AQI
Sign In

By signing in or creating an account, you agree with Associated Broadcasting Company's Terms & Conditions and Privacy Policy.

ರಾಜ್ಯದಲ್ಲಿ 26 ಜನರಲ್ಲಿ ಹೆಚ್​3ಎನ್2 ಸೋಂಕು ಪತ್ತೆ: ಮಾಸ್ಕ್​ ಕಡ್ಡಾಯ, ಎಚ್ಚರಿಕೆ ಸೂಚನೆಗಳನ್ನು ನೀಡಿದ: ಸುಧಾಕರ್​​

ರಾಜ್ಯದಲ್ಲಿ 26 ಜನರಲ್ಲಿ ಹೆಚ್​3ಎನ್2 ಸೋಂಕು ಪತ್ತೆಯಾಗಿದೆ. ಹೆಚ್​3ಎನ್2 ಸೋಂಕಿನಿಂದ 15 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚು ಅಪಾಯವಿದೆ. 60 ವರ್ಷ ಮೆಲ್ಪಟ್ಟವರಿಗೂ ಇದು ಸುಲಭವಾಗಿ ಹರಡುತ್ತೆ. ಗರ್ಭಿಣಿಯರು ಹೆಚ್ಚು ಎಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್​ ಹೇಳಿದ್ದಾರೆ.

ವಿವೇಕ ಬಿರಾದಾರ
|

Updated on:Mar 06, 2023 | 3:14 PM

Share

ಬೆಂಗಳೂರು: ರಾಜ್ಯದಲ್ಲಿ 26 ಜನರಲ್ಲಿ ಹೆಚ್​3ಎನ್2(H3N2) ಸೋಂಕು ಪತ್ತೆಯಾಗಿದೆ. ಹೆಚ್​3ಎನ್2 ಸೋಂಕಿನಿಂದ 15 ವರ್ಷದ ಒಳಗಿನ ಮಕ್ಕಳಿಗೆ ಹೆಚ್ಚು ಅಪಾಯವಿದೆ. 60 ವರ್ಷ ಮೆಲ್ಪಟ್ಟವರಿಗೂ ಇದು ಸುಲಭವಾಗಿ ಹರಡುತ್ತೆ. ಗರ್ಭಿಣಿಯರು ಹೆಚ್ಚು ಎಚ್ಚರಿಕೆ ವಹಿಸಬೇಕು. ರಾಜ್ಯದ ಜನರು ಹೆಚ್ಚು ಜಾಗೃತವಾಗಿರಬೇಕು. ಸೀನುವಾಗ ಕೆಮ್ಮುವಾಗ ಮುನ್ನೇಚ್ಚರಿಕೆ ವಹಿಸಬೇಕು ಎಂದು ಆರೋಗ್ಯ ಸಚಿವ ಡಾ. ಕೆ ಸುಧಾಕರ್(K. Sudhakar)​ ಹೇಳಿದ್ದಾರೆ.

ರಾಜ್ಯದಲ್ಲಿ ಹೆಚ್​3ಎನ್2 ಆತಂಕ ಹಿನ್ನೆಲೆ ಆರೋಗ್ಯ ಸಚಿವ ಡಾ. ಕೆ ಸುಧಾಕರ್ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಹೆಚ್​3ಎನ್2 ಸೋಂಕು ನಿಯಂತ್ರಣ ಹಾಗೂ ಮುನ್ನೇಚ್ಚರಿಕೆ ಕ್ರಮಗಳ ಕುರಿತು ತಜ್ಞರು, ಆರೋಗ್ಯ ಇಲಾಖೆ ಅಧಿಕಾರಿಗಳು ಮತ್ತು ತಾಂತ್ರಿಕ ಸಲಹಾ ಸಭೆ ನಡೆಯಿತು. ಸಭೆ ಬಳಿಕ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಅವರು ರಾಜ್ಯದಲ್ಲಿ ಒಟ್ಟು 60 ಅಡೆನಾಯ್ಡ್ ವೈರಸ್ ಪತ್ತೆಯಾಗಿದೆ ಎಂದು ಹೇಳಿದರು.

ಕಳೆದ 6 ತಿಂಗಳಿನಿಂದ ಆರೋಗ್ಯ ಸಿಬ್ಬಂದಿಗಳು ಮಾಸ್ಕ್ ಧರಿಸುತ್ತಿಲ್ಲ. ಹೀಗಾಗಿ ಇವತ್ತಿನಿಂದಲೇ ರಾಜ್ಯದ ಆರೋಗ್ಯ ಇಲಾಖೆ ಹಾಗೂ ಆಸ್ಪತ್ರೆಗಳಲ್ಲಿ ಕೆಲಸ ಮಾಡುವ ಸಿಬ್ಬಂದಿ ಮಾಸ್ಕ್ ಹಾಕಿಕೊಳ್ಳಬೇಕು. ಬೆಂಗಳೂರಿನಲ್ಲಿ ಹೆಚ್​3ಎನ್2 ಎರಡು ​ಪ್ರಕರಣಗಳು ಪತ್ತೆಯಾಗಿವೆ. ಜನವರಿ ಯಿಂದ ಮಾರ್ಚ್​ವರೆಗೆ 20 H1N1 ಪ್ರಕರಣಗಳು ಪತ್ತೆಯಾಗಿವೆ. ಅಡಿನಾಯ್ಡ್ ವೈರಸ್ ಕೊಂಚ ಜಾಸ್ತಿ ಆಗಿದೆ. ಜನ ಗಾಬರಿ ಪಡಬೇಕಾದ ಅವಶ್ಯಕತೆ ಇಲ್ಲ. ಎಲ್ಲ ಮುನ್ನೆಚ್ಚರಿಕೆ ವಹಿಸಲಾಗಿದೆ. ರಾಜ್ಯದಲ್ಲಿ ಔಷಧಿಯ ಕೊರತೆ ಇಲ್ಲ. ಬೇಸಿಗೆಯಲ್ಲಿ ತಾಪಮಾನ ಹೆಚ್ಚಾಗಿರುತ್ತೆ. ಹೀಗಾಗಿ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದು ತಿಳಿಸಿದ್ದಾರೆ.

ಜನರು ವೈಯಕ್ತಿಕವಾಗಿ ಚಿಕಿತ್ಸೆ ತೆಗೆದುಕೊಳ್ಳುವುದು ಸೂಕ್ತವಲ್ಲ. ಅತಿಯಾಗಿ ರೋಗನಿರೋಧಕ ಔಷಧಿಗಳನ್ನು ತೆಗೆದುಕೊಳ್ಳುವುದು ಸೂಕ್ತವಲ್ಲ. ಬೇಸಿಗೆಗೆ ನಾವು ಕಾಲಿಟ್ಟಿದ್ದೇವೆ. ಬಿಸಿಗಾಳಿ ಇದ್ದು, ಬಿಸಿಲಿನಲ್ಲಿ ಅನಗತ್ಯವಾಗಿ ಓಡಾಟ ಮಾಡುವುದು ಜನರು ನಿಲ್ಲಿಸಬೇಕು. ಬೆಳಿಗ್ಗೆ 11 ರಿಂದ ಮಧ್ಯಾಹ್ನ 3 ಗಂಟೆ ವರೆಗೆ ಬಿಸಿಲಿಗೆ ಹೋಗೋದು ಕಡಿಮೆ ಮಾಡಬೇಕು. ಇಲ್ಲದಿದ್ದರೇ ಸಾಂಕ್ರಾಮಿಕ ರೋಗ ಹರಡುವ ಸಾಧ್ಯತೆ ಇದೆ ಎಂದು ಸೂಚನೆ ನೀಡಿದರು.

ಈ ಸಂಬಂಧ ಆರೋಗ್ಯ ಇಲಾಖೆ ಇಂದು ಪ್ರತ್ಯೇಕ ಮಾರ್ಗಸೂಚಿ ನೀಡುತ್ತೆ. ಹೆಚ್​3ಎನ್2 ಕೂಡಾ ಕೊವಿಡ್ ಟೆಸ್ಟ್ ರೀತಿಯಲ್ಲಿಯೇ ಮಾಡಲಾಗುವುದು. ಸ್ವ್ಯಾಬ್​ ಟೆಸ್ಟ್ ಮೂಲಕ ಹೆಚ್​3ಎನ್2 ವೈರಸ್ ಪತ್ತೆ ಹಚ್ಚಬಹುದು. ಎಚ್3ಎನ್2 ಸೋಂಕು ಪತ್ತೆಯಾದರೂ ಗುಣಮುಖರಾಗಬಹುದು ಎಂದು ತಿಳಿಸಿದರು.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

Published On - 12:39 pm, Mon, 6 March 23

ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಮೃತ ಮತದಾರರ ಜತ ಟೀ ಕುಡಿಯುವಂತೆ ಮಾಡಿದ ಆಯೋಗಕ್ಕೆ ಧನ್ಯವಾದ:ರಾಹುಲ್​
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಶಿವಕುಮಾರ್ ಸಿಎಂ ಆಗ್ತಾರಾ ಅಂತ ಕೇಳಿದರೆ ಇಕ್ಬಾಲ್ ಹುಸ್ಸೇನ್ ಮುಗುಳ್ನಕ್ಕರು
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಸಿಎಂ ಕುರ್ಚಿಗೆ ಸಿದ್ದರಾಮಯ್ಯ ಯಾಕೆ ಜೋತು ಬಿದ್ದಿದ್ದಾರೋ? ಇಬ್ರಾಹಿಂ
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಲಿವಿಂಗ್​ಸ್ಟೋನ್ ಅಬ್ಬರಕ್ಕೆ ಸ್ಟನ್ ಆದ ರಶೀದ್ ಖಾನ್
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಯಶ್ ಬಗ್ಗೆ ಬಾಲಿವುಡ್ ನಿರ್ಮಾಪಕ ಹೇಳಿದ್ದೇನು: ಕೆ ಮಂಜು ಹೇಳಿದ್ದಾರೆ ನೋಡಿ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಭ್ರಷ್ಟಾಚಾರದ ಪಿತಾಮಹ ನಾನಾ ನೀನಾ ಅಂತ ಕೂಗಾಟ, ಸ್ಪೀಕರ್ ಪ್ರೇಕ್ಷಕ
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
ಮುಸ್ಲಿಂರನ್ನ ಓಲೈಸಿಕೊಳ್ಳಲು ಜಮೀರ್ ಬಳ್ಳಾರಿ ಉಸ್ತುವಾರಿ ಸಚಿವ: ಶ್ರೀರಾಮುಲು
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
2800 ನಾಯಿಗಳನ್ನ ವಿಷ ಹಾಕಿ ಸಾಯಿಸಿದ್ದೆ: ಉದಾಹರಣೆ ಕೊಟ್ಟ ಭೋಜೇಗೌಡ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ವ್ಯಸನಿಯ ಹುಚ್ಚಾಟದ ಬಗ್ಗೆ ದೂರು ಸಲ್ಲಿಸಿದರೂ ಶಿವಮೊಗ್ಗ ಪೊಲೀಸರು ನಿಷ್ಕ್ರಿಯ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ
ಎಸ್​ಐಟಿ ರಚನೆಯಾಗರುವುದರಿಂದ ಸತ್ಯ ಹೇಳಲು ಭಯವಿಲ್ಲ: ಸಾಕ್ಷಿದಾರ