ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಅತಿ ಹೆಚ್ಚು ಕೊರೊನಾ ಕೇಸ್ ಪತ್ತೆ! ಎಷ್ಟು?
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಅತಿ ಹೆಚ್ಚು ಕೇಸ್ ಪತ್ತೆಯಾಗಿದ್ದು, ಹೊಸದಾಗಿ 299 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,221ಕ್ಕೆ ಏರಿಕೆಯಾಗಿದ್ದು, 299 ಸೋಂಕಿತರ ಪೈಕಿ 253 ಜನರು ಮಹಾರಾಷ್ಟ್ರದಿಂದ ಬಂದಿರುವವರಾಗಿದ್ದಾರೆ. ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ ಕೇಸ್ ಪತ್ತೆಯಾಗಿದ್ದು, ಇಂದು ಒಂದೇ ದಿನ 83 ಜನರಿಗೆ ಕೊರೊನಾ ಅಟ್ಯಾಕ್ ಆಗಿದೆ. ಯಾದಗಿರಿ 44, ಬೀದರ್ 33, ಕಲಬುರಗಿ 28, ಬೆಂಗಳೂರು 21, ವಿಜಯಪುರ 26, ಬೆಳಗಾವಿ 13, […]
ಬೆಂಗಳೂರು: ರಾಜ್ಯದಲ್ಲಿ ಇದೇ ಮೊದಲ ಬಾರಿಗೆ ಒಂದೇ ದಿನ ಅತಿ ಹೆಚ್ಚು ಕೇಸ್ ಪತ್ತೆಯಾಗಿದ್ದು, ಹೊಸದಾಗಿ 299 ಜನರಿಗೆ ಕೊರೊನಾ ಸೋಂಕು ತಗುಲಿದೆ. ಕರ್ನಾಟಕದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 3,221ಕ್ಕೆ ಏರಿಕೆಯಾಗಿದ್ದು, 299 ಸೋಂಕಿತರ ಪೈಕಿ 253 ಜನರು ಮಹಾರಾಷ್ಟ್ರದಿಂದ ಬಂದಿರುವವರಾಗಿದ್ದಾರೆ.
ರಾಯಚೂರು ಜಿಲ್ಲೆಯಲ್ಲಿ ಅತ್ಯಧಿಕ ಕೇಸ್ ಪತ್ತೆಯಾಗಿದ್ದು, ಇಂದು ಒಂದೇ ದಿನ 83 ಜನರಿಗೆ ಕೊರೊನಾ ಅಟ್ಯಾಕ್ ಆಗಿದೆ. ಯಾದಗಿರಿ 44, ಬೀದರ್ 33, ಕಲಬುರಗಿ 28, ಬೆಂಗಳೂರು 21, ವಿಜಯಪುರ 26, ಬೆಳಗಾವಿ 13, ಮಂಡ್ಯ 13, ದಕ್ಷಿಣ ಕನ್ನಡ 14, ಉಡುಪಿ 10, ದಾವಣಗೆರೆ 6, ಉತ್ತರ ಕನ್ನಡ 5, ಬಳ್ಳಾರಿ, ಶಿವಮೊಗ್ಗ, ಕೋಲಾರ ಜಿಲ್ಲೆಯಲ್ಲಿ ತಲಾ 1 ಕೇಸ್ ಪತ್ತೆಯಾಗಿದೆ.
3,221 ಸೋಂಕಿತರ ಪೈಕಿ ಇದುವರೆಗೆ ರಾಜ್ಯದಲ್ಲಿ ಒಟ್ಟು 51 ಜನರ ಸಾವಿಗೀಡಾಗಿದ್ದಾರೆ. ಈವರೆಗೆ 1,218 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. 1,950 ಸೋಂಕಿತರಿಗೆ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಮಾಹಿತಿ ನೀಡಿದೆ.