ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು

ಇರಾನ್-ಇಸ್ರೇಲ್ ಸಂಘರ್ಷದ ಪರಿಣಾಮ ದುಬೈಯಲ್ಲಿ ಸಿಲುಕಿರುವ ಮತ್ತು ಆತಂಕಕ್ಕೊಳಗಾಗಿರುವವರನ್ನು ತಾಯ್ನಾಡಿಗೆ ಕರೆತರುವ ಪ್ರಕ್ರಿಯೆ ಮುಂದುವರಿದಿದೆ. ಸದ್ಯ, ಮಾರ್ಚ್ 8ರ ಭಾನುವಾರ ರಾತ್ರಿ 288 ಪ್ರಯಾಣಿಕರು ಬೆಂಗಳೂರಿಗೆ ಬಂದಿದ್ದಾರೆ. ಕಳೆದ ವಾರದಿಂದಲೂ ಭಾರತೀಯರನ್ನು ವಾಪಸ್ ಕರೆತರುವ ಕಾರ್ಯಾಚರಣೆ ನಡೆಯುತ್ತಿದ್ದು, ಸಾವಿರಾರು ಮಂದಿ ಈಗಾಗಲೇ ಗಲ್ಫ್ ದೇಶಗಳಿಂದ ವಾಪಸಾಗಿದ್ದಾರೆ.

ದುಬೈನಲ್ಲಿ ಸಿಲುಕಿದ್ದ ಮತ್ತಷ್ಟು ಕನ್ನಡಿಗರು ತಾಯ್ನಾಡಿಗೆ ವಾಪಸ್: ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು
ಬೆಂಗಳೂರಿಗೆ ಬಂದಿಳಿದ 288 ಪ್ರಯಾಣಿಕರು
Image Credit source: tv9
Edited By:

Updated on: Mar 09, 2026 | 9:01 AM

ಬೆಂಗಳೂರು, ಮಾರ್ಚ್ 9: ಮಧ್ಯಪ್ರಾಚ್ಯದಲ್ಲಿ ದಿನೇ ದಿನೇ ಇಸ್ರೇಲ್-ಇರಾನ್ ಯುದ್ಧದ (Israel Iran War) ತೀವ್ರತೆ ಹೆಚ್ಚುತ್ತಿರುವ ಹಿನ್ನೆಲೆ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಹಂತಹಂತವಾಗಿ ತಾಯ್ನಾಡಿಗೆ ಮರಳುತ್ತಿದ್ದಾರೆ. ಮಾರ್ಚ್ 8 ರ ಭಾನುವಾರ ರಾತ್ರಿ ದುಬೈನಿಂದ ಹೊರಟ ಎಮಿರೇಟ್ಸ್ ವಿಮಾನದಲ್ಲಿ 288 ಮಂದಿ ಪ್ರಯಾಣಿಕರು ಬೆಂಗಳೂರಿನ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಸುರಕ್ಷಿತವಾಗಿ ಬಂದಿಳಿದರು. ಯುದ್ಧದ ಆತಂಕದಿಂದಾಗಿ ಹಲವು ದಿನಗಳಿಂದ ದುಬೈನಲ್ಲಿ ಸಿಲುಕಿದ್ದ ಕನ್ನಡಿಗರು ಇದೀಗ ವಿಮಾನ ಸೇವೆಗಳು ತಾತ್ಕಾಲಿಕ ಪುನರಾರಂಭವಾದ ಬೆನ್ನಲ್ಲೇ ತಾಯ್ನಾಡಿಗೆ ಮರಳುತ್ತಿದ್ದಾರೆ. ಈಗಾಗಲೇ 2 ಸಾವಿರಕ್ಕೂ ಹೆಚ್ಚು ಮಂದಿ ಸುರಕ್ಷಿತವಾಗಿ ಭಾರತಕ್ಕೆ, ವಿಶೇಷವಾಗಿ ಬೆಂಗಳೂರಿಗೆ (Bangalore) ಬಂದಿರುವ ಮಾಹಿತಿ ಲಭ್ಯವಾಗಿದೆ.

ದುಬೈನಿಂದ ಮರಳಿದ ಸುಷ್ಮಾ ಎಂಬವರು ಮಾತನಾಡಿ, ‘ದುಬೈನಲ್ಲಿ ಸಾಮಾನ್ಯವಾಗಿ ಎಲ್ಲವೂ ಸುರಕ್ಷಿತವಾಗಿಯೇ ಇತ್ತು. ಆದರೆ ಕೆಲವೊಮ್ಮೆ ಸ್ಫೋಟದ ಶಬ್ದಗಳು ಕೇಳಿಬರುತ್ತಿದ್ದರಿಂದ ಆತಂಕ ಉಂಟಾಗುತ್ತಿತ್ತು’ ಎಂದು ಅನುಭವವನ್ನು ಹಂಚಿಕೊಂಡರು.
Passengers Returned To Bengaluru Airport: ದುಬೈನಿಂದ ಮತ್ತಷ್ಟು ಮಂದಿ ವಾಪಸ್ ಸೇಫಾಗಿ ಬಂದವರ ನಿಟ್ಟುಸಿರು
ಇನ್ನೊಬ್ಬ ಪ್ರಯಾಣಿಕ ಅಹ್ಮದ್ ಖಾನ್ ಮಾತನಾಡಿ, ‘ಒಮ್ಮೆ ನಾವು ಊಟ ಮಾಡಿ ಮನೆಗೆ ಬರುತ್ತಿದ್ದಾಗ ನಮ್ಮ ಮನೆ ಹಿಂಭಾಗದಲ್ಲೇ ಡ್ರೋನ್ ದಾಳಿ ನಡೆದಿತ್ತು. ಅದರಿಂದ ತುಂಬಾ ಭಯವಾಯಿತು’ ಎಂದು ಅಲ್ಲಿನ ಪರಿಸ್ಥಿತಿಯ ಬಗ್ಗೆ ವಿವರಿಸಿದರು.

ಇದನ್ನೂ ಓದಿ: “ಸರ್ವೋಚ್ಚ ನಾಯಕ ಯಾರೇ ಆಗಲಿ ಜೀವಂತ ಬಿಡುವುದಿಲ್ಲ” : ಇರಾನ್​​​ಗೆ ಎಚ್ಚರಿಕೆ ನೀಡಿದ ಇಸ್ರೇಲ್

ಒಟ್ಟಾರೆ ದುಬೈನಲ್ಲಿ ದೊಡ್ಡ ಮಟ್ಟದ ತೊಂದರೆ ಎದುರಾಗಿಲ್ಲ ಎಂದು ಮರಳಿದವರು ಹೇಳಿದರೂ, ಮಧ್ಯಪ್ರಾಚ್ಯದಲ್ಲಿ ನಡೆಯುತ್ತಿರುವ ಯುದ್ಧ ಯಾವಾಗ ಹೇಗೆ ತಿರುವು ಪಡೆಯುತ್ತದೆ ಎನ್ನುವುದು ತಿಳಿಯದ ಹಿನ್ನೆಲೆಯಲ್ಲಿ ಅನೇಕರು ಮುಂಜಾಗ್ರತಾ ಕ್ರಮವಾಗಿ ತಾಯ್ನಾಡಿಗೆ ಮರಳುತ್ತಿರುವುದು ಕಂಡುಬರುತ್ತಿದೆ.

ಕರ್ನಾಟಕದ ಇನ್ನಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ

ನವೀನ್ ಕುಮಾರ್ ಟಿ.

ನವೀನ್ ಕುಮಾರ್ ಟಿ ರವರು ಮೂಲತಃ ಚಿಕ್ಕಬಳ್ಳಾಪುರ ಜಿಲ್ಲೆ ಚಿಂತಾಮಣಿ ನಿವಾಸಿಯಾಗಿದ್ದು ಕಳೆದ 9 ವರ್ಷಗಳಿಂದ ಹೆಮ್ಮೆಯ ಟಿವಿ9 ಕನ್ನಡದ ದೇವನಹಳ್ಳಿ, ಬೆಂಗಳೂರು ಗ್ರಾಮಾತರ ಜಿಲ್ಲಾ ವರದಿಗಾರರಾಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಎಂಎಸ್​ಸಿ ಎಲೆಕ್ಟ್ರಾನಿಕ್ ಮೀಡಿಯಾ ವ್ಯಾಸಾಂಗ ಮಾಡಿರುವ ಇವರು ಪದವಿ ಶಿಕ್ಷಣ ಮುಗಿದ ನಂತರ ಟಿವಿ9 ಕನ್ನಡದಲ್ಲಿ ವರದಿಗಾರರಾಗಿ ಉದ್ಯೋಗಕ್ಕೆ ಸೇರಿದ್ದು ಆರು ತಿಂಗಳ ಕಾಲ ಮುಖ್ಯ ಕಛೇರಿಯಲ್ಲಿ ಕೆಲಸ ಮಾಡಿದ್ದಾರೆ. ಜೊತೆಗೆ ಸಂಸ್ಥೆ ನೀಡಿದ ಮಹತ್ವದ ವರದಿಗಾರನ ಹುದ್ದೆಯನ್ನು ಕಳೆದ 9 ವರ್ಷದಿಂದ ಸಿಲಿಕಾನ್ ಸಿಟಿ ಹೊರ ವಲಯದಲ್ಲಿರುವ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ದೊಡ್ಡಬಳ್ಳಾಪುರ ಹೊಸಕೋಟೆ ಮತ್ತು ನಗರ ಜಿಲ್ಲೆಯ ಯಲಹಂಕ ಭಾಗದ ಸುದ್ದಿಗಳನ್ನ ವರದಿ ಮಾಡುತ್ತಾ ವರದಿಗಾರನಾಗಿ ಕೆಲಸ ಮಾಡುತ್ತಿದ್ದಾರೆ. ಪ್ರಮುಖವಾಗಿ ದೇಶದ ಟಾಪ್ 3 ನಲ್ಲಿ ಹೆಸರು ಪಡೆದು ಹೆಸರುವಾಸಿಯಾಗಿರುವ ಕೆಂಪೇಗೌಡ ಅಂತರಾಷ್ಟ್ರಿಯಾ ವಿಮಾನ ನಿಲ್ಥಾಣದ ಪ್ರಮುಖ ಸುದ್ದಿಗಳು ರಾಜಕೀಯ ಹಾಗೂ ಸಿಲಿಕಾನ್ ಸಿಟಿ ಹೊರ ವಲಯದಲ್ಲಿ ನಡೆಯುವ ಕ್ರೈಂ ಸೇರಿದಂತೆ ಇತರೆ ಸುದ್ದಿಗಳನ್ನ ವರದಿ ಮಾಡುತ್ತಾ ಎಕ್ಸಕ್ಲೂಸಿವ್ ವರದಿಗಳನ್ನ ನೀಡುತ್ತಿದ್ದಾರೆ.

Read More
Loading...
Unable to load recommendations.
Follow Us