ’ ಗಾಳ

ಕಾಮಗಾರಿ ವಿಳಂಬ ತಪ್ಪಿಸುವಂತೆ ಸೂಚಿಸಿದ ಮುಖ್ಯಮಂತ್ರಿಗಳು ತಹಶೀಲ್ದಾರ್, ಉಪವಿಭಾಗಾಧಿಕಾರಿಗಳು ಮತ್ತು ಜಿಲ್ಲಾಧಿಕಾರಿಗಳ ಕಚೇರಿಗಳಿಗೆ ಬರುವ ಅರ್ಜಿಗಳು ಹಲವು ಕಚೇರಿಗಳಲ್ಲಿ ಐದು ವರ್ಷಗಳಿಂದ ಬಾಕಿ ಉಳಿದಿವೆ. ಇಷ್ಟು ವರ್ಷಗಳ ನಂತರವೂ ಪ್ರಕರಣವನ್ನು ಇತ್ಯರ್ಥಪಡಿಸದಿದ್ದರೆ, ಅಧಿಕಾರಿಗಳು ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದರ್ಥ ಎಂದು ತರಾಟೆಗೆ ತೆಗೆದುಕೊಂಡರು. ವಿಳಂಬವಾದ ನ್ಯಾಯದಾನವು ನ್ಯಾಯದ ನಿರಾಕರಣೆಗೆ ಸಮ ಮತ್ತು ಹೆಚ್ಚು ತಡವಾದರೆ ಭ್ರಷ್ಟಾಚಾರಕ್ಕೆ ಅವಕಾಶ ಮಾಡಿಕೊಟ್ಟಂತಾಗುತ್ತದೆ ಎಂದು ಅವರು ಹೇಳಿದ್ದಾರೆ. ಅಲ್ಲದೆ, ಅತಿಯಾದ ವಿಳಂಬವೂ ಭ್ರಷ್ಟಾಚಾರ ಎಂದು ಅವರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ