ಕರ್ನಾಟಕದಲ್ಲಿ 2,856 ಜನರಿಗೆ ಬ್ಲ್ಯಾಕ್ ಫಂಗಸ್​ ಸೋಂಕು ದೃಢ; 191 ರೋಗಿಗಳು ಗುಣಮುಖ, 225 ಸಾವು

ಕರ್ನಾಟಕದಲ್ಲಿ ಈವರೆಗೆ 2,856 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಬ್ಲ್ಯಾಕ್ ಫಂಗಸ್‌ನಿಂದ 225 ಜನರು ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್‌ನಿಂದ ಇದುವರೆಗೆ 191 ರೋಗಿಗಳು ಗುಣಮುಖರಾಗಿದ್ದು, ಇನ್ನುಳಿದ 2,316 ರೋಗಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ.

ಕರ್ನಾಟಕದಲ್ಲಿ 2,856 ಜನರಿಗೆ ಬ್ಲ್ಯಾಕ್ ಫಂಗಸ್​ ಸೋಂಕು ದೃಢ; 191 ರೋಗಿಗಳು ಗುಣಮುಖ, 225 ಸಾವು
ಸಾಂಕೇತಿಕ ಚಿತ್ರ
Follow us
TV9 Web
| Updated By: guruganesh bhat

Updated on: Jun 18, 2021 | 5:40 PM

ಬೆಂಗಳೂರು: ಕರ್ನಾಟಕದಲ್ಲಿ ಈವರೆಗೆ 2,856 ಜನರಿಗೆ ಬ್ಲ್ಯಾಕ್ ಫಂಗಸ್ ಸೋಂಕು ಪತ್ತೆಯಾಗಿದ್ದು, ಬ್ಲ್ಯಾಕ್ ಫಂಗಸ್‌ನಿಂದ 225 ಜನರು ಸಾವನ್ನಪ್ಪಿದ್ದಾರೆ. ಬ್ಲ್ಯಾಕ್ ಫಂಗಸ್‌ನಿಂದ ಇದುವರೆಗೆ 191 ರೋಗಿಗಳು ಗುಣಮುಖರಾಗಿದ್ದು, ಇನ್ನುಳಿದ 2,316 ರೋಗಿಗಳಿಗೆ ಚಿಕಿತ್ಸೆ ಮುಂದುವರೆಸಲಾಗಿದೆ. 

ಕೊರೊನಾದಿಂದ ಗುಣಮುಖರಾಗಿದ್ದವರಲ್ಲಿ ಬ್ಲ್ಯಾಕ್ ಫಂಗಸ್ ಕಾಣಿಸಿಕೊಳ್ಳುತ್ತಿತ್ತು. ಕೊರೊನಾದಿಂದ ಗುಣಮುಖರಾಗಿ ಮತ್ತೆ ಜೀವನ ಶುರು ಮಾಡುವಷ್ಟರಲ್ಲಿ ಬ್ಲ್ಯಾಕ್ ಫಂಗಸ್ ಸಮಸ್ಯೆ ತಲೆದೋರುತ್ತಿತ್ತು. ಆದರೆ ಈಗ ಕೊರೊನಾ ಸೋಂಕಿತರಲ್ಲಿ ಬ್ಲ್ಯಾಕ್ ಫಂಗಸ್ ಕಡಿಮೆಯಾಗಿದೆ. ಹಾಗೂ ಕೊವಿಡ್‌ನಿಂದ ಗುಣಮುಖರಾದವರಲ್ಲಿ ಹೆಚ್ಚಳವಾಗುತ್ತಿದೆ.

ಕೊವಿಡ್ ಇಲ್ಲದೆ ಇದ್ದಾಗ ಶೇ 50 ರಷ್ಟು ಮರಣ ಪ್ರಮಾಣ ಇತ್ತು. ಕೊವಿಡ್ ಜೊತೆಗೆ ಬ್ಲ್ಯಾಕ್ ಫಂಗಸ್ ತಗುಲಿದರೆ ಶೇ 80 ರಷ್ಟು ಮರಣ ಪ್ರಮಾಣವಿದೆ. ಕೊವಿಡ್ ನಿಂದ ಬ್ಲ್ಯಾಕ್ ಫಂಗಸ್ ಬಂದ್ರೆ ಸಾವು ಜಾಸ್ತಿಯಾಗುತ್ತಿದೆ. ಸದ್ಯ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್​ ಚಿಕಿತ್ಸೆಗೆ ನೀಡುವ ಔಷಧ ದೊರೆಯುತ್ತಿದೆ.

ಬ್ಲ್ಯಾಕ್ ಫಂಗಸ್ ಔಷಧಗಳಿಗೆ ತೆರಿಗೆ ವಿನಾಯಿತಿ ಕೊರೊನಾ ವಿರುದ್ಧ ಹೋರಾಡಲು ಬಳಕೆಯಾಗುವ ಕೆಲವು ಔಷಧಗಳು, ಆಸ್ಪತ್ರೆ ಮತ್ತು ವೈದ್ಯಕೀಯ ಉಪಕರಣಗಳ ಮೇಲೆ ತೆರಿಗೆ ಪ್ರಮಾಣವನ್ನು ಇಳಿಕೆ ಮಾಡಲಾಗಿದೆ. ಸರಕು ಮತ್ತು ಸೇವಾ ತೆರಿಗೆ ಮಂಡಳಿ (ಜಿಎಸ್​ಟಿ ಕೌನ್ಸಿಲ್) ಜೂನ್ 12 ನಡೆಸಿದ ಸಭೆಯಲ್ಲಿ ಈ ತೀರ್ಮಾನ ಕೈಗೊಳ್ಳಲಾಗಿದೆ. ಈ ತೆರಿಗೆ ವಿನಾಯಿತಿಯನ್ನು ಕೆಲವು ಮಂತ್ರಿಗಳ ಸಲಹೆ, ಶಿಫಾರಸಿನಂತೆ ಕೈಗೊಳ್ಳಲಾಗಿದೆ ಎಮದು ಜಿಎಸ್​ಟಿ ಮಂಡಳಿ ತಿಳಿಸಿದೆ.

ಟೋಸಿಲಿಜುಮಾಬ್, ಅಂಫೋಟೆರಿಸಿನ್ ಬಿ ಇಂಜೆಕ್ಷನ್ ಮೇಲಿನ ಜಿಎಸ್‌ಟಿಯನ್ನು ಶೂನ್ಯಕ್ಕೆ ಇಳಿಕೆ ಮಾಡಲಾಗಿದೆ. ರೆಮಿಡಿಸಿವರ್ ಇಂಜೆಕ್ಷನ್ ಮೇಲಿನ ಜಿಎಸ್‌ಟಿ ಶೇ.5 ಕ್ಕೆ ಇಳಿಕೆ ಮಾಡಲಾಗಿದೆ. ಅಲ್ಲದೆ, ಅಂಬ್ಯುಲೆನ್ಸ್ ಮೇಲಿನ ಜಿಎಸ್‌ಟಿ ದರ ಕೂಡ ಇಳಿಕೆಯಾಗಿದೆ.

ಬ್ಲ್ಯಾಕ್ ಫಂಗಸ್​ಗೆ​ ಸಂಬಂಧಿಸಿದ ಔಷಧಗಳಿಗೆ ತೆರಿಗೆ ವಿನಾಯಿತಿ ನೀಡಲಾಗಿದೆ. ಕೊವಿಡ್​ಗೆ ಸಂಬಂಧಿಸಿದ 3 ವಸ್ತುಗಳಿಗೆ ಜಿಎಸ್​ಟಿ ಇಲ್ಲ ಎಂದು ದೆಹಲಿಯಲ್ಲಿ ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್ ಹೇಳಿಕೆ ನೀಡಿದ್ದಾರೆ. ವಿತ್ತ ಸಚಿವಾಲಯದಲ್ಲಿ ಜಿಎಸ್​ಟಿ ಮಂಡಳಿ ಸಭೆ ನಡೆದ ನಂತರ ಅವರು ಮಾತನಾಡಿದ್ದಾರೆ.

ಇದನ್ನೂ ಓದಿ: ಕೊವಿಡ್ ಮಾರ್ಗಸೂಚಿ ಉಲ್ಲಂಘಿಸಿ ನಂಜನಗೂಡಿನಲ್ಲಿ ಪೂಜೆ: ವಿಜಯೇಂದ್ರ ನಡೆಯ ಬಗ್ಗೆ ಹೈಕೋರ್ಟ್​ ಸಿಟ್ಟು

ಭಾರತದಲ್ಲಿನ ಕೊವಿಡ್ ಏರಿಕೆ ನಿಯಂತ್ರಿಸಲು ತುರ್ತು ಕ್ರಮ ಅಗತ್ಯ: ದಿ ಲ್ಯಾನ್ಸೆಟ್ ವರದಿಯಲ್ಲಿ 21 ತಜ್ಞರ ಅಭಿಪ್ರಾಯ

(2856 black fungus cases in Karnataka till today, 225 death 191 healed in state)

ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ನಟಿ ತಾರಾಗೆ ಗೌರವ ಡಾಕ್ಟರೇಟ್​: ಉತ್ತರ ಕರ್ನಾಟಕದ ನಂಟಿನ ಬಗ್ಗೆ ವಿಶೇಷ ಮಾತು
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಒಂದು ರಾಷ್ಟ್ರ ಒಂದು ಚುನಾವಣೆ ಮಸೂದೆ ಹಿಂದೆ ಹುನ್ನಾರ ಅಡಗಿದೆ: ಶಿವಕುಮಾರ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಜೊತೆಗೆ ಇದ್ದವರಿಂದಲೇ ಧನರಾಜ್​ಗೆ ಬಂತು ಇಂಥ ಸ್ಥಿತಿ; ಫಿನಾಲೆ ಟಿಕೆಟ್ ಮಿಸ್
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ಹಕ್ಕಿಯ ಪ್ರಾಣ ತೆಗೆದ ಬ್ಯಾಟರ್ ಬಾರಿಸಿದ ಚೆಂಡು; ವಿಡಿಯೋ
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ರೆಡ್​ಹ್ಯಾಂಡಾಗಿ ಸಿಕ್ಕಿಬಿದ್ದರೂ ಅಧಿಕಾರಿಗಳು ಅಮಾಯಕರೇ?
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ವಿಜಯ್ ಹಜಾರೆ ಟ್ರೋಫಿ: ಒಂದೇ ಓವರ್​ನಲ್ಲಿ ಸತತ 7 ಬೌಂಡರಿ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಕೇಂದ್ರದಲ್ಲಿ ಮಂತ್ರಿಯಾಗಿರುವ ಕುಮಾರಸ್ವಾಮಿ ಘನತೆ ಉಳಿಸಿಕೊಳ್ಳಲಿ: ಶಾಸಕ
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಮಂಜು ಅನ್ನು ನೀರಲ್ಲಿ ಮುಳುಗಿಸಿದರೇ ಗೌತಮಿ, ಗೆದ್ದಿದ್ದು ಯಾರು?
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಹಣೇಲಿ ಬರೆದಿದ್ರೆ ಶಿವಕುಮಾರ್ ಮುಖ್ಯಮಂತ್ರಿ ಆಗೇ ಆಗುತ್ತಾರೆ: ಸೋಮಶೇಖರ್
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ
ಕರ್ನಾಟಕದ ಭಕ್ತರು ಯಾರೂ ಮೃತಪಟ್ಟಿಲ್ಲ ಎಂದ ಸಚಿವ ರಾಮಲಿಂಗಾರೆಡ್ಡಿ