Covishield: ವಿದೇಶಗಳಿಗೆ ತೆರಳುವವರಿಗೆ 28 ದಿನಕ್ಕೆ 2ನೇ ಡೋಸ್ ಕೊವಿಡ್ ಲಸಿಕೆ; ಜುಲೈ 22ರಿಂದಲೇ ಆರಂಭ

ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕಾಗುತ್ತದೆ.

Covishield: ವಿದೇಶಗಳಿಗೆ ತೆರಳುವವರಿಗೆ 28 ದಿನಕ್ಕೆ 2ನೇ ಡೋಸ್ ಕೊವಿಡ್ ಲಸಿಕೆ; ಜುಲೈ 22ರಿಂದಲೇ ಆರಂಭ
ಸಂಗ್ರಹ ಚಿತ್ರ
Follow us
TV9 Web
| Updated By: guruganesh bhat

Updated on: Jun 20, 2021 | 5:25 PM

ಬೆಂಗಳೂರು: ವ್ಯಾಸಂಗ, ಉದ್ಯೋಗಗಳ ಸಲುವಾಗಿ ವಿದೇಶಕ್ಕೆ ತೆರಳುವವರಿಗೆ 28 ದಿನದಲ್ಲೇ 2ನೇ ಡೋಸ್ ಕೊವಿಶೀಲ್ಡ್ ಲಸಿಕೆ ನೀಡಲಾಗುತ್ತಿದೆ. ಜುಲೈ 22ರಿಂದ ಲಸಿಕೆ ವಿತರಣೆ ಆರಂಭವಾಗಲಿದೆ ಎಂದು ರಾಜ್ಯ ಕೊವಿಡ್‌ ಕಾರ್ಯಪಡೆ ಅಧ್ಯಕ್ಷರಾದ ಉಪ ಮುಖ್ಯಮಂತ್ರಿ ಡಾ.ಸಿ.ಎನ್. ಅಶ್ವತ್ಥ್​ ನಾರಾಯಣ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಬೆಂಗಳೂರು ವಿವಿ ಸೆಂಟ್ರಲ್‌ ಕಾಲೇಜು ಆವರಣದಲ್ಲಿ ವಿದೇಶಗಳಿಗೆ ತೆರಳುವವರಿಗೆ ಲಸಿಕೆ ವಿತರಿಸಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

ಈ ಮೊದಲೇ ಸೆಂಟ್ರಲ್‌ ಕಾಲೇಜ್‌ನಲ್ಲಿ ವಿದೇಶಕ್ಕೆ ತೆರಳುವ 1,500ಕ್ಕೂ ಹೆಚ್ಚು ವಿದ್ಯಾರ್ಥಿ/ ಉದ್ಯೋಗಿಗಳಿಗೆ ಮೊದಲ ಡೋಸ್‌ ಲಸಿಕೆ ಕೊಡಲಾಗಿದೆ. ಇದಕ್ಕಾಗಿ ಪಾಲಿಕೆಯ 8 ವಲಯಗಳ ಆಯುಕ್ತರನ್ನು ‘ಸಮರ್ಥ ಅಧಿಕಾರಿ’ಗಳನ್ನಾಗಿ (competent authority) ನೇಮಕ ಮಾಡಲಾಗಿದೆ. ಬೆಂಗಳೂರು ಬಿಬಿಎಂಪಿ ವ್ಯಾಪ್ತಿಯಲ್ಲಿ ಪೂರ್ವ ವಲಯದ ಆರೋಗ್ಯಾಧಿಕಾರಿಯನ್ನು ‘ಸಮರ್ಥ ಅಧಿಕಾರಿ’ ಎಂದು ಗುರುತಿಸಲಾಗಿದೆ. ವಿದೇಶಗಳಿಗೆ ಪಯಣಿಸುವ ಜನರಿಗೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ 28 ದಿನಗಳಲ್ಲೇ ಎರಡನೇ ಡೋಸ್‌ ನೀಡಲಾಗುವುದು ಎಂದು ಅವರು ತಿಳಿಸಿದ್ದಾರೆ.

ಲಸಿಕೆ ಕೇಂದ್ರಕ್ಕೆ ಬರುವ ಅರ್ಹ ಲಸಿಕಾಂಕ್ಷಿಗಳ ಸ್ವಯಂ ಘೋಷಣಾ ಪತ್ರ ಸೇರಿ ಇತರೆ ದಾಖಲೆಗಳನ್ನು ಪರಿಶೀಲಿಸಬೇಕು. ಲಸಿಕೆ ಪಡೆದ ದೃಢೀಕರಣ ಪತ್ರವನ್ನು ತಕ್ಷಣೇ ಆನ್‌ಲೈನ್‌ನಲ್ಲಿ ಅಪ್‌ಲೋಡ್‌ ಮಾಡಿಸಬೇಕು. ಈಗಾಗಲೇ ಮೊದಲ ಡೋಸ್‌ ಪಡೆದಿರುವವರು ತಮ್ಮ ಪಾಸ್‌ಪೋರ್ಟ್‌ ಸಂಖ್ಯೆಯನ್ನು ದಾಖಲು ಮಾಡಿರದಿದ್ದರೆ ಎರಡನೇ ಡೋಸ್‌ ಪಡೆಯಲು ಬರುವಾಗ ಕಡ್ಡಾಯವಾಗಿ ದಾಖಲಿಸಿಕೊಳ್ಳಬೇಕಾಗುತ್ತದೆ.

ಇದನ್ನೂ ಓದಿ: ಕೊವಿಡ್ 19ನಿಂದ ಮೃತಪಟ್ಟವರ ಕುಟುಂಬಕ್ಕೆ 4 ಲಕ್ಷ ರೂ.ಪರಿಹಾರ ಕೊಡಲು ಸಾಧ್ಯವೇ ಇಲ್ಲ: ಕೇಂದ್ರ ಸರ್ಕಾರದಿಂದ ಸುಪ್ರೀಂಕೋರ್ಟ್​ಗೆ ಅಫಿಡವಿಟ್​

ನಾಳೆ ಕೊವಿಡ್ ಲಸಿಕೆ ಮೇಳಕ್ಕೆ ಚಾಲನೆ; ಸಿಎಂ ಯಡಿಯೂರಪ್ಪ ಜತೆ ಜೆಪಿ ನಡ್ಡಾ ವಿಡಿಯೋ ಕಾನ್ಫರೆನ್ಸ್

(2nd dose covid vaccine for 28 days for migrants one who travel to foreign Delivery starts from July 22nd says DCM Dr CN Ashwath Narayan)

ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ರಾಹುಲ್- ಜೈಸ್ವಾಲ್ ಜೊತೆಯಾಟಕ್ಕೆ ರನ್ ಸಾಮ್ರಾಟನೇ ಫುಲ್ ಫಿದಾ
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕಾರು ಅಪಘಾತದಲ್ಲಿ ಜೀವ ಉಳಿಸಿದವರ ಮರೆಯದ ರಿಷಬ್ ಪಂತ್
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಕ್ಷೇತ್ರದ ಸಮಗ್ರ ಅಭಿವೃದ್ಧಿ ಕಡೆ ಯೋಗೇಶ್ವರ್ ಗಮನ ಹರಿಸಲಿದ್ದಾರೆ: ಶೀಲಾ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ಗ್ಯಾರಂಟಿ ಯೋಜನೆಗಳು ರಾಜ್ಯ ಉಪ ಚುನಾವಣೆಗಳಲ್ಲಿ ನಮ್ಮ ಕೈ ಹಿಡಿದಿವೆ: ಸಿಎಂ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
ರಾಜ್ಯ ಬಿಜೆಪಿ ನಾಯಕರನ್ನು ಪ್ರಧಾನಿ ಮೋದಿಯವರೇ ಸರಿಮಾಡಬೇಕು: ಕಾರ್ಯಕರ್ತ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
‘ಹೊರಗೆ ಕಳಿಸುತ್ತೇನೆ’ ನಗುತ್ತಲೇ ರಜತ್​ಗೆ ಎಚ್ಚರಿಕೆ ಕೊಟ್ಟ ಕಿಚ್ಚ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಮೂರನೇ ಸೋಲಿನಿಂದ ನಿಖಿಲ್ ಕುಮಾರಸ್ವಾಮಿ ಎದೆಗುಂದಬಾರದು: ಜಿಟಿ ದೇವೇಗೌಡ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಬೈ ಎಲೆಕ್ಷನ್ ಸೋಲು: TV ಎಸೆದು ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತ ಆಕ್ರೋಶ
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಯಡಿಯೂರಪ್ಪ ಒಂದೇ ಕಲ್ಲಿಂದ ಎರಡು ಹಕ್ಕಿ ಹೊಡೆದುರುಳಿಸಿದ್ದಾರೆ: ಯೋಗೇಶ್ವರ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್
ಬಿಜೆಪಿ ಹೀನಾಯ ಸೋಲಿಗೆ ಪೂಜ್ಯ ತಂದೆ, ಮಗ ಕಾರಣ: ಗುಡುಗಿದ ಯತ್ನಾಳ್