ಮತ್ತೆ ಮುನ್ನಲೆಗೆ ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು: ಸಿಎಂ ಜೊತೆ ಸಮುದಾಯದ ಮುಖಂಡರ ಸಭೆ

ಜಾತಿ ಗಣತಿ ಜಂಜಾಟಕ್ಕೆ‌ ಇನ್ನೂ ಪೂರ್ಣ ವಿರಾಮ ಬಿದ್ದಿಲ್ಲ. ಇದಕ್ಕೆ ಸಂಬಂಧಿಸಿದಂತೆ ಈಗಾಗಲೇ ವಾದ ವಿವಾದ ನಡೆಯುತ್ತಿರುವ ಹೊತ್ತಲ್ಲೇ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕರ‌ ನೇತೃತ್ವದಲ್ಲಿ‌ ನಡೆಯಲಿರುವ ಸಭೆ ಕುತೂಹಲ ಕರೆಳಿಸಿದೆ. ಇದರ ಮಧ್ಯ ಮೀಸಲಾತಿ ಮಹಾ ಸಮರ ಮತ್ತೆ ಮುನ್ನಲೆಗೆ ಬಂದಿದೆ. ಈ ಸಂಬಂಧದ ಬೆಳವಣಿಗೆಗಳ ವಿವರ ಇಲ್ಲಿದೆ.

ಮತ್ತೆ ಮುನ್ನಲೆಗೆ ಪಂಚಮಸಾಲಿ 2ಎ ಮೀಸಲಾತಿ ಕಿಚ್ಚು: ಸಿಎಂ ಜೊತೆ ಸಮುದಾಯದ ಮುಖಂಡರ ಸಭೆ
ಸಿಎಂ ಸಿದ್ದರಾಮಯ್ಯ & ಡಿಸಿಎಂ ಡಿಕೆ ಶಿವಕುಮಾರ್
Follow us
| Updated By: ಗಣಪತಿ ಶರ್ಮ

Updated on: Oct 18, 2024 | 6:53 AM

ಬೆಂಗಳೂರು, ಅಕ್ಟೋಬರ್ 18: ಪಂಚಮಸಾಲಿ ಸಮುದಾಯದ ಮೀಸಲಾತಿ ಕುರಿತು ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಲಿದೆ. ಬೆಳಗ್ಗೆ 11 ಗಂಟೆಗೆ ಗೃಹಕಚೇರಿ ಕೃಷ್ಣಾದಲ್ಲಿ ಸಭೆ ನಡೆಯಲಿದ್ದು, ಡಿಸಿಎಂ ಡಿಕೆ ಶಿವಕುಮಾರ್, ಕೂಡಲ ಸಂಗಮ ಪೀಠಾಧ್ಯಕ್ಷ ಜಯ ಮೃತ್ಯುಂಜಯ ಸ್ವಾಮೀಜಿ ಮತ್ತು ಮುಖಂಡರು ಭಾಗಿಯಾಗಲಿದ್ದಾರೆ. ಇದಕ್ಕೂ ಮುನ್ನ ಜಯಮೃತ್ಯುಂಜಯ ಸ್ವಾಮೀಜಿ, ಶಿವಾನಂದ್ ಸರ್ಕಲ್​ನಿಂದ ಗೃಹ ಕಚೇರಿ ಕೃಷ್ಣಾವರೆಗೂ ಕಾಲ್ನಡಿಗೆ ಮಾಡುವ ಸಾಧ್ಯತೆ ಇದೆ.

ಅ. 22ರಂದು ಅಖಿಲ ಭಾರತ ವೀರಶೈವ ಮಹಾಸಭಾ ಸಭೆ

ಸಿಎಂ ನೇತೃತ್ವದಲ್ಲಿ ಸಭೆ ಒಂದೆಡೆಯಾದರೆ, ಅತ್ತ ಅಖಿಲ ಭಾರತ ವೀರಶೈವ ಮಹಾಸಭಾ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಬಿಜೆಪಿ ನಾಯಕರನ್ನು ಭೇಟಿಯಾಗಿದ್ದಾರೆ. ಇದೇ ಅಕ್ಟೋಬರ್ 22 ರಂದು ಬೆಂಗಳೂರಲ್ಲಿ ಜಾತಿ ಗಣತಿ ವರದಿಯ ಸಾಧಕ-ಬಾಧಕ ಕುರಿತು ಚರ್ಚಿಸಲು ಸಭೆ ಆಯೋಸಜಿಲಾಗಿದೆ. ಈ ಸಭೆಗೆ ಬರುವಂತೆ ಮಾಜಿ ಸಿಎಂಗಳಾದ ಬಿಎಸ್ ಯಡಿಯೂರಪ್ಪ ಹಾಗೂ ಬಸವರಾಜ ಬೊಮ್ಮಾಯಿ ಅವರನ್ನು ಆಹ್ವಾನಿಸಲಾಗಿದೆ. ಇವರ ಜತೆಗೆ ಮಹಾಸಭಾದ ರಾಜ್ಯಾಧ್ಯಕ್ಷ ಶಂಕರ್ ಬಿದರಿ ನಿಯೋಗಕ್ಕೂ ಸಭೆಗೆ ಬರುವಂತೆ ಆಹ್ವಾನಿಸಿದ್ದಾರೆ.

ಜಾತಿ ಗಣತಿ ಕುರಿತು ಸರ್ಕಾರದೊಳಗೆ ಅಪಸ್ವರ ಕೇಳಿ ಬಂದಿತ್ತು. ಆದರೆ, ಇನ್ನೊಂದು ಬಣ ಜಾತಿ ಗಣತಿ ಜಾರಿ ಮಾಡುವಂತೆ ಪಟ್ಟು ಹಿಡಿದಿದೆ. ಇದರ ನಡುವೆ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಶಾಮನೂರು ಶಿವಶಂಕರಪ್ಪ ಕರೆದಿರುವ ಸಭೆ ಮಹತ್ವದ ಪಡೆದಿದೆ.

ಜಾತಿಗೆ ಗಣತಿಗೆ ಕಾಂಗ್ರೆಸ್​ ಪಕ್ಷದ ಒಳಗೆಯೇ ವಿರೋಧ ವ್ಯಕ್ತವಾಗಿತ್ತು. ಡಿಸಿಎಂ ಡಿಕೆ ಶಿವಕುಮಾರ್, ಶಾಮನೂರು ಶಿವಶಂಕರಪ್ಪ ಮತ್ತಿತರ ಮುಖಂಡರಿಂದ ವಿರೋಧ ವ್ಯಕ್ತವಾಗಿತ್ತು. ಸದ್ಯ ಮುಡಾ ಹಗರಣದ ಕಾವು ತೀವ್ರಗೊಂಡ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ಮತ್ತೆ ಜಾತಿ ಗಣತಿಯ ದಾಳ ಉರುಳಿಸಲು ಮುಂದಾಗಿದ್ದಾರೆ.

ಜಾತಿಗಣತಿ ವರದಿ ಜಾರಿ ಮಾಡಿಯೇ ಮಾಡುತ್ತೇನೆ ಎಂದಿದ್ದ ಸಿಎಂ

ಜಾತಿಗಣತಿ ವರದಿ ಜಾರಿ ಮಾಡಿಯೇ ಮಾಡುತ್ತೇನೆ ಎಂದು ಕೆಲವು ದಿನಗಳ ಹಿಂದಷ್ಟೇ ಸಿಎಂ ಸಿದ್ದರಾಮಯ್ಯ ಪುನರುಚ್ಚರಿಸಿದ್ದರು. ಜಾತಿಗಣತಿ ವರದಿ ನನ್ನ ಕೈ ಸೇರಿದೆ. ನಾನು ಇನ್ನೂ ಅದನ್ನು ಪರಿಪೂರ್ಣವಾಗಿ ನೋಡಿಲ್ಲ. ಮುಂದಿನ ದಿನಗಳಲ್ಲಿ ಅದನ್ನು ಸಚಿವ ಸಂಪುಟದ ಮುಂದಿಟ್ಟು ಜಾರಿ ಮಾಡಿಯೇ ಮಾಡುತ್ತೇನೆ ಎಂದು ಅವರು ಹೇಳಿದ್ದರು.

ಇದನ್ನೂ ಓದಿ: ಜಾತಿಗಣತಿ ವರದಿ ಜಾರಿ ಮಾಡೇ ಮಾಡುತ್ತೇನೆ: ಸಿದ್ದರಾಮಯ್ಯ ಘೋಷಣೆ

ಈ ಎಲ್ಲ ಬೆಳವಣಿಗೆಗಳ ಮಧ್ಯೆ ಇದೀಗ ಪಂಚಮಸಾಲಿ 2ಎ ಮೀಸಲಾತಿ ಹೋರಾಟದ ಕಿಚ್ಚು ಮುನ್ನೆಲೆಗೆ ಬರುವ ಎಲ್ಲ ಲಕ್ಷಣಗಳು ಗೋಚರಿಸುತ್ತಿವೆ.

ರಾಜ್ಯದ ಮತ್ತಷ್ಟು ಸುದ್ದಿಗಳನ್ನು ಓದಲು ಇಲ್ಲಿ ಕ್ಲಿಕ್​ ಮಾಡಿ

ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಪಂತ್ ಇಂಜುರಿ ಬಗ್ಗೆ ಬಿಗ್ ಅಪ್​ಡೇಟ್ ನೀಡಿದ ರೋಹಿತ್ ಶರ್ಮಾ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಟ್ರಾಫಿಕ್ ಪೊಲೀಸ್​ಗೆ ಕಾರಿನಲ್ಲಿ ಡಿಕ್ಕಿ ಹೊಡೆದು ಎಳೆದೊಯ್ದ ಚಾಲಕ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಎಐಸಿಸಿ ಮಹಿಳಾ ಘಟಕದ ಅಧ್ಯಕ್ಷೆ ಅಲ್ಕಾ ಲಂಬಾ ಕಾರ್ಯಕ್ರಮದಲ್ಲಿ ಭಾಗಿ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ಸುಲಭ ಕ್ಯಾಚ್ ಕೈಚೆಲ್ಲಿ ಸುಮ್ಮನೆ ನಿಂತ ರಾಹುಲ್; ರೋಹಿತ್ ಕೆಂಡಾಮಂಡಲ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ತಪ್ಪೇ ಮಾಡದವನನ್ನು ಜೈಲಿಗೆ ಕಳಿಸಿದರಲ್ಲ, ಅವರನ್ನು ಬಿಡಲ್ಲ: ನಾಗೇಂದ್ರ ಬಿ
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ಬಿಗ್​ಬಾಸ್ ಮನೆಯಲ್ಲಿ ನಾಮಿನೇಷನ್ ರಾಜಕೀಯ, ಉಗ್ರಂ ಮಂಜು ಸೂತ್ರಧಾರಿ?
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ರಾಜ್ಯ ರಾಜಕೀಯಕ್ಕೆ ಒಳಿತಾಗುವ ದೃಷ್ಟಿಯಿಂದ ಅಭ್ಯರ್ಥಿ ಆಯ್ಕೆ: ಕುಮಾರಸ್ವಾಮಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಮಳೆ ನಿಂತರೂ ನಿಲ್ಲದ ಅವಾಂತರ: ಸೋರುತ್ತಿದೆ ಬಾಗೇಪಲ್ಲಿಯ ತಹಶೀಲ್ದಾರ್ ಕಚೇರಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಧಮ್ಮಿದ್ದಿದ್ದರೆ ಸಿದ್ದರಾಮಯ್ಯ ಕೆಂಪಣ್ಣ ವರದಿ ಟೇಬಲ್ ಮಾಡುತ್ತಿದ್ದರು: ರವಿ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ
ಹಿಂದೆ 2 ವರ್ಷ ಜೈಲಲ್ಲಿದ್ದ ನಾಗೇಂದ್ರಗೆ ಈಗ ಕೇವಲ 3 ತಿಂಗಳಲ್ಲಿ ಬೇಲ್: ಶಾಸಕ