ಕೊವಿಡ್-19: ರಾಜ್ಯದಲ್ಲಿಂದು 26 ಸಾವು ಮತ್ತು 1,849 ಹೊಸ ಪ್ರಕರಣಗಳು | 26 Covid-19 related deaths and 1,849 new cases in Karnataka today

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಸಾಯಂಕಾಲ ದೊರೆತಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 26 ಜನ ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 1,849 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,604 ಜನ ಮರಣಿಸಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 8,67,780ಕ್ಕೇರಿದೆ. ರಾಜ್ಯದಲ್ಲಿ ಇದುವರೆಗೆ 8,30,988 ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ25,169 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ. ಹಾಗೆಯೇ, ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 14 ಜನ […]

ಕೊವಿಡ್-19: ರಾಜ್ಯದಲ್ಲಿಂದು 26 ಸಾವು ಮತ್ತು 1,849 ಹೊಸ ಪ್ರಕರಣಗಳು | 26 Covid-19 related deaths and 1,849 new cases in Karnataka today
ಅರುಣ್​ ಕುಮಾರ್​ ಬೆಳ್ಳಿ

Updated on: Nov 19, 2020 | 10:12 PM

ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಗುರುವಾರ ಸಾಯಂಕಾಲ ದೊರೆತಿರುವ ಮಾಹಿತಿ ಪ್ರಕಾರ, ಕಳೆದ 24 ಗಂಟೆಗಳಲ್ಲಿ ರಾಜ್ಯದಲ್ಲಿ ಕೊರೊನಾ ಸೋಂಕಿನಿಂದ 26 ಜನ ಸಾವನ್ನಪ್ಪಿದ್ದಾರೆ ಮತ್ತು ಹೊಸದಾಗಿ 1,849 ಜನರಲ್ಲಿ ಸೋಂಕು ದೃಢಪಟ್ಟಿದೆ. ರಾಜ್ಯದಲ್ಲಿ ಇದುವರೆಗೆ ಕೊರೊನಾದಿಂದ 11,604 ಜನ ಮರಣಿಸಿದ್ದಾರೆ ಮತ್ತು ಸೋಂಕಿತರ ಸಂಖ್ಯೆ 8,67,780ಕ್ಕೇರಿದೆ.

ರಾಜ್ಯದಲ್ಲಿ ಇದುವರೆಗೆ 8,30,988 ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು ಮಿಕ್ಕಿದ25,169 ಜನರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಹಾಗೆಯೇ, ಕಳೆದ 24 ಗಂಟೆಗಳಲ್ಲಿ ಬೆಂಗಳೂರಿನಲ್ಲಿ 14 ಜನ ಕೊವಿಡ್-19 ವ್ಯಾಧಿಗೆ ಬಲಿಯಾಗಿದ್ದಾರೆ ಮತ್ತು ಕಳೆದೊಂದು ದಿನದಲ್ಲಿ 1,048ರಷ್ಟು ಜನ ಸೋಂಕು ತಾಕಿಸಿಕೊಂಡಿದ್ದಾರೆ. ಬೆಂಗಳೂರಲ್ಲಿ ಕೊರೊನಾದಿಂದ ಈವರೆಗೆ 4,042 ಜನ ಸತ್ತಿದ್ದಾರೆ ಮತ್ತು ಸೋಂಕು ಪೀಡಿತರ ಸಂಖ್ಯೆ 3,60,587 ತಲುಪಿದೆ.

ನಗರದಲ್ಲಿ ಇದುವರೆಗೆ 3,38,688 ಸೋಂಕಿತರು ಗುಣಮುಖರಾಗಿದ್ದಾರೆ ಮತ್ತು ಉಳಿದ 17,856 ಸೋಂಕಿತರಿಗೆ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆಯೆಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಿಂದ ಲಭ್ಯವಾಗಿರುವ ಮಾಹಿತಿ ತಿಳಿಸುತ್ತದೆ.

Arun Belly

ಹುಟ್ಟೂರು ಯಾದಗಿರಿ ಜಿಲ್ಲೆಯ ಗುರುಮಠಕಲ್. ಓದಿದ್ದು ಬಿಎಸ್ಸಿಯಾದರೂ ಮೆಡಿಕಲ್ ರಿಪ್ರಸೆಂಟೇಟಿವ್ ಆಗಿ ಕೆಲಸ ಮಾಡಿಕೊಂಡಿದ್ದ ನನ್ನನ್ನು ಖ್ಯಾತ ಪತ್ರಕರ್ತ ದಿವಂಗತ ರವಿ ಬೆಳಗೆರೆಯವರು ಪತ್ರಿಕೋದ್ಯಮಕ್ಕೆ ಎಳೆತಂದರು. ಮೊದಲು ಅವರ ಓ ಮನಸೇ ಪಾಕ್ಷಿಕದಲ್ಲಿ ಉಪ ಸಂಪಾದಕನಾಗಿ ಕೆಲಸ ಮಾಡಿದ ಬಳಿಕ ಲಂಕೇಶ್ ಪತ್ರಿಕೆ (ಸಹಾಯಕ ಸಂಪಾದಕ), ದುನಿಯಾ (ಕಾರ್ಯನಿರ್ವಾಹಕ ಸಂಪಾದಕ) ಮತ್ತು ಕ್ರಿಕೆಟ್ ಪಾಕ್ಷಿಕ ಪತ್ರಿಕೆಯ ಸಂಪಾದಕನಾಗಿ ಕೆಲಸ ಮಾಡಿದೆ. 2012 ರಲ್ಲಿ ಟಿವಿ9 ಸಂಸ್ಥೆಯ ಇಂಗ್ಲಿಷ್ ಚ್ಯಾನೆಲ್ ನಲ್ಲಿ ಸಹಾಯಕ ಸಂಪಾದಕನಾಗಿ ಸೇರಿ 8 ವರ್ಷ ದುಡಿದ ಬಳಿಕ 2020 ರಿಂದ ಟಿವಿ9 ಕನ್ನಡ ಡಿಜಿಟಲ್ ಗೆ ಹಿರಿಯ ಉಪ ಸಂಪಾದಕನಾಗಿ (ವಿಡಿಯೋ ಸುದ್ದಿ ವಿಭಾಗ) ಕಾರ್ಯನಿರ್ವಹಿಸುತ್ತಿರುವೆ.

Follow Us