ಕೊರೊನಾ ಎರಡನೇ ಅಲೆಗೆ 269 ವೈದ್ಯರು ಬಲಿ, ಬಿಹಾರದಲ್ಲೇ ಅತಿ ಹೆಚ್ಚು

ಭಾರತದಲ್ಲಿ ಅತಿ ಹೆಚ್ಚು ವೈದ್ಯರು ಮೃತಪಟ್ಟಿರುವ ರಾಜ್ಯವಾಗಿ ಬಿಹಾರವನ್ನು ಗುರುತಿಸಲಾಗಿದ್ದು ಬಿಹಾರದಲ್ಲಿ 78 ವೈದ್ಯರು ಕೊರೊನಾದ ಎರಡನೆ ಅಲೆಗೆ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ ಉತ್ತರ ಪ್ರದೇಶದಲ್ಲಿ 37 ವೈದ್ಯರು ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 28 ವೈದ್ಯರು ಮೃತಪಟ್ಟಿದ್ದು ದೆಹಲಿ ಮೂರನೇ ಸ್ಥಾನದಲ್ಲಿದೆ.

ಕೊರೊನಾ ಎರಡನೇ ಅಲೆಗೆ 269 ವೈದ್ಯರು ಬಲಿ, ಬಿಹಾರದಲ್ಲೇ ಅತಿ ಹೆಚ್ಚು
ಪ್ರಾತಿನಿಧಿಕ ಚಿತ್ರ
Follow us
ಆಯೇಷಾ ಬಾನು
|

Updated on:May 18, 2021 | 2:33 PM

ಕೊರೊನಾ ಎರಡನೇ ಅಲೆಯಲ್ಲಿ ಸುಮಾರು 269 ವೈದ್ಯರು ಪ್ರಾಣ ಕಳೆದುಕೊಂಡಿದ್ದಾರೆ. ಬಿಹಾರದಲ್ಲಿ 78 ವೈದ್ಯರು ಸೇರಿ ಒಟ್ಟು 269 ವೈದ್ಯರು ಕೊರೊನಾಗೆ ಬಲಿಯಾಗಿದ್ದಾರೆ ಎಂದು ರಾಜ್ಯವಾರು ವಿಘಟನೆಯನ್ನು ವೈದ್ಯರ ರಾಷ್ಟ್ರೀಯ ಸ್ವಯಂಸೇವಾ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಬಿಡುಗಡೆ ಮಾಡಿದೆ.

ಭಾರತದಲ್ಲಿ ಅತಿ ಹೆಚ್ಚು ವೈದ್ಯರು ಮೃತಪಟ್ಟಿರುವ ರಾಜ್ಯವಾಗಿ ಬಿಹಾರವನ್ನು ಗುರುತಿಸಲಾಗಿದ್ದು ಬಿಹಾರದಲ್ಲಿ 78 ವೈದ್ಯರು ಕೊರೊನಾದ ಎರಡನೆ ಅಲೆಗೆ ಪ್ರಾಣ ಕಳೆದುಕೊಂಡಿದ್ದಾರೆ. ಹಾಗೂ ಉತ್ತರ ಪ್ರದೇಶದಲ್ಲಿ 37 ವೈದ್ಯರು ಸಾವನ್ನಪ್ಪಿದ್ದಾರೆ. ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ 28 ವೈದ್ಯರು ಮೃತಪಟ್ಟಿದ್ದು ದೆಹಲಿ ಮೂರನೇ ಸ್ಥಾನದಲ್ಲಿದೆ. ಆಂಧ್ರಪ್ರದೇಶ ಮತ್ತು ತೆಲಂಗಾಣ ಕ್ರಮವಾಗಿ 22 ಮತ್ತು 19 ವೈದ್ಯರನ್ನು ಕಳೆದುಕೊಂಡಿದೆ. ಮಹಾರಾಷ್ಟ್ರ, ತಮಿಳುನಾಡು, ಒಡಿಶಾ ಮತ್ತು ಪಶ್ಚಿಮ ಬಂಗಾಳ ಇತರ ರಾಜ್ಯಗಳಲ್ಲಿ ಎರಡಂಕಿಯ ಸಂಖ್ಯೆಯಲ್ಲಿ ವೈದ್ಯರು ಮೃತಪಟ್ಟಿದ್ದಾರೆ. ಗೋವಾ ಮತ್ತು ಪುದುಚೇರಿ ತಲಾ ಒಂದು ಸಾವು, ಹರಿಯಾಣ, ಕೇರಳ, ತ್ರಿಪುರ ಮತ್ತು ಉತ್ತರಾಖಂಡ ತಲಾ ಎರಡು ಸಾವುಗಳು ಸಂಭವಿಸಿರುವುದು ವರದಿಯಾಗಿದೆ.

ಫೆಬ್ರವರಿಯಲ್ಲಿ, ಕೇಂದ್ರ ಸರ್ಕಾರವು ಕೊರೊನಾ ಸೋಂಕಿನಿಂದಾಗಿ ಮೃತಪಟ್ಟ ಒಟ್ಟು ವೈದ್ಯರ ಸಾವಿನ ಪ್ರಮಾಣವನ್ನು ಕಡಿಮೆ ವರದಿ ಮಾಡಿರುವುದರ ಬಗ್ಗೆ ಐಎಂಎ ಆಘಾತ ವ್ಯಕ್ತಪಡಿಸಿತ್ತು. ಕೊರೊನಾ ಮೊದಲ ಅಲೆಯಲ್ಲಿ 162 ವೈದ್ಯರು, 107 ದಾದಿಯರು ಮತ್ತು 44 ಆಶಾ ಕಾರ್ಯಕರ್ತರು ಕೊರೊನಾಗೆ ಪ್ರಾಣ ಕಳೆದುಕೊಂಡಿದ್ದಾರೆ ಎಂದು ಆರೋಗ್ಯ ರಾಜ್ಯ ಸಚಿವೆ ಅಶ್ವಿನಿ ಕುಮಾರ್ ಚೌಬೆ ಆ ಸಮಯದಲ್ಲಿ ಘೋಷಿಸಿದ್ದರು. ಆದರೆ ಐಎಂಎ ಅಂಕಿಅಂಶಗಳು ಸಂಪೂರ್ಣವಾಗಿ ಭಿನ್ನವಾಗಿದ್ದವು. ಫೆಬ್ರವರಿ 3 ರವರೆಗೆ 744 ವೈದ್ಯರು ಕೊರೊನಾಗೆ ಬಲಿಯಾಗಿದ್ದಾರೆ ಎಂದು ಐಎಂಎ ಅಧ್ಯಕ್ಷ ಡಾ.ಜೆ.ಜಯಲಾಲ್ ಅವರು ಚೌಬೆಗೆ ಬರೆದ ಪತ್ರದಲ್ಲಿ ತಿಳಿಸಿದ್ರು.

ಏಪ್ರಿಲ್ 2021 ರಲ್ಲಿ, ಎರಡನೇ ಅಲೆ ಪ್ರಾರಂಭವಾಗುವ ಮೊದಲು, ಒಂದು ವರ್ಷದಲ್ಲಿ 756 ವೈದ್ಯರು ಸಾವನ್ನಪ್ಪಿದ್ದಾರೆ ಎಂದು ಐಎಂಎ ವರದಿ ಮಾಡಿತ್ತು. ಆದರೆ ಕೇಂದ್ರ ಸರ್ಕಾರವು ಕೇವಲ 168 ವೈದ್ಯರ ಕುಟುಂಬಗಳಿಗೆ ಮಾತ್ರ ಪರಿಹಾರವನ್ನು ನೀಡಿದೆ. ಉಳಿದ 600 ಕ್ಕೂ ಹೆಚ್ಚು ವೈದ್ಯರು ಸರ್ಕಾರದ ಭರವಸೆಯಂತೆ ಅರ್ಧದಷ್ಟು ಮೊತ್ತವನ್ನು ಸಹ ಪಡೆದಿಲ್ಲ ಎಂದು ಆರೋಪಿಸಲಾಗಿದೆ. ಹಾಗೂ ಕೊರೊನಾದಿಂದಲೇ ಸಾವು ಸಂಭವಿಸಿದೆ ಎಂಬ ಬಗ್ಗೆ ಸಾಬೀತುಪಡಿಸಲು ಕುಟುಂಬಗಳು ಹಲವಾರು ವರದಿಗಳನ್ನು ಸಲ್ಲಿಸಲು ಸರ್ಕಾರ ಒತ್ತಾಯಿಸಿದೆ.

ಇದನ್ನೂ ಓದಿ: ಕೋವಿಡ್-19 ಎರಡನೇ ಅಲೆ ಸೃಷ್ಟಿಸಿರುವ ಸ್ಥಿತಿ ಎದುರು ವೈದ್ಯರು ನಡೆಸುತ್ತಿರುವ ಹೋರಾಟ ಎಣಿಕೆಗೆ ನಿಲುಕದಂಥದ್ದು: ಪ್ರಧಾನಿ ಮೋದಿ

Published On - 2:30 pm, Tue, 18 May 21

ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಪಕ್ಷವೆಂದ ಮೇಲೆ ಒಂದಷ್ಟು ಭಿನ್ನಾಭಿಪ್ರಾಯಗಳು ಇದ್ದೇ ಇರುತ್ತವೆ: ವಿಜಯೇಂದ್ರ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಗೌತಮಿ ಸಹವಾಸ ಮಾಡಿದ ಉಗ್ರಂ ಮಂಜು ಜೈಲು ಪಾಲು; ಫಿನಾಲೆಗೂ ಮುನ್ನ ಕಳಪೆ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
ಪ್ರಕೃತಿ ಹಾಳು ಮಾಡುವುದು ವಿನಾಶ ಮೈಮೇಲೆ ಎಳೆದುಕೊಂಡಂತೆ: ವಿನಯ್ ಗುರೂಜಿ
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
‘ಗೇಮ್ ಚೇಂಜರ್’ ಸಿನಿಮಾ ಬಿಡುಗಡೆ, ಬೆಂಗಳೂರಿನಲ್ಲಿ ಸ್ವಾಗತ ಹೀಗಿತ್ತು
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಹೆದ್ದಾರಿಗಳನ್ನು ಮೇಲ್ದರ್ಜೆಗೇರಿಸಲು ಗಡ್ಕರಿಗೆ ಮನವಿ ಮಾಡಿರುವೆ: ಹೆಚ್​ಡಿಕೆ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಕೆರೆಗಳ ಸೌಂದರ್ಯೀಕರಣಕ್ಕೆ ಸಚಿವ ಸೋಮಣ್ಣ ₹ 50 ಕೋಟಿ ನೀಡಿದ್ದಾರೆ: ಶಾಸಕ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಈ ಸರ್ಕಾರದ ಹಾಗೆ ನಾನು ಸಹಿಯನ್ನು ಮಾರಾಟಕ್ಕಿಟ್ಟಿಲ್ಲ: ಕುಮಾರಸ್ವಾಮಿ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಲಾಸ್​ ಏಂಜಲೀಸ್​ನಲ್ಲಿ ಕಾಡ್ಗಿಚ್ಚು, ಸಾವಿರಾರು ಮನೆಗಳು ಸುಟ್ಟು ಭಸ್ಮ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ಪದ್ಮಾವತಿ ಮತ್ತು ವೆಂಕಟರಮಣನನ್ನು ರಥದಲ್ಲಿ ಜೊತೆಯಾಗಿ ನೋಡುವುದೇ ಹಬ್ಬ
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!
ವೈಕುಂಠ ಏಕಾದಶಿ ಶುಕ್ರವಾರದಂದು ಬಂದಿರೋದು ಮತ್ತೂ ವಿಶೇಷ!