ರಾಜ್ಯದಲ್ಲಿ ಇಂದು 297 ಜನರಿಗೆ ಕೊರೊನಾ ಸೋಂಕು ದೃಢ; ಬೆಂಗಳೂರಿನಲ್ಲೆಷ್ಟು ಗೊತ್ತಾ?
ರಾಜ್ಯದಲ್ಲಿ ಇಂದು 297 ಜನರಿಗೆ ಕೊರೊನಾ ಸೋಂಕು(Corona Virus) ದೃಢಪಟ್ಟಿದೆ. ಈ ಕುರಿತು ಮಾತನಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ‘ಕೊವಿಡ್ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯ ಇಲ್ಲ, ಬೇರೆ ರಾಜ್ಯಕ್ಕೆ ಹೋಲಿಸಿದ್ರೆ ಕರ್ನಾಟಕದಲ್ಲಿ ಟೆಸ್ಟಿಂಗ್ ಹೆಚ್ಚಿಸಿದ್ದೇವೆ ಎಂದರು.
ಬೆಂಗಳೂರು, ಜ.06: ರಾಜ್ಯದಲ್ಲಿ ಇಂದು 297 ಜನರಿಗೆ ಕೊರೊನಾ ಸೋಂಕು(Corona Virus) ದೃಢಪಟ್ಟಿದೆ. ಅದರಲ್ಲಿ ರಾಜ್ಯದ ರಾಜಧಾನಿ ಬೆಂಗಳೂರಿ(Bengaluru)ನಲ್ಲಿಯೇ 171 ಜನರಲ್ಲಿ ಸೋಂಕು ಕಾಣಿಸಿಕೊಂಡಿದೆ. ಈ ಮೂಲಕ ರಾಜ್ಯದಲ್ಲಿ ಕೊವಿಡ್ ಪಾಸಿಟಿವಿಟಿ ರೇಟ್ ಶೇಕಡಾ 4.3 ರಷ್ಟಿದೆ. ಇನ್ನು ರಾಜ್ಯದಲ್ಲಿ ಕೊವಿಡ್ ಆ್ಯಕ್ಟಿವ್ ಕೇಸ್ಗಳ ಸಂಖ್ಯೆ 1,136 ಇದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.
ಯಾವ್ಯಾವ ಜಿಲ್ಲೆಯಲ್ಲೆಷ್ಟು?
ಇನ್ನು ಬೆಂಗಳೂರಿನಲ್ಲಿ 171 ಜನರಿಗೆ ಕೊರೊನಾ ದೃಢವಾಗಿದ್ದರೆ, ಇನ್ನುಳಿದಂತೆ ಬಾಗಲಕೋಟೆ 5, ಬಳ್ಳಾರಿ 6, ಬೆಂಗಳೂರು ಗ್ರಾಮಾಂತರ 12, ಚಾಮರಾಜನಗರ 2, ಚಿಕ್ಕಬಳ್ಳಾಪುರ 5, ಚಿತ್ರದುರ್ಗ 5, ದಕ್ಷಿಣ ಕನ್ನಡ 6, ದಾವಣಗೆರೆ 1, ಧಾರವಾಡ 8, ಗದಗ 2, ಹಾವೇರಿ 4, ಕಲಬುರಗಿ 5, ಕೊಡಗು 1, ಕೋಲಾರ 3, ಕೊಪ್ಪಳ 8, ಮಂಡ್ಯ 6, ಮೈಸೂರು 26, ರಾಯಚೂರು 2, ರಾಮನಗರ 6, ಶಿವಮೊಗ್ಗ 4 , ತುಮಕೂರು 4, ವಿಜಯನಗರ 4, ವಿಜಯಪುರದಲ್ಲಿ 1 ಕೇಸ್ ಕಂಡುಬಂದಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ಇದನ್ನೂ ಓದಿ:ಕೋವಿಡ್ ಸೋಂಕಿತರ ಸಂಪರ್ಕಕ್ಕೆ ಬಂದವರಿಗೆ ರೋಗ ಲಕ್ಷಣ ಇದ್ದರೆ ಕೊರೊನಾ ಟೆಸ್ಟ್: ಆರೋಗ್ಯ ಇಲಾಖೆ ಹೊಸ ಮಾರ್ಗಸೂಚಿ
ಕೊವಿಡ್ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯ ಇಲ್ಲ-ದಿನೇಶ್ ಗುಂಡೂರಾವ್
ಹುಬ್ಬಳ್ಳಿ: ಕೊವಿಡ್ ಬಗ್ಗೆ ರಾಜ್ಯದ ಜನರು ಆತಂಕ ಪಡುವ ಅಗತ್ಯ ಇಲ್ಲಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ. ಹುಬ್ಬಳ್ಳಿಯಲ್ಲಿ ಮಾತನಾಡಿದ ಅವರು ‘ಬೇರೆ ರಾಜ್ಯಕ್ಕೆ ಹೋಲಿಸಿದ್ರೆ ಕರ್ನಾಟಕದಲ್ಲಿ ಟೆಸ್ಟಿಂಗ್ ಹೆಚ್ಚಿಸಿದ್ದೇವೆ. ಸಹಜವಾಗಿ ಕೊರೊನಾ ಕೇಸ್ ಸ್ವಲ್ಪ ಜಾಸ್ತಿ ಆಗಿದೆ. ರಾಜ್ಯದಲ್ಲಿ ಸುಮಾರು 7 ಸಾವಿರ ಕೊವಿಡ್ ಟೆಸ್ಟ್ ಮಾಡುತ್ತಿದ್ದೇವೆ. ಬೇರೆ ಬೇರೆ ಆರೋಗ್ಯ ಸಮಸ್ಯೆ ಇದ್ದವರು ಎಚ್ಚರದಿಂದ ಇರಬೇಕು ಎಂದರು.
ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್ ಮಾಡಿ