ಉತ್ತರ ಕನ್ನಡದ ಖಾಕಿಗೆ ಕಾಡುತ್ತಿದೆ ಕೊರೊನಾ ಆತಂಕ; ಲಾಕ್​ಡೌನ್​ ಜಾರಿ ನಂತರ 251 ಪೊಲೀಸರಲ್ಲಿ ಸೋಂಕು ಧೃಡ

ಸೋಂಕು ಧೃಡಪಟ್ಟಿರುವ 251 ಪೊಲೀಸರಲ್ಲಿ, 188 ಪೊಲೀಸರು ಚಿಕಿತ್ಸೆ ಪಡೆದು ಈಗಾಗಲೇ ಗುಣಮುಖರಾಗಿದ್ದಾರೆ. ಇನ್ನು 63 ಪೊಲೀಸರು ಸದ್ಯ ಹೋಂ ಕ್ವಾರಂಟೈನ್​ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಅದೃಷ್ಟವಶಾತ್ ಸೋಂಕಿನಿಂದ ಪೊಲೀಸರಲ್ಲಿ ಯಾವುದೇ ಪ್ರಾಣಾಪಾಯ ಎದುರಾಗಿಲ್ಲ ಎನ್ನುವುದು ಸಮಾಧಾನದ ವಿಚಾರ.

ಉತ್ತರ ಕನ್ನಡದ ಖಾಕಿಗೆ ಕಾಡುತ್ತಿದೆ ಕೊರೊನಾ ಆತಂಕ; ಲಾಕ್​ಡೌನ್​ ಜಾರಿ ನಂತರ 251 ಪೊಲೀಸರಲ್ಲಿ ಸೋಂಕು ಧೃಡ
ಪ್ರಾತಿನಿಧಿಕ ಚಿತ್ರ
Follow us
preethi shettigar
|

Updated on:May 24, 2021 | 11:56 AM

ಉತ್ತರ ಕನ್ನಡ: ಕೊರೊನಾ ಎರಡನೇ ಅಲೆಯಲ್ಲಿ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಜತೆಗೆ ಸಾವಿನ ಸಂಖ್ಯೆಯಲ್ಲಿ ಕೂಡ ಏರಿಕೆ ಕಂಡುಬಂದಿದೆ. ಅದರಲ್ಲೂ ಈ ಬಾರಿ ಕೊರೊನಾ ಉತ್ತರ ಕನ್ನಡ ಜಿಲ್ಲೆಯಲ್ಲಿ ಅಧಿಕವಾಗಿ ಕಾಣಿಸಿಕೊಂಡಿದ್ದು, ಈ ಭಾಗದ ಜನರು ಹೈರಾಣಾಗಿದ್ದಾರೆ. ಇನ್ನು ಜಿಲ್ಲೆಯ ಪೊಲೀಸರಲ್ಲೂ ಕೊವಿಡ್ ಅಧಿಕವಾಗಿ ಕಾಡತೊಡಗಿದೆ. ಈವರೆಗೆ ಉತ್ತರ ಕನ್ನಡದಲ್ಲಿ 251 ಪೊಲೀಸರಿಗೆ ಸೋಂಕು ತಗುಲಿದ್ದು, ಅದರಲ್ಲೂ ಲಾಕ್​ಡೌನ್ ಮಾಡಿದ ನಂತರವೇ ರಸ್ತೆಗೆ ಇಳಿದು ದುಡಿಯುತ್ತಿರುವ ಪೊಲೀಸರಲ್ಲಿ ಸೋಂಕು ಹೆಚ್ಚಾಗಿ ಕಾಣಿಸಿಕೊಂಡಿದೆ.

ಸೋಂಕು ಧೃಡಪಟ್ಟಿರುವ 251 ಪೊಲೀಸರಲ್ಲಿ, 188 ಪೊಲೀಸರು ಚಿಕಿತ್ಸೆ ಪಡೆದು ಈಗಾಗಲೇ ಗುಣಮುಖರಾಗಿದ್ದಾರೆ. ಇನ್ನು 63 ಪೊಲೀಸರು ಸದ್ಯ ಹೋಂ ಕ್ವಾರಂಟೈನ್​ನಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದು, ಅದೃಷ್ಟವಶಾತ್ ಸೋಂಕಿನಿಂದ ಪೊಲೀಸರಲ್ಲಿ ಯಾವುದೇ ಪ್ರಾಣಾಪಾಯ ಎದುರಾಗಿಲ್ಲ. ಲಾಕ್​ಡೌನ್ ಆಗುವವರೆಗೆ ಜಿಲ್ಲೆಯ ಪೊಲೀಸರಲ್ಲಿ ಸೋಂಕಿನ ಪ್ರಮಾಣ ಕಡಿಮೆಯಾಗಿತ್ತು. ಲಾಕ್​ಡೌನ್ ಪ್ರಾರಂಭವಾದ ನಂತರ ಪೊಲೀಸರು 24 ಘಂಟೆಗಳ ಕಾಲ ರಸ್ತೆಯಲ್ಲಿಯೇ ಜನರ ಓಡಾಟಕ್ಕೆ ಬ್ರೇಕ್ ಹಾಕಲು ಕಾರ್ಯನಿರ್ವಹಿಸುತ್ತಿದ್ದು, ಇದು ಸೋಂಕು ಹೆಚ್ಚಾಗಲು ಕಾರಣವಾಗಿದೆ ಎಂದು ಉತ್ತರ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಶಿವಪ್ರಕಾಶ್ ದೇವರಾಜ್ ತಿಳಿಸಿದ್ದಾರೆ.

ಜಿಲ್ಲೆಯಲ್ಲಿ 1803 ಪೊಲೀಸ್ ಸಿಬ್ಬಂದಿಗಳು ಲಾಕ್​ಡೌನ್ ವೇಳೆಯಲ್ಲಿ ಜನರ ಓಡಾಟಕ್ಕೆ ತಡೆವೊಡ್ಡಲು, ಆಸ್ಪತ್ರೆ, ಮಾರುಕಟ್ಟೆ ಸೇರಿದಂತೆ ವಿವಿಧ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಇನ್ನು ಈ ಬಾರಿ ಪೊಲೀಸರಿಗೆ ಸೋಂಕು ತಗುಲಿದ್ದರು, ಪ್ರಾಣಾಪಾಯ ಆಗದೇ ಇರುವುದಕ್ಕೆ ಲಸಿಕೆಯೇ ಮುಖ್ಯ ಕಾರಣ ಎನ್ನಲಾಗಿದೆ. ಈವರೆಗೆ 1555 ಪೊಲೀಸ್ ಸಿಬ್ಬಂದಿಗಳಿಗೆ ಲಸಿಕೆಯನ್ನ ಹಾಕಿಸಲಾಗಿದ್ದು, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಕಡ್ಡಾಯವಾಗಿ ಲಸಿಕೆ ಹಾಕಿಸಲೇಬೇಕು ಎಂದು ಪ್ರತಿ ಠಾಣೆಯ ಅಧಿಕಾರಿಗಳಿಗೆ ಆದೇಶ ಮಾಡಿದ ಪರಿಣಾಮ ಎಲ್ಲರೂ ಹಾಕಿಸಿಕೊಂಡಿದ್ದರು. ಇಷ್ಟೇ ಅಲ್ಲದೇ ಪೊಲೀಸರ ಆತ್ಮಸ್ಥೈರ್ಯ ತುಂಬಲು ಪ್ರತಿ ಠಾಣೆಯಲ್ಲಿ ಹಬೆ ವ್ಯವಸ್ಥೆಯನ್ನು ಸಹ ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿಗಳು ಮಾಡಿದ ಪರಿಣಾಮ ಅನಾಹುತ ಆಗಿಲ್ಲ ಎಂದು ಮೂಲಗಳು ತಿಳಿಸಿವೆ.

ಸದ್ಯ ಪೊಲೀಸರು ಕೊರೊನಾ ಸೋಂಕಿಗೆ ಹೆಚ್ಚಾಗಿ ತುತ್ತಾಗಬಾರದು ಎಂದು ಎಸ್​ಪಿ ಶಿವಪ್ರಕಾಶ್ ದೇವರಾಜ್ ಪ್ರತಿ ಸಿಬ್ಬಂದಿಯೂ ಕಾರ್ಯನಿರ್ವಹಿಸುವ ವೇಳೆ ಕಡ್ಡಾಯವಾಗಿ ಮಾಸ್ಕ್ ಹಾಕಬೇಕು. ಸುರಕ್ಷತೆಗೆ ಹೆಚ್ಚಿನ ಒತ್ತನ್ನ ಕೊಡಬೇಕು ಎಂದು ಸೂಚಿಸಿದ್ದಾರೆ. ಒಟ್ಟಿನಲ್ಲಿ ಜನರ ಪ್ರಾಣ ಕಾಪಾಡಲು ಉತ್ತರ ಕನ್ನಡ ಜಿಲ್ಲೆಯಲ್ಲಿ ರಸ್ತೆಗಿಳಿದು ದುಡಿಯುವ ಪೊಲೀಸರಲ್ಲಿಯೇ ಹೆಚ್ಚಿನ ಸಂಖ್ಯೆಯಲ್ಲಿ ಕೊರೋನಾ ಬಂದಿದ್ದು, ಯಾರಿಗೂ ಗಂಭೀರ ಪರಿಣಾಮ ಆಗದೇ ಇರುವುದು ನಿಜಕ್ಕೂ ಸಮಾಧಾನ ಪಡುವ ವಿಚಾರವಾಗಿದೆ.

ಇದನ್ನೂ ಓದಿ:

ಪೊಲೀಸರಿಗೆ ಕಂಟಕವಾದ ಕೊರೊನಾ, ಇಂದು ಮತ್ತಷ್ಟು ವಾರಿಯರ್ಸ್​ಗೆ ಸೋಂಕು

ಚಿಕ್ಕಮಗಳೂರು: ಒಂದೇ ಗ್ರಾಮದ 31 ಜನರಿಗೆ ಕೊರೊನಾ ಪಾಸಿಟಿವ್, 48 ಪೊಲೀಸ್​ ಸಿಬ್ಬಂದಿಗೂ ಸೋಂಕು ದೃಢ

Published On - 11:55 am, Mon, 24 May 21

ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ವಿಶಾಖಪಟ್ಟಣದ ದಾರಿಯುದ್ಧಕ್ಕೂ ಮೋದಿಗೆ ಹೂವಿನ ಸುರಿಮಳೆ
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಮಹಾಕುಂಭದ ವಿಶೇಷ ಹಾಡು ಬಿಡುಗಡೆ ಮಾಡಿದ ಕೇಂದ್ರ ಸಚಿವ ಅಶ್ವಿನಿ ವೈಷ್ಣವ್
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಠಾಣೆಯ ರೂಂ ಕ್ಲೋಸ್ ಮಾಡಿ ನನ್ನ ಮೈಕೈ ಮುಟ್ಟಿ.. ಸಂತ್ರಸ್ತೆ ಕಣ್ಣೀರ ಮಾತು
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಗಾಂಧಿ ಭಾರತ ಕಾರ್ಯಕ್ರಮ; ಹಿಂದಿನ ಕೆಲಸವನ್ನೇ ನಿರ್ವಹಿಸುತ್ತಿದ್ದೇನೆ: ಸಚಿವ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಪೊಲೀಸ್ ಠಾಣೆಯ ಚಪಲಚೆನ್ನಿಗರಾಯ ರಾಮಚಂದ್ರಪ್ಪನ ಕರಾಳ ಮುಖ ಬಿಚ್ಚಿಟ್ಟ ಮಹಿಳೆ
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಸಿಎಂ ಮುಂದೆ ಶರಣಾದ ಬಳಿಕ ನಕ್ಸಲ್​ ನಾಯಕಿ ಹೇಳಿದ್ದೇನು?
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಗಾಂಧಿ ಭಾರತ ಸಮಾವೇಶ ನಿಂತ ಹಂತದಿಂದಲೇ ಪುನರಾರಂಭ: ಶಿವಕುಮಾರ್
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಕಾಡಿಗೆ ಗುಡ್​ಬೈ ಹೇಳಿ ಶರಣಾಗತಿಯಾದ ನಕ್ಸಲರಿಗೆ ಸಂವಿಧಾನ ಪುಸ್ತಕ ನೀಡಿದ CM
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಗಾಂಧಿ ಎಐಸಿಸಿ ನಾಯಕತ್ವ: ಶತಮಾನೋತ್ಸವ ಕಾರ್ಯಕ್ರಮ ಬಗ್ಗೆ ಶಿವಕುಮಾರ್ ಮಾತು
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ
ಆಂಧ್ರದ ವಿಶಾಖಪಟ್ಟಣದಲ್ಲಿ ಪ್ರಧಾನಿ ಮೋದಿ ರೋಡ್ ಶೋ